Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸರ ಅತಿಥಿಯಾದ ನಕಲಿ ಪತ್ರಕರ್ತ

ಪೊಲೀಸರ ಅತಿಥಿಯಾದ ನಕಲಿ ಪತ್ರಕರ್ತ

ರಾಜಕಾರಣಿ, ಅಧಿಕಾರಿಗಳಿಗೆ ಯಾಮಾರಿಸಿದ್ದ

ವಾರ್ತಾಭಾರತಿವಾರ್ತಾಭಾರತಿ19 May 2016 10:44 PM IST
share

ಶಿವಮೊಗ್ಗ,ಮೇ19: ಖಾಸಗಿ ವಾಹಿನಿಯೊಂದರ ವರದಿಗಾರನೆಂದು ಹೇಳಿಕೊಂಡು ಪ್ರಮುಖ ರಾಜಕಾರಣಿಗಳು, ಅಧಿಕಾರಿಗಳಿಗೆ ಯಾಮಾರಿಸಿದ್ದ ನಕಲಿ ಪತ್ರಕರ್ತನೋರ್ವ ಕೊನೆಗೂ ಪೊಲೀಸರ ಅತಿಥಿಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಮೂಲದ ಪ್ರಮೋದ್ ಕುಮಾರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನಷ್ಟೆ ಆತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ನಕಲಿ: ಕಳೆದ ಕೆಲ ದಿನಗಳಿಂದ ಆರೋಪಿಯು ಶಿವಮೊಗ್ಗ ಹಾಗೂ ಜಿಲ್ಲೆಯ ವಿವಿಧೆಡೆ ಬಾಡಿಗೆ ಇನ್ನೋವಾ ಕಾರಿನಲ್ಲಿ ಓಡಾಡಿಕೊಂಡಿದ್ದ. ಕಾರಿನ ಗಾಜಿನ ಮೇಲೆ ಖಾಸಗಿ ನ್ಯೂಸ್ ಚಾನಲ್ ನ ಸ್ಟಿಕ್ಕರ್‌ನ ಪ್ರೆಸ್ ಬೋರ್ಡ್ ಹಾಕಿಕೊಂಡಿದ್ದ. ಸರಕಾರಿ ಕಚೇರಿ ಹಾಗೂ ರಾಜಕಾರಣಿಗಳ ಮನೆಗೆ ಎಡತಾಕುತ್ತಿದ್ದ. ಇತ್ತೀಚೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್‌ರವರನ್ನು ಭೇಟಿಯಾಗಿ ತಾನು ಬೆಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಇನ್‌ಪುಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಆರೋಪಿಯು ತೀರ್ಥಹಳ್ಳಿ ಪೊಲೀಸ್ ಅಧಿಕಾರಿಗಳಿಗೂ ಕೂಡ ವರದಿಗಾರನೆಂದು ಹೇಳಿ ಪ್ರಭಾವ ಬೀರಲು ಮುಂದಾಗಿದ್ದ. ಈತನ ವರ್ತನೆಯ ಬಗ್ಗೆ ಅನುಮಾನಗೊಂಡ ಪೊಲೀಸರೊಬ್ಬರು ಆತ ಹೇಳಿದ್ದ ಖಾಸಗಿ ಸುದ್ದಿ ವಾಹಿನಿಯ ಸ್ಥಳೀಯ ವರದಿಗಾರನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಸ್ಥಳೀಯ ವರದಿಗಾರ ಬೆಂಗಳೂರಿನ ಕಚೇರಿಗೆ ಫೋನ್ ಮಾಡಿ ವಿಚಾರಣೆ ನಡೆಸಿದ್ದಾರೆ. ಆ ರೀತಿಯ ಯಾವುದೇ ವ್ಯಕ್ತಿ ಕಚೇರಿಯಲ್ಲಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು, ನಕಲಿ ಪತ್ರಕರ್ತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಶಿವಮೊಗ್ಗ ನಗರದಲ್ಲಿ ಬಾಡಿಗೆ ಇನ್ನೋವಾ ಕಾರಿನಲ್ಲಿ ಓಡಾಡಿಕೊಂಡಿದ್ದ ನಕಲಿ ಪತ್ರಕರ್ತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಆತನ ವಂಚನಾ ವಿವರಗಳ ಬಗ್ಗೆ ಇನ್ನಷ್ಟೆ ಮಾಹಿತಿಗಳು ತಿಳಿದುಬರಬೇಕಾಗಿದೆ.

ಪ್ರೆಸ್ ಬೋರ್ಡ್ ದುರ್ಬಳಕೆ ಅವ್ಯಾಹತ ಎಚ್ಚೆತ್ತುಕೊಳ್ಳುವುದೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ?

ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚುತ್ತಿದ್ದು, ಪ್ರೆಸ್ ಬೋರ್ಡ್ ಬರಹವಿರುವ ಬೈಕ್, ಕಾರುಗಳ ಸಂಖ್ಯೆ ಹೆಚ್ಚಾಗಿದೆ. ಪತ್ರಕರ್ತರಲ್ಲದವರು ವಾಹನಗಳ ಮೇಲೆ ಪ್ರೆಸ್ ಎಂದು ಬರೆಯಿಸಿಕೊಂಡು ಓಡಾಡುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರೆಸ್ ಎಂದು ಬರೆಯಿಸಿದ್ದ ವಾಹನಗಳನ್ನು ಅಕ್ರಮ ಚಟುವಟಿಕೆಗಳಿಗೆ ಬಳಕೆ ಮಾಡಿದ್ದ ಘಟನೆಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರೆಸ್ ಬೋರ್ಡ್ ದುರ್ಬಳಕೆ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಪತ್ರಕರ್ತರು ಒತ್ತಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಅಧಿಕಾರಿ ವರ್ಗ ಮಾತ್ರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಸಂಪೂರ್ಣ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಸಾಮಾನ್ಯವಾಗಿ ಪ್ರೆಸ್ ಎಂದು ಬರೆಯಿಸಿದ ಬೈಕ್ ಹಾಗೂ ಕಾರುಗಳನ್ನು ಪೊಲೀಸರು ಹಿಡಿಯಲು ಮುಂದಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೆಲವರು ತಮ್ಮ ವಾಹನಗಳ ಮೇಲೆ ಪ್ರೆಸ್ ಎಂದು ಬರೆಯಿಸಿಕೊಂಡು ಓಡಾಡುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಕೆಲ ಕಿಡಿಗೇಡಿಗಳು ತಮ್ಮ ವಾಹನಗಳಿಗೆ ಪ್ರೆಸ್ ಎಂದು ಬರೆಯಿಸಿ ಕಾನೂನುಬಾಹಿರ ಕೃತ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ಮಾಹಿತಿಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X