Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಳಿ ಮಳೆಗೆ ಬಂಟ್ವಾಳ ತಾಲೂಕು ತತ್ತರ! :...

ಗಾಳಿ ಮಳೆಗೆ ಬಂಟ್ವಾಳ ತಾಲೂಕು ತತ್ತರ! : 2.31 ಕೋಟಿ ರೂ. ನಷ್ಟ

* 432 ಮನೆಗಳಿಗೆ ಹಾನಿ * 430 ವಿದ್ಯುತ್ ಕಂಬಗಳು ಧರೆಗೆ * 92 ಕೃಷಿ ಜಮೀನು ನಾಶ

ವಾರ್ತಾಭಾರತಿವಾರ್ತಾಭಾರತಿ18 May 2016 6:06 PM IST
share
ಗಾಳಿ ಮಳೆಗೆ ಬಂಟ್ವಾಳ ತಾಲೂಕು ತತ್ತರ! : 2.31 ಕೋಟಿ ರೂ. ನಷ್ಟ

ಬಂಟ್ವಾಳ, ಮೇ 18: ಮಂಗಳವಾರ ಸಂಜೆ 7 ಗಂಟೆಯ ಸುಮಾರಿಗೆ ಬೀಸಿದ ಭಾರೀ ಬಿರುಗಾಳಿ ಹಾಗೂ ಬಳಿಕ ಸುರಿದ ಮಳೆಗೆ ಬಂಟ್ವಾಳ ತಾಲೂಕು ತತ್ತರಿಸಿ ಹೋಗಿದ್ದು ತಾಲೂಕಿನಾದ್ಯಂತ ನೂರಾರು ಮನೆಗಳು, ಕೃಷಿ, ತೋಟಗಳಿಗೆ ಹಾಗೂ ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಅಲ್ಲದೆ ನೂರಾರು ವಿದ್ಯುತ್ ಕಂಬಗಳು ಧರೆಶಾಯಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಾಲೂಕಿನ ನರಿಕೊಂಬು, ಪಾಣೆಮಂಗಳೂರು, ಶಂಭೂರು, ಬಂಟ್ವಾಳ, ವಗ್ಗ, ಪೂಂಜಾಲಕಟ್ಟೆ, ಗೂಡಿನಬಳಿ, ಸಜಿಪ, ವಿಟ್ಲದ ಬೊಬ್ಬೆಕೇರಿ ಮೊದಲಾದೆಡೆ ಮರಗಳು ಮನೆಗಳ ಮೇಲೆ ಉರುಳಿ ಬಿದ್ದು ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. 110ಕ್ಕೂ ಹೆಚ್ಚು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿ ಸಂಭವಿಸಿದರೆ, 322ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. 92ಕ್ಕೂ ಹೆಚ್ಚು ಕೃಷಿ ಜಮೀನು ಬೆಳೆ ನಾಶ, 430ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಹಾನಿಗೊಂಡಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಕಚೇರಿ ತಿಳಿಸಿದೆ.

