Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀಟ್ ಒಂದು ವರ್ಷ ಮುಂದೂಡಿಕೆ: ಕೇಂದ್ರ...

ನೀಟ್ ಒಂದು ವರ್ಷ ಮುಂದೂಡಿಕೆ: ಕೇಂದ್ರ ಸುಗ್ರೀವಾಜ್ಞೆ

ವಾರ್ತಾಭಾರತಿವಾರ್ತಾಭಾರತಿ20 May 2016 11:51 PM IST
share
ನೀಟ್ ಒಂದು ವರ್ಷ ಮುಂದೂಡಿಕೆ: ಕೇಂದ್ರ ಸುಗ್ರೀವಾಜ್ಞೆ

ಹೊಸದಿಲ್ಲಿ, ಮೇ 20: ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸ್‌ಗಳ ಸಾಮಾನ್ಯ ಪ್ರವೇಶಕ್ಕಾಗಿನ ಏಕೀಕೃತ ರಾಷ್ಟ್ರೀಯ ಪ್ರವೇಶ ಪರೀಕ್ಷೆ(ನೀಟ್) ಯನ್ನು ಒಂದು ಶೈಕ್ಷಣಿಕ ವರ್ಷದ ಮಟ್ಟಿಗೆ ಮುಂದೂಡಲು ಕೇಂದ್ರ ಸರಕಾರ ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದೆ.

ನೀಟ್ ಪರೀಕ್ಷೆಯನ್ನು ನಡೆಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂದು ರಾಜ್ಯ ಸರಕಾರಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ತೀರ್ಮಾನ ಕೈಗೊಂಡಿದೆ.

ಎಲ್ಲ ಸರಕಾರಿ ಕಾಲೇಜುಗಳು, ಡೀಮ್ಡ್ ವಿಶ್ವವಿದ್ಯಾನಿಲಯಗಳು ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳು ನೀಟ್ ವ್ಯಾಪ್ತಿಗೆ ಬರುತ್ತವೆಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಭಾಗಶಃ ನಿರಾಕರಿಸುವ ಗುರಿಯನ್ನು ಈ ಕಾರ್ಯಕಾರಿ ಆದೇಶ ಹೊಂದಿದೆ.
ಮುಂದಿನ ಹಂತದ ನೀಟ್ ಪರೀಕ್ಷೆ ಜು.24ಕ್ಕೆ ನಿಗದಿಯಾಗಿದೆ. ಮೇ 1ರಂದು ನಡೆದಿದ್ದ ಮೊದಲ ಹಂತದ ಪರೀಕ್ಷೆಯನ್ನು ಸುಮಾರು 6.5 ಲಕ್ಷ ವಿದ್ಯಾರ್ಥಿಗಳು ಬರೆದಿದ್ದಾರೆ.

 ಅಧ್ಯಾದೇಶ ಜಾರಿಯಾದಲ್ಲಿ ರಾಜ್ಯ ಸರಕಾರಗಳ ಮಂಡಳಿಗಳ ವಿದ್ಯಾರ್ಥಿಗಳು ಜು.24ರ ನೀಟ್ ಪರೀಕ್ಷೆಗೆ ಹಾಜರಾಗಬೇಕಿಲ್ಲ. ಆದಾಗ್ಯೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಏಕರೀತಿಯ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಭಾಗವಹಿಸಲೇ ಬೇಕೆಂದು ಸರಕಾರಿ ಮೂಲಗಳು ಸ್ಪಷ್ಟಪಡಿಸಿವೆ. ಇದಕ್ಕೂ ಮುನ್ನ ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ 14 ರಾಜ್ಯಗಳ ಆರೋಗ್ಯ ಸಚಿವರು ಹಾಗೂ ಕಾಂಗ್ರೆಸ್ ಮತ್ತು ಪ್ರತಿಪಕ್ಷ ನಾಯಕರ ಜೊತೆ ನಡೆಸಿದ ಎರಡು ಮಹತ್ವದ ಸಭೆಗಳ ಬಳಿಕ ಈ ತೀರ್ಮಾನಕ್ಕೆ ಬರಲಾಯಿತು.

ಪರೀಕ್ಷೆಯು ಕೇಂದ್ರ ಸರಕಾರದ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನ್ವಯವಾಗಲಿದೆ.

