Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬರಗಾಲದ ನಡುವೆಯೂ ವಿದ್ಯುತ್ ಸಮಸ್ಯೆ...

ಬರಗಾಲದ ನಡುವೆಯೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಯತ್ನ: ಸಚಿವ ಡಿಕೆಶಿ

ಕ್ಯಾಂಪ್ಕೊ ವಿದ್ಯುತ್ ಉಪಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 May 2016 9:19 PM IST
share
ಬರಗಾಲದ ನಡುವೆಯೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಯತ್ನ: ಸಚಿವ ಡಿಕೆಶಿ

ಪುತ್ತೂರು, ಮೇ 20: ರಾಜ್ಯದಲ್ಲಿ ಈ ಬಾರಿ ಉಂಟಾದ ಬರಗಾಲದ ನಡುವೆಯೂ ವಿದ್ಯುತ್ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ ಪರಿಹರಿಸಲಾಗಿದೆ. ವಿದ್ಯುತ್ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ಪಾದನೆಯ ಪ್ರಯತ್ನಗಳನ್ನು ಹಿಂದಿನ ಅವಧಿಯಲ್ಲಿ ಮಾಡಿಲ್ಲದ ಕಾರಣ ಇದೊಂದು ಸವಾಲಿನ ಕ್ಷೇತ್ರವಾಗಿ ಪರಿಣಮಿಸಿದೆ ಎಂದು ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅವರು ಶುಕ್ರವಾರ ಮಂಗಳೂರು ವಿದ್ಯುಚ್ಛ್ಚಕ್ತಿ ಸರಬರಾಜು ಕಂಪೆನಿ ವತಿಯಿಂದ ಪುತ್ತೂರಿನ ಕ್ಯಾಂಪ್ಕೊ ಆವರಣದಲ್ಲಿ ಆರಂಭಿಸಲಾದ 33/22 ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಸೋಲಾರ್ ಮೂಲಕ 5ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದ್ದು, ಈಗಾಗಲೇ ಪಾವಗಡದಲ್ಲಿ 2ಸಾವಿರ ಮೆ.ವ್ಯಾಟ್‌ನ ಸೋಲಾರ್ ಪಾರ್ಕ್ ನಿರ್ಮಾಣ ಕಾರ್ಯವನ್ನು ಕೇಂದ್ರ ಸರಕಾರದ ನೆರವಿನೊಂದಿಗೆ ಮಾಡಲಾಗುವುದು. ಉಳಿದಂತೆ ಪ್ರತಿಯೊಂದು ತಾಲೂಕಿನಲ್ಲಿ ಸೋಲಾರ್ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಸೋಲಾರ್ ಕೇಂದ್ರ ನಿರ್ಮಾಣಗೊಳಿಸಲು ಅವಕಾಶವಿದ್ದಲ್ಲಿ ಉಸ್ತುವಾರಿ ಸಚಿವರ ಸಹಕಾರದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮಾತನಾಡಿ, ಮೆಸ್ಕಾಂ ರಚನೆಗೊಂಡ ಬಳಿಕ ಅನೇಕ ಉತ್ತಮ ಬದಲಾವಣೆಗಳಾಗಿದ್ದು, ಹಲವಾರು ಉಪಕೇಂದ್ರಗಳಾಗಿವೆ ಹಾಗೂ ಇಲಾಖೆಯ ದಕ್ಷತೆ ಹೆಚ್ಚಾಗಿದೆ. ಮಂಗಳೂರು ಬಂಟ್ವಾಳದ ನಡುವೆ 220 ಕೆ.ವಿ. ರಿಸೀವರ್ ನಿರ್ಮಾಣಗೊಂಡಲ್ಲಿ ಜಿಲ್ಲೆಯ ಬಹುತೇಕ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರು ಪ್ರಯತ್ನ ನಡೆಸಬೇಕು ಎಂದರು.

