ಸಚಿವ ಆಂಜನೇಯ ಅನಗತ್ಯ ಹೇಳಿಕೆ ನೀಡಬಾರದು: .ಪರಮೇಶ್ವರ್
ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ವೇಶ್ಯಾವಾಟಿಕೆ ಅಡ್ಡೆಗೆ ಹೋಲಿಕೆ ಆರೋಪ

ಬೆಂಗಳೂರು, ಮೇ 19: ಖಾಸಗಿ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿಯ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಆಂಜನೇಯ ಅನಗತ್ಯ ಹೇಳಿಕೆ ನೀಡಬಾರದೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಕಾನೂನು ಬಾಹಿರವಾಗಿ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿದ್ದರೆ, ಆ ಕುರಿತು ಕಾನೂನು ಕ್ರಮಕ್ಕೆ ಸೂಚನೆ ನೀಡಿದೆ. ಆದರೆ, ಅನಗತ್ಯವಾದ, ಮುಜುಗರಕ್ಕೆ ಈಡಾಗುವಂತಹ ಹೇಳಿಕೆಯನ್ನು ನೀಡಬಾರದು. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ರೀತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಹಲವು ಮಠಗಳು ಶಿಕ್ಷಣವನ್ನು ಸಮಾಜ ಸೇವೆಯೆಂದೇ ಭಾವಿಸಿ, ಉಚಿತ ಶಿಕ್ಷಣ ನೀಡುತ್ತಿವೆ. ಹೀಗಾಗಿ ಸಚಿವ ಎಚ್.ಆಂಜನೇಯ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ವೇಶ್ಯಾವಾಟಿಕೆ ಅಡ್ಡೆಗಳಿಗೆ ಹೋಲಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಿಸಿದರು.
Next Story





