Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅವನಿಂದ ಒಂದು ಕಡ್ಡಿ ಮುರಿಯಲೂ...

ಅವನಿಂದ ಒಂದು ಕಡ್ಡಿ ಮುರಿಯಲೂ ಆಗುವುದಿಲ್ಲ, ಭಯೋತ್ಪಾದಕ ಹೇಗಾದ?: ಬಂಧಿತನ ಮಾವನ ಪ್ರಶ್ನೆ

ಭಟ್ಕಳ ಅಬ್ದುಲ್ ವಾಹಿದ್ ಬಂಧನ

ವಾರ್ತಾಭಾರತಿವಾರ್ತಾಭಾರತಿ20 May 2016 8:04 PM IST
share
ಅವನಿಂದ ಒಂದು ಕಡ್ಡಿ ಮುರಿಯಲೂ ಆಗುವುದಿಲ್ಲ, ಭಯೋತ್ಪಾದಕ ಹೇಗಾದ?: ಬಂಧಿತನ ಮಾವನ ಪ್ರಶ್ನೆ

ಭಟ್ಕಳ, ಮೇ 20: ಕಳೆದ ಆರೇಳು ವರ್ಷಗಳಿಂದ ದುಬೈಯಲ್ಲಿ ಕೆಲಸ ಮಾಡಿಕೊಂಡಿದ್ದ ಭಟ್ಕಳ ಮೂಲದ ಅಬ್ದುಲ್ ವಾಹಿದ್ ಸಿದ್ದಿಬಾಪನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ರಾತ್ರಿ ದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.

ಈ ಕುರಿತು ವರದಿಯಾದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಭಟ್ಕಳದ ಉಮರ್ ಸ್ಟ್ರೀಟ್‌ನಲ್ಲಿರುವ ಬಂಧಿತನ ಮಾವ ಕೋಲಾ ಮನ್ಸೂರ್‌ರನ್ನು ಸಂಪರ್ಕಿಸಿದಾಗ ಬಂಧನದ ಬಗ್ಗೆ ಮಾಹಿತಿ ನೀಡಿದ್ದು, ‘ಅವನಿಂದ ಒಂದು ಕಡ್ಡಿ ಮುರಿಯಲೂ ಆಗುವುದಿಲ್ಲ,  ಭಯೋತ್ಪಾದಕ ಹೇಗಾದ? ಎಂದು ಪ್ರಶ್ನಿಸಿದರು.

ಭಟ್ಕಳದ ಮಗ್ದೂಮ್ ಕಾಲನಿಯ ಮಸೀದಿಯೊಂದರಲ್ಲಿ ಇಮಾಮ್ ಆಗಿ ಜೀವನ ಸಾಗಿಸುತ್ತಿದ್ದ ಅಬ್ದುಲ್ ವಾಹಿದ್, ಇಲ್ಲಿನ ಮಸೀದಿ ರಾಜಕೀಯದಲ್ಲಿ ಕಲಹ ಏರ್ಪಟ್ಟಾಗ ಭಟ್ಕಳವನ್ನು ಬಿಟ್ಟು ದುಬೈಗೆ ಉದ್ಯೋಗವನ್ನು ಅರಸಿ ಹೋಗಿದ್ದು, ಅಲ್ಲಿ ಕೆಲವು ವರ್ಷ ಕೆಲಸ ಮಾಡಿ ಭಟ್ಕಳಕ್ಕೆ ಬಂದಿದ್ದರು.

ಆದರೆ ಮಸೀದಿಯಲ್ಲಿ ಉಂಟಾದ ಕಲಹವು ವೈಯಕ್ತಿಕ ದ್ವೇಷದಿಂದ ಕೆಲವರು ಅಬ್ದುಲ್ ವಾಹಿದ್‌ನ ವಿರುದ್ಧ ಇಲ್ಲಿನ ಇಂಟಲಿಜೆನ್ಸಿ ಅಧಿಕಾರಿಯೊಬ್ಬರಿಗೆ ಸುಳ್ಳು ದೂರು ನೀಡಿದ್ದಾರೆ ಎಂದು ಅವರು ಆರೋಪಿಸಿದರು.

ತನ್ನ ಮನೆ ಬಾಡಿಗೆ ಕಟ್ಟಲು, ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸ ನೀಡಲು, ತನ್ನ ಸ್ವಂತ ಪತ್ನಿಗೆ ಹೊಟ್ಟೆ ತುಂಬ ಊಟ ಹಾಕಲು ಗತಿಯಿಲ್ಲದವರು ಇಂಡಿಯನ್ ಮುಜಾಹಿದ್ದೀನ್‌ಗೆ ಹಣ ಕಳಿಸುತ್ತಿದ್ದ ಎಂಬ ಮಾಧ್ಯಮ ವರದಿಗಳಿಂದ ತನಗೆ ನಗು ಬರುತ್ತಿದ್ದೆ. ಆತನ ವಿರುದ್ಧ ವೈಯುಕ್ತಿಕ ದ್ವೇಷ ಸಾಧನೆಗೆ ಮಾಡಿದ ಸಣ್ಣ ತಪ್ಪಿನಿಂದಾಗಿ ಇಂದು ಒಂದು ಕುಟುಂಬ ಬೀದಿಪಾಲಾದಂತಾಗಿದೆ ಎಂದು ಹೇಳಿದರು.

ಆತನ ಪರ ಕೋರ್ಟ್ ಮೆಟ್ಟಿಲು ಹತ್ತಲೂ ನಮ್ಮಲ್ಲಿ ಹಣವಿಲ್ಲ. ಇಂತಹ ವ್ಯಕ್ತಿಗೆ ಈ ರೀತಿಯ ಸ್ಥಿತಿ ಬಂದೆರಗಿರುವುದು ನಿಜಕ್ಕೂ ಶೋಚನೀಯ ಎಂದು ಹೇಳಿ ಕಣ್ಣೊರೆಸಿಕೊಂಡ ಮನ್ಸೂರ್ ನಮಗೊದಗಿದ ಸ್ಥಿತಿ ಮತ್ತಾರಿಗೂ ಬಾರದಿರಲಿ ಎಂದರು.

ಗುರುವಾರ ರಾತ್ರಿ ಯಾರೋ ತನ್ನ ಮುಬೈಲ್‌ಗೆ ಕರೆ ಮಾಡಿ ದಿಲ್ಲಿಯಲ್ಲಿ ನಿಮ್ಮ ಅಬ್ದುಲ್ ವಾಹಿದ್‌ನ್ನು ಬಂಧಿಸಲಾಗಿದೆ ಎಂದಷ್ಟೆ ಹೇಳಿ ಕಾಲ್‌ಕಟ್ ಮಾಡಿದರು. ಆತನ ಮೇಲೆ ಯಾವು ಪ್ರಕರಣ ದಾಖಲಿಸಲಾಗಿದೆ ಎನ್ನುವುದು ತನಗೆ ತಿಳಿಯದು ಎಂದು ಮಾಧ್ಯಮದೊಂದಿಗೆ ತಮ್ಮ ಅಳಲನ್ನು ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X