ಕೆಪಿಎಸ್‌ಸಿ ಅಧ್ಯಕ್ಷರಾಗಿ ಟಿ.ಶ್ಯಾಂಭಟ್ ನೇಮಕ

ಬೆಂಗಳೂರು, ಮೇ 18: ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ಹಾಗೂ ಬಿಡಿಎ ಆಯಕ್ತ ಟಿ.ಶ್ಯಾಂಭಟ್ ನೇಮಕಗೊಂಡಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿರುವ ಶ್ಯಾಂಭಟ್ ಈ ಹಿಂದೆ ಉಡುಪಿ ಜಿಲ್ಲಾಧಿಕಾರಿ, ಸಾರಿಗೆ ಇಲಾಖೆ ಆಯುಕ್ತ , ಕೆಐಎಡಿಬಿ ,ಮುಜರಾಯಿ ಇಲಾಖೆ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
ಟಿ.ಶ್ಯಾಂ ಭಟ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಗೆ ಆಯ್ಕೆಯನ್ನು ಅಂತಿಮಗೊಳಿಸಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಂಕಿತಕ್ಕಾಗಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Next Story