110 ಮನೆಗಳಿಗೆ ಸಂಭವಿಸಿದ ಪೂರ್ಣ ಪ್ರಮಾಣದ ಹಾನಿಯಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ನಷ್ಟ ಉಂಟಾದರೆ, 322 ಮನೆಗಳಿಗೆ ಸಂಭವಿಸಿದ ಭಾಗಶಃ ಹಾನಿಯಲ್ಲಿ 64 ಲಕ್ಷದ 40 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ತಿಳಿಸಿದ್ದಾರೆ. ಹಾಗೆಯೇ 92 ಕೃಷಿ ಜಮೀನಿಗೆ ಸಂಭವಿಸಿದ ಹಾನಿಯಲ್ಲಿ 5 ಲಕ್ಷ ರೂ. ನಷ್ಟ ಉಂಟಾದರೆ, 430 ವಿದ್ಯುತ್ ಕಂಬಗಳು ಧರೆಗುರುಳಿ 51 ಲಕ್ಷದ 60 ಸಾವಿರ ರೂ. ನಷ್ಟ ಉಂಟಾಗಿದ್ದು ಒಟ್ಟು ಮಂಗಳವಾರ ಸಂಜೆ ಸುರಿದ ಗಾಳಿ ಮಳೆ 2 ಕೋಟಿ 31 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಬಿ.ಸಿ.ರೋಡ್ - ಧರ್ಮಾಸ್ಥಳ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿ.ಸಿ.ರೋಡ್ - ಮಾಣಿ ರಾಷ್ಟ್ರೀಯ ಹೆದ್ದಾರಿಯ ನಾನಾ ಕಡೆಗಳಲ್ಲಿ ಮರಗಳು ಉರುಳಿಬಿದ್ದು ರಸ್ತೆ ತಡೆ ಉಂಟಾಗಿತು. ರಸ್ತೆ ತಡೆಯಿಂದ ಹಲವು ಹೊತ್ತು ಟ್ರಾಫಿಕ್ ಜಾಮ್ ಸಂಭವಿಸಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಹಾಗೆಯೇ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳು ಧರೆಗುರುಳಿದ ಕಾರಣ ತಾಲೂಕಿನಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಗರ ಪ್ರದೇಶದ ಕೆಲವೆಡೆ ಬುಧವಾರ ಮಧ್ಯಾಹ್ನದ ವೇಳೆ ವಿದ್ಯುತ್ ಮರು ಪೂರೈಕೆಯಾದರೆ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸಂಜೆವರೆಗೆ ವಿದ್ಯುತ್ ಪೂರೈಕೆ ಕಷ್ಟ ಸಾಧ್ಯವಾಗಿದೆ ಎಂದು ಮೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ.

ಗಾಳಿಗೆ ಮನೆ ಮೇಲೆ ಉರುಳಿಬಿದ್ದ ಮರಗಳನ್ನು ತೆರವುಗೊಳಿಸಲು ಕೆಲಸಗಾರರು ಸಿಗದ ಹಿನ್ನೆಲೆಯಲ್ಲಿ ತಾಲೂಕಿನ ಹಲವೆಡೆ ಮನೆಗಳ ಮೇಲೆ ಉರುಳಿ ಬಿದ್ದ ಮರಗಳು ಬುಧವಾರ ಸಂಜೆ ವರೆಗೆ ಹಾಗೆಯೇ ಇದೆ. ಬುಧವಾರ ರಾತ್ರಿಯೂ ಮಳೆ ಬಂದರೆ ಪರಿಸ್ಥಿತಿ ಇನ್ನಷ್ಟು ಹದೆಗೆಡುವ ಸಂಭವವಿದೆ. ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಏಕ ಕಾಲದಲ್ಲಿ ತಾಲೂಕಿನಾದ್ಯಂತ ನೂರಾರು ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ದುರಸ್ಥಿ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಬಿಡುವಿಲ್ಲದ ದುರಸ್ಥಿಕಾರ್ಯದಲ್ಲಿ ತೊಡಗಿದ್ದರೂ ಬುಧವಾರ ಸಂಜೆ ವರೆಗೂ ಗ್ರಾಮೀಣ ಭಾಗದಲ್ಲಿ ಸಂಪೂರ್ಣವಾಗಿ ವಿದ್ಯುತ್ ಪೂರೈಕೆಯಾಗಿಲ್ಲ.

