ಕೆಪೆಕ್ ನಿರ್ದೇಶಕರಾಗಿ ಪಿ.ಎ.ಮುಹಮ್ಮದ್
ಸುಳ್ಯ, ಮೇ 21: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಪೆಕ್) ನಿರ್ದೇಶಕರಾಗಿ ಸುಳ್ಯದ ಕಾಂಗ್ರೆಸ್ ಧುರೀಣ ಪಿ.ಎ.ಮುಹಮ್ಮದ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಎನ್ಎಸ್ಯುಐ ಮೂಲಕ ರಾಜಕೀಯ ಪ್ರವೇಶಿಸಿ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿರುವ ಪಿ.ಎ.ಮುಹಮ್ಮದ್ ಸುಳ್ಯ ನಗರ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಗ್ರೀನ್ವ್ಯೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಶೈಕ್ಷಣಿಕ, ಧಾರ್ಮಿಕ, ಕ್ರೀಡೆ ಹಾಗೂ ಸಾಮರಸ್ಯಕ್ಕಾಗಿ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ಹೆಸರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನಂತೆ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ.
Next Story