ಐಪಿಎಲ್‌ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲೆ

ಬೆಂಗಳೂರು, ಮೆ 19: ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ 4ನೆ ಶತಕ ದಾಖಲಿಸಿದ ಮೊದಲ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ.
ಕೈಗೆ ಗಾಯವಾಗಿದ್ದರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳದ ಕೊಹ್ಲಿ ೫೦ ಎಸೆತಗಳಲ್ಲಿ 113 ರನ್ ಗಳಿಸಿ 4,002 ರನ್ ಪೂರೈಸುವ ಮೂಲಕ ಐಪಿಎಲ್‌ನಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರನಾಗಿ ದಾಖಲೆ ಬರೆದರು.
ಸುರೇಶ್ ರೈನಾ (3,985) ರನ್ ದಾಖಲೆಯನ್ನು ಹಿಂದಿಕ್ಕಿದರು. ಅವರು ವಿಂಡೀಸ್‌ನ ಕ್ರಿಸ್ ಗೇಲ್ (73) ಜೊತೆ ಮೊದಲ ವಿಕೆಟ್‌ಗೆ 147 ರನ್‌ಗಳ ಜೊತೆಯಾಟ ನೀಡಿದ್ದರು.
ಮಳೆಯಿಂದಾಗಿ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಕೊಹ್ಲಿ ಶತಕದ ನೆರವಿನಲ್ಲಿ ಬೆಂಗಳೂರು 15 ಓವರ್‌ಗಳಲ್ಲಿ 3ವಿಕೆಟ್ ನಷ್ಟದಲ್ಲಿ 211 ರನ್ ಗಳಿಸಿತ್ತು.
Next Story