       ನರಿಕೊಂಬು ಗ್ರಾಮವೊಂದರಲ್ಲೇ ಸುಮಾರು 60 ಕಂಬಗಳು ನೆಲಕ್ಕುರುಳಿದ್ದು, ತಾಲೂಕಿನ ಸಿದ್ದಕಟ್ಟೆ, ಬಂಟ್ವಾಳ, ವಗ್ಗ, ಪೊಳಲಿ, ಪಾಣೆಮಂಗಳೂರು, ಕಲ್ಲಡ್ಕ ಅಮ್ಟೂರು ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಮರಗಳು ವಿದ್ಯುತ್ ತಂತಿಗಳ ಮೇಲೆರಗಿ ಹಾನಿ ಸಂಭವಿಸಿದೆ. ಮೆಸ್ಕಾಂನ ವಿಟ್ಲ ವಿಭಾಗದಲ್ಲಿ 80 ಕಂಬಗಳು, ವಗ್ಗ ವಿಭಾಗದಲ್ಲಿ 150 ಕಂಬಗಳು ಹಾಗೂ ಮೆಲ್ಕಾರ್ ವಿಭಾಗದಲ್ಲಿ ಸುಮಾರು ಸುಮಾರು 200 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಬಿರುಗಾಳಿಗೆ ತತ್ತರಿಸಿದ ಪರಿಣಾಮ ತಾಲೂಕಿನ ಬಹುತೇಕ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿಗಳು ತಡರಾತ್ರಿಯಿಂದ ಮರಗಳ ತೆರವು ಹಾಗೂ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ವೆಡೆಗಳಲ್ಲಿ ಇಂದು ಬೆಳಗ್ಗಿನ ಬಳಿಕ ದುರಸ್ತಿ ಕಾರ್ಯ ನಡೆದಿದೆ. ನಗರ ಪ್ರದೇಶಗಳಲ್ಲಿ ಬುಧವಾರ ಸಂಜೆಯ ವೇಳೆಗೆ ವಿದ್ಯುತ್ ದುರಸ್ತಿಯಾಗಿದ್ದು, ಅತೀವ ನಷ್ಟ ಸಂಭವಿಸಿರುವ ನರಿಕೊಂಬು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕಕ್ಕೆ ಇನ್ನೊಂದು ದಿನ ಬೇಕಾಗಬಹುದು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

----------------------------------------------------------------------------------------------------------------

 ಮಂಗಳವಾರ ರಾತ್ರಿಯ ಬಿರುಗಾಳಿಗೆ ಸಂಪೂರ್ಣ ಹಾನಿಗೊಳಗಾದ ಮನೆಗಳ ನಿರಾಶ್ರಿತರಿಗೆ ಗಂಜಿ  ಕೇಂದ್ರದಂತಹ ಸೂಕ್ತ ವಸತಿ ವ್ಯವಸ್ಥೆ ಸೇರಿದಂತೆ, ಪರಿಹಾರ ಮೊತ್ತವನ್ನು ತಕ್ಷಣ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಸಹಾಯಕ ಆಯುಕ್ತ ಡಾ.ಅಶೋಕ್ ಸೂಚನೆ ನೀಡಿದ್ದಾರೆ.

  ಬುಧವಾರ ಸಂಜೆ ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್ ವೈ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾಕೃತಿಕ ವಿಕೋಪ ಕುರಿತ ವಿಶೇಷ ಮುಂಜಾಗ್ರತಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.

    ಮಂಗಳವಾರ ರಾತ್ರಿ 7 ಗಂಟೆಯ ಸುಮಾರಿಗೆ ಬೀಸಿದ ಗಾಳಿ ಮಳೆಗೆ ತಾಲೂಕಿನಾದ್ಯಂತ ಅಪಾರ ನಷ್ಟ ಉಂಟಾಗಿದೆ, ಆದರೆ ಈ ವೇಳೆ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಿಲ್ಲ , ಹಾನಿಗೊಳಗಾದ ಪ್ರದೇಶಗಳಿಗೆ ತುರ್ತು ಭೇಟಿ ನೀಡಿಲ್ಲ ಎಂದು ಗ್ರಾಮಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಂದ ತೊಡಗಿ, ತಾಲೂಕು ಮಟ್ಟದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಹಾಯಕ ಆಯುಕ್ತರು, ಹಾನಿಗೊಳಗಾದವರಿಗೆ ತಕ್ಷಣಕ್ಕೆ ಬೇಕಾಗಿರುವುದು ಸಾಂತ್ವಾನ, ಸರ್ಕಾರ, ಇಲಾಖೆ ಅವರ ನೆರವಿಗೆ ಇದೆ ಎನ್ನುವ ಭರವಸೆ , ಈ ಮನಸ್ಥಿತಿಯಲ್ಲಿ ಕೆಸ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

 ಈ ಬಾರಿ ಮಳೆಯ ಅಬ್ಬರ ಜೋರು ಎಂಬ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ, ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಂಡತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

     ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ತಹಶೀಲ್ದಾರ್ ಪುರಂದರ ಹೆಗ್ಡೆ,ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಫ್ರಿಯನ್ ಮಿರಾಂದ, ಪುರಸಭಾ ಮುಖ್ಯಾಧಿಕಾರಿ ಸುಧಾಕರ್ ಮೊದಲಾದವರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X