ಎಲಿಮಿನೇಟರ್, 2ನೆ ಕ್ವಾಲಿಫೈಯರ್ ಪಂದ್ಯಕ್ಕೆ ಆನ್‌ಲೈನ್ ಟಿಕೆಟ್ ಮಾರಾಟ ಆರಂಭ
ಹೊಸದಿಲ್ಲಿ, ಮೇ 19: ಇಲ್ಲಿನ ಫಿರೋಝ್ ಷಾ ಕೋಟ್ಲಾ ಸ್ಟೇಡಿಯಂನ ಆತಿಥ್ಯದಲ್ಲಿ ನಡೆಯಲಿರುವ ಐಪಿಎಲ್‌ನ ಎರಡನೆ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಸುತ್ತಿನ ಪಂದ್ಯಗಳ ಟಿಕೆಟ್ ಮಾರಾಟ ಪ್ರಕ್ರಿಯೆ ಗುರುವಾರ ಸಂಜೆ ಇಲ್ಲಿ ಆರಂಭವಾಗಿದೆ.
ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ರಾತ್ರಿ 8 ರಿಂದ ಲಭ್ಯವಾಗಲಿದೆ. ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಹಾಗೂ ಎರಡನೆ ಸ್ಥಾನ ಪಡೆಯಲಿರುವ ತಂಡ ಮೇ 24 ರಂದು ಬೆಂಗಳೂರಿನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಆಡುತ್ತವೆ.
ಮೇ 25 ರಂದು ಮೂರನೆ ಹಾಗೂ ನಾಲ್ಕನೆ ಸ್ಥಾನ ಪಡೆಯಲಿರುವ ತಂಡಗಳ ನಡುವೆ ಎಲಿಮಿನೇಟರ್ ಪಂದ್ಯ ನಡೆಯುವುದು.
ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್‌ನಲ್ಲಿ ಜಯ ಸಾಧಿಸಿದ ತಂಡಗಳ ನಡುವೆ ಮೇ 27 ರಂದು ಹೊಸದಿಲ್ಲಿಯಲ್ಲಿ ಎರಡನೆ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೇ 29 ರಂದು ಬೆಂಗಳೂರಿನಲ್ಲಿ ಐಪಿಎಲ್‌ನ ಫೈನಲ್ ಪಂದ್ಯ ನಡೆಯುವುದು
Next Story





