Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ 27ರಂದು ಬೆಂಗಳೂರಿನಲ್ಲಿ ಸಮಾವೇಶ

ಮೇ 27ರಂದು ಬೆಂಗಳೂರಿನಲ್ಲಿ ಸಮಾವೇಶ

ರಾಜ್ಯ-ಕೇಂದ್ರ ಸರಕಾರಗಳ ರೈತ ವಿರೋಧಿ ನೀತಿ

ವಾರ್ತಾಭಾರತಿವಾರ್ತಾಭಾರತಿ19 May 2016 10:32 PM IST
share

ಶಿವಮೊಗ್ಗ, ಮೇ 19: ರಾಜ್ಯ ಹಾಗೂ ಕೇಂದ್ರ ಸರಕಾರಗಳ ರೈತ ವಿರೋಧಿ ನೀತಿಯನ್ನು ಖಂಡಿಸಿ ಮೇ 27ರಂದು ಬೆಳಗ್ಗೆ 11:30 ಕ್ಕೆ ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮಾವೇಶದಲ್ಲಿ ರೈತರ ಆತ್ಮಹತ್ಯೆ ತಡೆಯುವಲ್ಲಿ ಸರಕಾರ ವಿಫಲವಾಗಿರುವುದು, ಬರಪರಿಹಾರದಲ್ಲಿ ಎಡವಿರುವುದು, ನೀರಾವರಿ ಯೋಜನೆಗಳು ಜಾರಿಯಾಗದಿರುವುದು, ರೈತರ ಸಾಲ ಮನ್ನಾ ಮಾಡುವುದು, ಉದ್ಯೋಗ ಖಾತ್ರಿ ಯೋಜನೆಯನ್ನು ರೈತರ ಕುಟುಂಬಕ್ಕೆ ನೀಡುವುದು, ಬೆಳೆಗಳಿಗೆ ಪರಿಷ್ಕೃತ ಬೆಲೆ ನಿಗದಿ ಮಾಡುವುದು, ಕಬ್ಬಿನ ಬಾಕಿ ಕೂಡಲೇ ಬಿಡುಗಡೆಗೊಳಿಸುವುದು, ಸುಧಾರಿತ ಕೃಷಿ ನೀತಿ ಜಾರಿಗೊಳಿಸುವುದರ ಬಗ್ಗೆ ಸರಕಾರಗಳನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ. ಮಾರ್ಗಸೂಚಿ ಬದಲಾಯಿಸಲಿ:

ಬರಗಾಲ ಘೋಷಣೆಗೆ ಈಗಿರುವ ಮಾರ್ಗಸೂಚಿಯನ್ನು ಬದಲಿಸಬೇಕು. ಜಿಲ್ಲೆ ಮತ್ತು ರಾಜ್ಯದಲ್ಲಿ ಇನ್ನೂ ಹಲವು ತಾಲೂಕುಗಳು ಬರದ ದವಡೆಗೆ ಸಿಲುಕಿದ್ದು, ಅವುಗಳನ್ನು ಬರಗಾಲಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯಿಸಿದರು. ಬರಗಾಲ ಪ್ರದೇಶದ ರೈತರಿಗೆ ನೀಡುವ ಪರಿಹಾರದ ಮಾರ್ಗಸೂಚಿಯೂ ಬದಲಾಗಬೇಕಿದೆ. ಎಷ್ಟೇ ಬೆಳೆ ನಷ್ಟವಾದರೂ ಒಂದು ಹೆಕ್ಟೇರ್‌ವರೆಗೆ ಮಾತ್ರ ಪರಿಹಾರ ನೀಡಲಾಗುತ್ತಿದೆ. ಇದನ್ನು ಬಿಟ್ಟು ಪೂರ್ಣ ಜಮೀನಿನ ಬೆಳೆಗೆ ಪರಿಹಾರ ಕೊಡುವಂತಾಗಬೇಕೆಂದು ಆಗ್ರಹಿಸಿದರು.

 ಜಿಲ್ಲೆಯಲ್ಲಿ ಸೊರಬ ತಾಲೂಕೊಂದರಲ್ಲೇ 12,900 ಹೆಕ್ಟೇರ್ ಬೆಳೆ ನಷ್ಟವಾಗಿದೆ. 878 ಲಕ್ಷ ರೂ. ಬೆಳೆ ನಷ್ಟದ ಪರಿಹಾರ ಹಣ ಬಿಡುಗಡೆಯಾಗಬೇಕಿತ್ತು. ಆದರೆ 184 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. 6,245 ಜನರಿಗೆ ಶೇ. 68ರಷ್ಟು ಹಣ ಕೊಟ್ಟಿದ್ದಾರೆ. ರಾಜ್ಯ ಮತ್ತು ಕೇಂದ್ರದ ಅಧಿಕಾರಿಗಳು ಮತ್ತು ಸಚಿವರು ಬರಗಾಲಪೀಡಿತ ಪ್ರದೇಶಗಳ ಪ್ರವಾಸ ಮಾಡಿದರೆ ವಿನಾ ಹಣ ಬಿಡುಗಡೆ ಮಾಡಿಸಲು ಯಾರೂ ಮುಂದಾಗಿಲ್ಲ. ಒಬ್ಬರ ಮೇಲೆ ಒಬ್ಬರು ಆರೋಪ ಹೊರಿಸುತ್ತ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ಆರೋಪಿಸಿದರು.

 ಗೋಷ್ಠಿಯಲ್ಲಿ ಮುಖಂಡರಾದ ಡಾ. ಬಿ.ಎಂ.ಚಿಕ್ಕಸ್ವಾಮಿ, ರಾಜ್ಯ ಕಾರ್ಯದರ್ಶಿ ಹಿಟ್ಟೂರು ರಾಜು, ಕೆ.ರಾಘವೇಂದ್ರ, ಹಸಿರುಸೇನೆಯ ಜಿಲ್ಲಾಧ್ಯಕ್ಷ ಟಿ.ಎಂ.ಚಂದ್ರಪ್ಪ, ಪದಾಧಿಕಾರಿಗಳಾದ ಎಸ್.ಶಿವಮೂರ್ತಿ, ಇ.ಬಿ.ಜಗದೀಶ, ಡಿ.ಎಚ್.ರಾಮಚಂದ್ರಪ್ಪ, ಜಿ.ಎನ್.ಪಂಚಾಕ್ಷರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X