ವಿದ್ಯಾರ್ಥಿಗಳಿಗೆ ಭಾಷೆ ಹಾಗೂ ಸಿಲೆಬಸ್ ಸಂಬಂಧದ ಸಮಸ್ಯೆ ಸಹಿತ ಅನೇಕ ವಿಷಯಗಳನ್ನು ಇತ್ತೀಚೆಗೆ ನಡೆದಿದ್ದ ಆರೋಗ್ಯ ಸಚಿವರ ಸಮ್ಮೇಳನದಲ್ಲಿ ರಾಜ್ಯಗಳು ಎತ್ತಿದ್ದವು.

ರಾಜ್ಯ ಮಂಡಳಿಗಳಿಗೆ ಸಂಯೋಜಿತರಾಗಿರುವ ವಿದ್ಯಾರ್ಥಿಗಳಿಗೆ ಜುಲೈಯಲ್ಲಿ -ಇಷ್ಟೊಂದು ಕಡಿಮೆ ಅವಧಿಯಲ್ಲಿ ನೀಟ್ ಪರೀಕ್ಷೆ ಬರೆಯುವುದು ಕಷ್ಟವಾಗಬಹುದೆಂದು ಅವರು ಪ್ರತಿಪಾದಿಸಿದ್ದರು.

ಸುಗ್ರೀವಾಜ್ಞೆಯ ಅಗತ್ಯದ ಕುರಿತು ವಿವರಿಸಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಭೇಟಿಮಾಡುವ ನಿರೀಕ್ಷೆಯಿದೆ.

ನೀಟ್ ಅಧ್ಯಾದೇಶದ ವಿರುದ್ಧ ಎನ್‌ಜಿಒ ಕಾನೂನು ಸಮರ

ಹೊಸದಿಲ್ಲಿ,ಮೇ 20: ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳಿಗೆ ನೀಟ್ ಜೊತೆಗೆ ತಮ್ಮ ಪ್ರತ್ಯೇಕ ಪ್ರವೇಶ ಪರೀಕ್ಷೆಗಳನ್ನು ಮುಂದುವರಿಸಲು ಅಧ್ಯಾದೇಶವೊಂದರ ಮೂಲಕ ರಾಜ್ಯಗಳಿಗೆ ಅವಕಾಶ ಕಲ್ಪಿಸುವ ಕೇಂದ್ರದ ಪ್ರಯತ್ನವನ್ನು ಎನ್‌ಜಿಒ ಸಂಕಲ್ಪ್ ಚಾರಿಟೇಬಲ್ ಟ್ರಸ್ಟ್ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.

ಕೇಂದ್ರ ಸಂಪುಟವು ಅಂಗೀಕರಿಸಿರುವ ಅಧ್ಯಾದೇಶದ ಅಧಿಸೂಚನೆ ಪ್ರಕಟಗೊಂಡ ತಕ್ಷಣ ತಾನದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಈ ಮೊದಲು ನೀಟ್ ಅನ್ನು ಬೆಂಬಲಿಸಿ ನ್ಯಾಯಾಲಯದ ಮೆಟ್ಟಿಲನ್ನೇರಿದ್ದ ಸಂಕಲ್ಪ್ ಹೇಳಿದೆ. ಸರಕಾರವು ಅಧ್ಯಾದೇಶವನ್ನು ತರುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ತಪ್ಪಿಸಿಕೊಳ್ಳುವಂತಿಲ್ಲ ಎಂದು ಸಂಕಲ್ಪ್ ಪರ ನ್ಯಾಯಾಲಯದಲ್ಲಿ ಹಾಜರಾಗಿದ್ದ ನ್ಯಾಯವಾದಿ ಅಮಿತ್ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

 ಒಂದು ಶೈಕ್ಷಣಿಕ ವರ್ಷದ ಅವಧಿಗೆ ರಾಜ್ಯ ಪರೀಕ್ಷಾ ಮಂಡಳಿಗಳನ್ನು ನೀಟ್‌ನ ವ್ಯಾಪ್ತಿಯಿಂದ ಹೊರಗಿಡಲು ಅಧ್ಯಾದೇಶ ಘೋಷಣೆಯನ್ನು ಕೇಂದ್ರ ಸಂಪುಟವು ಶುಕ್ರವಾರ ಒಪ್ಪಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X