ಕಾಂಗ್ರೆಸ್ ಸೋಲಿಗೆ ರಾಹುಲ್ ಹೊಣೆಯಲ್ಲ: ಖರ್ಗೆ

ಬೆಂಗಳೂರು, ಮೇ 19: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಮ್ಮ ನಿರೀಕ್ಷೆ ಹುಸಿಯಾಗಿದ್ದು, ಕೇರಳ ಮತ್ತು ಅಸ್ಸಾಂಗಳಲ್ಲಿ ಮರಳಿ ಅಧಿಕಾರ ಪಡೆಯುವ ನಿರೀಕ್ಷೆಯಿತ್ತು. ಆದರೆ, ಪಕ್ಷಕ್ಕೆ ಸೋಲಾಗಿದೆ. ಸೋಲು-ಗೆಲುವು ಸಾಮಾನ್ಯ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಗುರುವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಟ್ಟಿದ್ದು, ಸೋಲು-ಗೆಲುವು ಸಾಮಾನ್ಯ. ಸೋಲಿನಿಂದ ಹತಾಶರಾಗುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಸೋಲಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಯವರನ್ನು ಹೊಣೆ ಮಾಡುವುದು ಸರಿಯಲ್ಲ ಎಂದರು.
‘ಕಾಂಗ್ರೆಸ್ ಮುಕ್ತ ಭಾರತ’ ನಿರ್ಮಿಸುವ ಬಿಜೆಪಿ ಹೇಳಿಕೆಗೂ ಕಾಂಗ್ರೆಸ್ ಸೋಲಿಗೂ‘ ಕಾಗೆ ಕೂರುವುದಕ್ಕೂ ಟೊಂಗೆ ಮುರಿಯುವುದಕ್ಕೂ ಸರಿಯಾಯಿತು’ ಎಂಬಂತಾಗಿದೆ ಎಂದ ಅವರು, ಪಕ್ಷದ ಸೋಲಿನ ಬಗ್ಗೆ ಕಾಂಗ್ರೆಸ್ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದರು.
Next Story





