Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 15 ಗ್ರಾಮಗಳಲ್ಲಿ ಕುಡಿಯುವ ನೀರಿಗೆ...

15 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ಶಿವಮೊಗ್ಗ: ಉರುಳಿಬಿದ್ದ ನೂರಾರು ವಿದ್ಯುತ್ ಕಂಬಗಳು

ವಾರ್ತಾಭಾರತಿವಾರ್ತಾಭಾರತಿ21 May 2016 9:52 PM IST
share

ಶಿವಮೊಗ್ಗ, ಮೇ 21: ಇತ್ತೀಚೆಗೆ ಬಂದ ಬಿರುಗಾಳಿ ಮಳೆಯ ವೇಳೆ ಶಿವಮೊಗ್ಗ ತಾಲೂಕಿನ ಚೋರಡಿ ಹಾಗೂ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ನೂರಾರು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಪರಿಣಾಮ ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ)ಗಳು ಹಾಳಾಗಿದ್ದು, ಇದರಿಂದ ಸರಿಸುಮಾರು 15 ಹಳ್ಳಿಗಳಲ್ಲಿ ವಿದ್ಯುತ್ ಪೂರೈಕೆ ಇಲ್ಲವಾಗಿದೆ. ಇದು ಕುಡಿಯುವ ನೀರು ಪೂರೈಕೆ ಮೇಲೆ ಗಂಭೀರ ಪರಿಣಾಮ ಉಂಟು ಮಾಡಿದೆ. ಚೋರಡಿ, ಮರಾಠಿ ಕ್ಯಾಂಪ್, ಒಡೆಯರಕೊಪ್ಪ, ಗುಂಡೂರು, ತುಪ್ಪೂರು, ಕೋಣೆಹೊಸೂರು, ಚೋಡನಾಳು, ಬ್ಯಾಡನಾಳು, ಕೋಟೆಹಾಳ, ಶಾಂತಿನಗರ, ಹೆಗ್ಗೆರೆ, ಹೊರಬೈಲು, ಸನ್ನಿವಾಸ, ಜಿರಗದಹಳ್ಳಿ, ಕಾನ್‌ಕೇರಿ ಮೊದಲಾದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಪೂರೈಕೆಯಿಲ್ಲದಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಮತ್ತೊಂದೆಡೆ ತೀವ್ರ ಸಮಸ್ಯೆಯಿರುವ ಗ್ರಾಮಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಎಂ.ಹರೀಶ್, ಶನಿವಾರ ಹಲವು ಗ್ರಾಮಗಳಿಗೆ ಭೇಟಿಯಿತ್ತು ಪರಿಶೀಲನೆ ನಡೆಸಿದರು. ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇತ್ತೀಚೆಗೆ ಬಂದ ಬಿರುಗಾಳಿ ಮಳೆಯಿಂದ ಚೋರಡಿ ಹಾಗೂ ತುಪ್ಪೂರು ಗ್ರಾಪಂ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ನೂರಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ವಿದ್ಯುತ್ ಪರಿವರ್ತಕಗಳು ಹಾಳಾಗಿವೆ. ಇದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ತೀವ್ರ ಸ್ವರೂಪದ ವ್ಯತ್ಯಯ ಉಂಟಾಗಿದೆ ಎಂದರು.

ಸಮಸ್ಯೆಯಿರುವ ಗ್ರಾಮಗಳಿಗೆ ಇಲಾಖೆಯವತಿಯಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮೆಸ್ಕಾಂನವರು ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸುತ್ತಿದ್ದಾರೆ. ವಿದ್ಯುತ್ ಪೂರೈಕೆ ಆರಂಭವಾದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಧರಾಶಾಯಿ:

                              

                      

  ಮೆಸ್ಕಾಂ ಮೂಲಗಳು ಹೇಳುವ ಪ್ರಕಾರ ಮೇಲ್ಕಂಡ ಗ್ರಾಮಗಳ ವಿವಿಧ ಭಾಗಗಳಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿವೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿಸುತ್ತವೆ. ಘಟನೆ ನಡೆದ ದಿನದಿಂದಲೂ ಮೆಸ್ಕಾಂ ಸಿಬ್ಬಂದಿ ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ನಾಲ್ಕು ತಂಡಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯವಸ್ಥೆ ಮಾಡಲಾಗಿದೆ. ಇಷ್ಟರಲ್ಲಿಯೇ ಎಲ್ಲ ಸಮಸ್ಯೆ ಪರಿಹಾರವಾಗಲಿದೆ ಎಂದು ಮೆಸ್ಕಾಂನ ಕುಂಸಿ ಗ್ರಾಮಾಂತರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ನಾಯ್ಕಾ ಶನಿವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದರು. ಶಿವಮೊಗ್ಗ ತಾಲೂಕಿನ ಚೋರಡಿ, ತುಪ್ಪೂರು ಗ್ರಾಪಂ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಕುಡಿಯುವ ನೀರು ಸರಬರಾಜಿನಲ್ಲಿ ಸಮಸ್ಯೆ ಕಂಡುಬಂದಿದೆ. ಇಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. -ಎಸ್.ಎಂ.ಹರೀಶ್, ಕಾರ್ಯಪಾಲಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ. ಇತ್ತೀಚೆಗೆ ಬಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ತಮ್ಮ ಉಪ ವಿಭಾಗ ವ್ಯಾಪ್ತಿಯ ಸುಮಾರು 15 ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದು ಹಾಗೂ ವಿದ್ಯುತ್ ಪರಿವರ್ತಕಗಳು ಹಾಳಾಗಿವೆ. ಸಮಸ್ಯೆ ಪರಿಹಾರಕ್ಕೆ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಈಗಾಗಲೇ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಕಾಲಮಿತಿಯಲ್ಲಿ ಎಲ್ಲ ಗ್ರಾಮಗಳಿಗೂ ವಿದ್ಯುತ್ ಪೂರೈಕೆ ಮಾಡಲಾಗುವುದು.

                   -ಮಂಜುನಾಥ್ ನಾಯ್ಕ, ಕಾರ್ಯಪಾಲಕ ಅಭಿಯಂತರರು ಕುಂಸಿ ಗ್ರಾಮಾಂತರ ಉಪ ವಿಭಾಗದ ಸಹಾಯಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X