Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳ ವಿಚಾರ...

ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ21 May 2016 9:53 PM IST
share
ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳ ವಿಚಾರ ಸಂಕಿರಣ

ಚಿಕ್ಕಮಗಳೂರು, ಮೇ21: ಭೂಮಿಯ ರಸಸಾರ ಸಮತೋಲನದಲ್ಲಿ ಲಘು ಪೋಷಕಾಂಶಗಳ ಪಾತ್ರ ಹಿರಿದು. ವೈಜ್ಞಾನಿಕವಾದ ನಿರ್ವಹಣೆಯಿಂದ ಕೃಷಿ ಲಾಭದಾಯಕವಾಗಿ ಮಾಡಿಕೊಳ್ಳಬಹುದು ಎಂದು ಹಿರಿಯ ಕೃಷಿ ವಿಜ್ಞ್ಞಾನಿ ಡಾ. ಎಂ.ನಾರಾಯಣಸ್ವಾಮಿ ಅಭಿಪ್ರಾಯಿಸಿದ್ದಾರೆ.

ಕರ್ನಾಟಕ ಆಗ್ರೋಕೆಮಿಕಲ್ಸ್, ಕೊಪ್ಪದ ಮಹಿಮಾ ಆಗ್ರೋಕ್ಲಿನಿಕ್ ಮತ್ತು ಕಳಸದ ಚನ್ನಕೇಶವ ಆಗ್ರೋ ಸರ್ವಿಸ್ ಸಂಯುಕ್ತಾಶ್ರಯದಲ್ಲಿ ತಲಗೋಡು ಗ್ರಾಮದ ಹಿತ್ತಲಮಕ್ಕಿ ಗಜೇಂದ್ರ ಹೆಬ್ಬಾರ್ ಮನೆಯಂಗಳದಲ್ಲಿ ಆಯೋಜಿಸಿದ್ದ ಕಾಫಿ, ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ವಿಚಾರಸಂಕಿರಣದಲ್ಲಿ ಅವರು ಪ್ರಧಾನ ಉಪನ್ಯಾಸ ನೀಡಿ ರೈತರೊಂದಿಗೆ ಸಂವಾದ ನಡೆಸಿದರು.

ರೈತರ ನೆಲಪರಂಪರೆಗೆ ಅನುಗುಣವಾಗಿ ಕೃಷಿ ಪದ್ಧತಿ ಅನುಕೂಲಕರ. ಇಂದು ಕಾಫಿ ಮತ್ತು ಅಡಿಕೆಗೆ ಹೋಲಿಸಿದರೆ ಕಾಳುಮೆಣಸು ಕೃಷಿ ಲಾಭದಾಯಕವಾಗಿ ಕಾಣುತ್ತಿದೆ. ಹಾಗಾಗಿ ಬಹುತೇಕ ತೋಟಗಳಲ್ಲಿ ಕಾಳುಮೆಣಸಿಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತದೆ. ಕಾಳುಮೆಣಸನ್ನು ವಿಶ್ವದ ಎಲ್ಲ ರಾಷ್ಟ್ರಗಳಲ್ಲೂ ಆಹಾರದೊಂದಿಗೆ ಬಳಸಲಾಗುತ್ತಿದೆ. ಇದು ರುಚಿಕರ ಜೊತೆಗೆ ಜೀರ್ಣಶಕ್ತಿಯನ್ನು ವೃದ್ಧಿಸುವುದರಿಂದ ಸದಾಕಾಲ ಮಾರುಕಟ್ಟೆ ಇದ್ದೇ ಇರುತ್ತದೆ. ಇದನ್ನು ಕೆಲವೇ ದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತಿದೆ ಎಂಬುದು ಗಮನಾರ್ಹ.

 ಗಿಡದ ಸ್ವಲ್ಪದೂರ ಮಣ್ಣು ಸಡಿಲಿಸುವುದರಿಂದ ನೀರು, ಪೋಷಕಾಂಶಗಳು ಸರಾಗವಾಗಿ ಇಳಿದು ಬೇರಿಗೆ ಸುಲಭವಾಗಿ ಸಿಗುತ್ತವೆೆ. ಬೇರನ್ನು ಸರಿಯಾಗಿ ಆರೈಕೆ ಮಾಡಿದಾಗ ಅದು ಕಾಂಡ, ರೆಂಬೆಕೊಂಬೆ, ಎಲೆಗಳನ್ನು ಪೋಷಿಸುತ್ತದೆ. ಎಲೆಗಳಲ್ಲಿ ಪತ್ರಹರಿತ್ತಿನ ರಚನೆಗೆ ಸಹಕಾರಿಯಾಗಿ ದ್ವಿತಿ ಸಂಶ್ಲೇಷಣೆ ಕ್ರಿಯೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುವುದರಿಂದ ವಾತಾವರಣದಲ್ಲಿರುವ ಅಗತ್ಯಅಂಶಗಳು ಗಿಡಕ್ಕೆ ಆಹಾರವಾಗಿ ಪರಿವರ್ತನೆಗೊಂಡು ಇಳುವರಿ ಹೆಚ್ಚಿಸುತ್ತದೆ ಎಂದು ವಿವರಿಸಿದರು.

 ವಿಚಾರ ಸಂಕಿರಣವನ್ನು ಪ್ರಗತಿಪರ ಕೃಷಿಕ ಎಂ.ಎಸ್. ದಿವಾಕರಭಟ್ ಉದ್ಘಾಟಿಸಿದರು. ಕೃಷಿ ಸಲಹೆಗಾರ ಡಾ.ಜಿ.ಎಸ್.ಮಹಾಬಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿತ್ತಲಮಕ್ಕಿಯ ಪ್ರಗತಿಪರ ಕೃಷಿಕ ಎಚ್.ಎಸ್.ಗಜೇಂದ್ರಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಯುವಕೃಷಿಕ ಎಚ್.ಜಿ.ಭರತ್ ಮಾತನಾಡಿದರು. ಕಳಸದ ಜಿ.ವಿ.ರಮೇಶ್ ಸ್ವಾಗತಿಸಿ, ಪರಿಸರವಾದಿ ಗಜೇಂದ್ರಗೊರಸು ಕೊಡುಗೆ ನಿರೂಪಿಸಿದರು. ಕೃಷಿಕ ನಾಗಭೂಷಣ್ ವಂದಿಸಿದ್ದು, ನಿವೇದಿತಾ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X