ವಿದ್ಯುತ್ ಲೈನ್ ಆಗಬೇಕಾಗಿರುವ ಸಂದರ್ಭದಲ್ಲಿ ಆ ಭಾಗದ ರೈತರ ಜಮೀನು ವಶಪಡಿಸಿಕೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗಿದೆ. ಇಂತಹ ಕಾರ್ಯಗಳಿಗೆ ನಾಗರಿಕರು ಸಹಕಾರ ನೀಡಬೇಕು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಸಾಕಷ್ಟು ವಿದ್ಯುತ್ ಕೊರತೆಗಳಿದ್ದು, ಮಾಡಾವು 110 ಕೆ.ವಿ ಉಪಕೇಂದ್ರ ಆರಂಭಗೊಂಡು 3 ವರ್ಷಗಳು ಕಳೆದಿದ್ದರೂ ಕಾಮಗಾರಿ ಪೂರ್ಣಗೊಳ್ಳದೆ ಅರ್ಧದಲ್ಲಿ ಬಾಕಿಯಾಗಿದೆ. ತಕ್ಷಣವೇ ಇಂಧನ ಸಚಿವರು ಸಂಬಂಧಿಸಿದ ಕಂಟ್ರಾಕ್ಟರ್‌ಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಪರಿಹರಿಸಬೇಕು. ಪುತ್ತೂರಿನಲ್ಲಿ ಲೈನ್ ಸಮಸ್ಯೆಗಳಾದಾಗ ಮಂಗಳೂರಿನಿಂದ ಗ್ಯಾಂಗ್‌ಮೆನ್ ಬಂದು ದುರಸ್ತಿ ಮಾಡುವ ಕಾರಣ ಹೆಚ್ಚಿನ ಸಮಯ ವ್ಯರ್ಥವಾಗುತ್ತಿದೆ. ಇದನ್ನು ತಡೆಯಲು ಪುತ್ತೂರಿಗೆ ಗ್ಯಾಂಗ್‌ಮೆನ್ ವ್ಯವಸ್ಥೆಗೊಳಿಸಬೇಕು.

ಕಾವು ಎಂಬಲ್ಲಿಗೆ 33ಕೆ.ವಿ. ವಿದ್ಯುತ್ ಉಪಕೇಂದ್ರ ಮಂಜೂರಾಗಿದ್ದು ಕೆಲಸ ಇನ್ನೂ ಆರಂಭಗೊಂಡಿಲ್ಲ, ವಿದ್ಯುತ್ ಕಂಬ ದುರಸ್ತಿ ವೇಳೆಗೆ ಹಲವಾರು ಅಪಾಯಗಳು ಸಂಭವಿಸುತ್ತಿದ್ದು ಜೀವಹಾನಿಯೂ ಉಂಟಾಗಿದೆ. ಇದನ್ನು ತಡೆಲು ಕಂಬ ಲಿಫ್ಟ್ ಮಾಡುವ ಹಾಗೂ ದುರಸ್ತಿಗೊಳಿಸುವ ಕ್ರೇನ್ ವ್ಯವಸ್ಥೆಯನ್ನು ಪುತ್ತೂರಿಗೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ವೇದಿಕೆಯಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಉಪಾಧ್ಯಕ್ಷೆ ರಾಜೇಶ್ವರಿ, ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಉಪಾಧ್ಯಕ್ಷ ವಿಶ್ವನಾಥ ಗೌಡ, ಸದಸ್ಯ ಮುಖೇಶ್ ಕೆಮ್ಮಿಂಜೆ, ಪುಡಾ ಅಧ್ಯಕ್ಷ ಈಶ್ವರ ಭಟ್ ಬೆಟ್ಟ, ಕೆಪಿಟಿಸಿಎಲ್ ನಿರ್ದೇಶಕ ಜಯರಾಮೇಗೌಡ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಸಚಿವರ ಕಾರ್ಯದರ್ಶಿ ಶ್ರಿಧರ್, ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಮೆಸ್ಕಾಂ ನಿರ್ದೇಶಕಿ ಮಲ್ಲಿಕಾ ಪಕ್ಕಳ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಚಿವ ಡಿ.ಕೆ.ಶಿವಕುಮಾರ್, ಉಪಕೇಂದ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡಿದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮತ್ತು ಕಾಮಗಾರಿ ನಿರ್ವಹಿಸಿದ ಕುಂದಾಪುರ ಪುಷ್ಪಾಇಲೆಕ್ಟ್ರಿಕಲ್ಸ್‌ನ ಪುಷ್ಪಾನಂದ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಚಿಕ್ಕನಂಜಪ್ಪ ಸ್ವಾಗತಿಸಿದರು. ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣ ಪೂಜಾರಿ ವಂದಿಸಿದರು. ಪ್ರೊ. ಬಿ.ಜೆ. ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X