Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಡ್ರೋನ್ ದಾಳಿಯಲ್ಲಿ ತಾಲಿಬಾನ್...

ಅಮೆರಿಕ ಡ್ರೋನ್ ದಾಳಿಯಲ್ಲಿ ತಾಲಿಬಾನ್ ನಾಯಕ ಅಖ್ತರ್ ಮನ್ಸೂರ್ ಹತ್ಯೆ

ಅಫ್ಘಾನ್-ಪಾಕ್ ಗಡಿಯಲ್ಲಿ ದಾಳಿ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ22 May 2016 9:59 PM IST
share
ಅಮೆರಿಕ ಡ್ರೋನ್ ದಾಳಿಯಲ್ಲಿ ತಾಲಿಬಾನ್ ನಾಯಕ ಅಖ್ತರ್ ಮನ್ಸೂರ್ ಹತ್ಯೆ

    ಕಾಬೂಲ್, ಮೇ 22: ಅಫ್ಘಾನಿಸ್ತಾನ ತಾಲಿಬಾನ್‌ನ ನಾಯಕ ಮುಲ್ಲಾ ಅಖ್ತರ್ ಮನ್ಸೂರ್ ಅಮೆರಿಕ ಸೇನೆಯ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾನೆಂದು, ಉಗ್ರವಾದಿ ಗುಂಪಿನ ಹಿರಿಯ ಕಮಾಂಡರ್ ಒಬ್ಬಾತ ರವಿವಾರ ತಿಳಿಸಿದ್ದಾನೆ. ಅಫ್ಘಾನಿಸ್ತಾನ-ಪಾಕ್ ಗಡಿ ಪ್ರದೇಶದಲ್ಲಿ ಈ ದಾಳಿ ನಡೆದಿರುವುದಾಗಿ ಅಫ್ಘಾನ್ ತಾಲಿಬಾನ್‌ನ ಕಮಾಂಡರ್ ಮುಲ್ಲಾ ರವೂಫ್ ತಿಳಿಸಿದ್ದಾರೆ. ದಾಳಿ ನಡೆದಿರುವುದನ್ನು ಅಫ್ಘಾನ್ ಅಧ್ಯಕ್ಷ ಅಶ್ರಫ್ ಗನಿ ಅವರ ಕಾರ್ಯಾಲಯ ದೃಢಪಡಿಸಿದೆಯಾದರೂ, ಮನ್ಸೂರ್ ಸಾವನ್ನು ದೃಢಪಡಿಸಲು ಅದು ನಿರಾಕರಿಸಿದೆ. ಆದಾಗ್ಯೂ, ಅಧ್ಯಕ್ಷ ಕಾರ್ಯಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ಲಾ ಅಬ್ದುಲ್ಲಾ ಅವರು ಮನ್ಸೂರ್ ಸಾವನ್ನಪ್ಪಿರುವ ಸಾಧ್ಯತೆ ಅಧಿಕವಾಗಿದೆ ಎಂದಿದ್ದಾರೆ.

  ಅಫ್ಘಾನಿಸ್ತಾನದ ಗಡಿಗೆ ತಾಗಿಕೊಂಡಿರುವ ಪಾಕಿಸ್ತಾನದ ಭಾಗದಲ್ಲಿ ಮುಲ್ಲಾ ಅಖ್ತರ್ ವಿರುದ್ಧ ಶನಿವಾರ ಅಮೆರಿಕ ಸೇನೆ ಡ್ರೋನ್ ಆಕ್ರಮಣ ನಡೆಸಿತ್ತು.ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅನುಮತಿಯ ಪಡೆದು ಈ ಸೇನಾ ಕಾರ್ಯಾಚರಣೆ ನಡೆದಿದೆ. ಮುಲ್ಲಾ ಅಖ್ತರ್ ಮನ್ಸೂರ್‌ನ ಹತ್ಯೆಯಿಂದ, ತಾಲಿಬಾನ್ ಇನ್ನಷ್ಟು ದುರ್ಬಲಗೊಳ್ಳಲಿದೆ. ಆದರೆ ಇದೇ ವೇಳೆ ಬಹಳಕಾಲದಿಂದ ನೆನೆಗುದಿಯಲ್ಲಿರುವ ಶಾಂತಿ ಮಾತುಕತೆಯಲ್ಲಿ ತಾಲಿಬಾನ್ ಬಂಡುಕೋರರು ಪಾಲ್ಗೊಳ್ಳುವ ಸಾಧ್ಯತೆಯೂ ಕ್ಷೀಣಿಸಲಿದೆಯೆಂದು ತಜ್ಞರು ಅಭಿಪ್ರಾಯಿಸಿದ್ದಾರೆ.

