ಮಳೆ ನೀರು ನುಗ್ಗಿ ಅಪಾರ ನಷ್ಟ

ದಾವಣಗೆರೆ, ಮೇ 20: ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಕೆ.ಆರ್. ಮಾರುಕಟ್ಟೆ ಸೇರಿದಂತೆ ಅನೇಕ ಕಡೆ ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು ನೀರುಪಾಲಾದ ಘಟನೆ ವರದಿಯಾಗಿದೆ.
ಕೆೆಆರ್ ಮಾರುಕಟ್ಟೆಯಲ್ಲಿ ಕಾಮಗಾರಿ ನಡೆಯುತ್ತಿರುವ ವೇಳೆ ಮಳೆ ಬಂದಿದ್ದರಿಂದ ನೀರು ತಗ್ಗು ಪ್ರದೇಶದಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಅಂಗಡಿಗಳಿಗೆ ಪ್ರವೇಶ ಮಾಡಿದ್ದು, ದಾಸ್ತಾನು ಮಾಡಿದ ದವಸ ಧಾನ್ಯವೆಲ್ಲ ನೀರು ಪಾಲಾಗಿದ್ದು, ಸುಮಾರು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ. ಪ್ರತಿ ವರ್ಷವು ಮಳೆ ಸಮಯದಲ್ಲಿ ಇದೇ ರೀತಿ ಅಂಗಡಿಗಳಿಗೆ ನೀರು ನುಗ್ಗಿ ದಾಸ್ತಾನು ಹಾಳಾಗುತ್ತಿದ್ದು, ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಂಗಡಿಯವರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಅಂಗಡಿ ಮಾಲಕರು ಆಕ್ರೋಶ ವ್ಯಕ್ತಪಡಿಸಿದರು.
Next Story