ಅಮೆರಿಕದಿಂದ ಸ್ಪಷ್ಟೀಕರಣ ಕೇಳಿದ ಪಾಕ್

  ಅಫ್ಘಾನ್ ತಾಲಿಬಾನ್ ನಾಯಕ ಮುಲ್ಲಾ ಅಖ್ತರ್ ಮನ್ಸೂರ್ ವಿರುದ್ಧ ನಡೆದ ಡ್ರೋನ್ ದಾಳಿಯ ಬಗ್ಗೆ ಪಾಕಿಸ್ತಾನವು ಅಮೆರಿಕದಿಂದ ಸ್ಪಷ್ಟೀಕರಣವನ್ನು ಕೇಳಲಿದೆಯೆಂದು, ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರರು ರವಿವಾರ ತಿಳಿಸಿದ್ದಾರೆ. ಪಾಕಿಸ್ತಾನದ ನೆಲದಲ್ಲಿ ನಡೆಸಿದ ವಾಯುದಾಳಿಯೊಂದರಲ್ಲಿ ಮನ್ಸೂರ್ ಮೃತಪಟ್ಟಿರುವ ಸಾಧ್ಯತೆಯಿದೆಯೆಂದು ಅಮೆರಿಕ ಅಧಿಕಾರಿಗಳು ಪ್ರಕಟಿಸಿದ ಬೆನ್ನಲ್ಲೇ ಪಾಕ್ ಈ ಹೇಳಿಕೆ ನೀಡಿದೆ.

    ‘‘ಅಮೆರಿಕದ ಡ್ರೋನ್ ಕುರಿತಾದ ವರದಿಗಳನ್ನು ನಾವು ನೋಡಿದ್ದೇವೆ. ಈ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದೇವೆ’’ ಎಂದು ಪಾಕ್ ವಿದೇಶಾಂಗ ವಕ್ತಾರ ನಫೀಸ್ ಝಕಾರಿಯಾ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ದೀರ್ಘಾವಧಿಯ ಯುದ್ಧವನ್ನು ಕೊನೆಗೊಳಿಸಲು ತಾಲಿಬಾನ್ ಮಾತುಕತೆಯ ಮೇಜಿಗೆ ಬರಬೇಕೆಂದು ಪಾಕ್ ಬಯಸುತ್ತಿದೆ’. ಅಫ್ಘಾನ್ ಸಮಸ್ಯೆಗೆ ಮಿಲಿಟರಿ ಕಾರ್ಯಾಚರಣೆ ಪರಿಹಾರವಲ್ಲ ಎಂದವರು ಹೇಳಿದ್ದಾರೆ. ಆದರೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಅವರು ಶನಿವಾರ ನಡೆದ ವಾಯುದಾಳಿಯ ಬಗ್ಗೆ ಪಾಕ್ ಪ್ರಧಾನಿ ನವಾಝ್ ಶರೀಫ್ ಅವರಿಗೆ ಅಧಿಸೂಚನೆಯೊಂದನ್ನು ಕಳುಹಿಸಲಾಗಿತ್ತೆಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X