Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂ. 3: ಜಾನಪದ ಪರಿಷತ್ ಉದ್ಘಾಟನೆ

ಜೂ. 3: ಜಾನಪದ ಪರಿಷತ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ22 May 2016 10:18 PM IST
share

ಮಡಿಕೇರಿ, ಮೇ 22: ಕೊಡಗು ಜಿಲ್ಲಾ ಜಾನಪದ ಪರಿಷತ್‌ನ ಉದ್ಘಾಟನೆಯನ್ನು ಜಾನಪದ ಉತ್ಸವವಾಗಿ ಜೂನ್ 3ರಂದು ಕುಶಾಲನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ. ಅಂದು ಸೋಮವಾರಪೇಟೆ ತಾಲೂಕು ಘಟಕದ ಉದ್ಘಾಟನೆಯೂ ನಡೆಯಲಿದೆ. ನಗರದಲ್ಲಿ ಜರಗಿದ ಜಿಲ್ಲಾ ಜಾನಪದ ಪರಿಷತ್ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಜೂನ್ 3ರಂದು ಜಾನಪದ ಉತ್ಸವದೊಂದಿಗೆ ಕುಶಾಲನಗರದಲ್ಲಿ ಜಿಲ್ಲಾ ಜಾನಪದ ಪರಿಷತ್ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಂಘ ಸಂಸ್ಥೆಗಳ ಸಹಕಾರ ಕೋರಲಾಗಿದೆ ಎಂದು ತಿಳಿಸಿದರು.

 ಕೊಡವ ಸಾಹಿತ್ಯ ಅಕಾಡಮಿ, ಅರೆಭಾಷಾ ಸಾಹಿತ್ಯ ಅಕಾಡಮಿ, ಬ್ಯಾರಿ ಅಕಾಡಮಿಗಳ ಸಹಕಾರ ಕೋರಲಾಗಿದ್ದು, ಕುಶಾಲನಗರದ ಕನ್ನಡ ಪರ ಸಂಘಟನೆಗಳೂ ಹಲವು ರೀತಿಯ ನೆರವು ನೀಡಲು ಮುಂದಾಗಿದೆ. ಅಂತೆಯೇ ಮಹಿಳಾ ಸಂಘಟನೆಗಳು, ಸ್ತ್ರೀಶಕ್ತಿ ಸಂಘಗಳು, ಸಾಮಾಜಿಕ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಜಾನಪದ ಉತ್ಸವ ಆಚರಿಸಲಾಗುತ್ತದೆ. ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು, ಸಂಸದರು, ಜಿಪಂ, ಕುಶಾಲನಗರ ಪಪಂ, ಮಡಿಕೇರಿ ನಗರಸಭೆ, ಸೋಮವಾರಪೇಟೆ ತಾಪಂ, ಸಹಕಾರಿ ಸಂಘಗಳ ಸಹಕಾರವನ್ನೂ ಉತ್ಸವದ ಯಶಸ್ಸಿಗೆ ಕೋರಲಾಗಿದೆ ಎಂದು ತಿಳಿಸಿದರು.

 ಸುಮಾರು 25 ಕಲಾ ತಂಡಗಳು ಜಾನಪದ ಉತ್ಸವದ ಆಕರ್ಷಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಮತ್ತು ಅರೆಭಾಷೆ ಸಾಹಿತ್ಯ ಅಕಾಡಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಸಭೆಯಲ್ಲಿ ಮಾತನಾಡಿ, ಕೊಡಗಿಗೆ ಜಾನಪದ ಪರಿಷತ್‌ನ ಅಗತ್ಯತೆ ಹೆಚ್ಚಾಗಿತ್ತು. ಈ ನಿಟ್ಟಿನಲ್ಲಿ ಅಕಾಡೆಮಿಗಳಿಂದ ಕಲಾತಂಡಗಳನ್ನು ಜಾನಪದ ಉತ್ಸವಕ್ಕೆ ಪ್ರಾಯೋಜಿಸುವುದಾಗಿ ಭರವಸೆ ನೀಡಿದರು. ಕೊಡಗಿನ ಕಲಾವಿದರ ತಂಡಗಳಿಂದ ಜಾನಪದ ಉತ್ಸವ ಸಂದರ್ಭ ಆಕರ್ಷಕ ಕಾರ್ಯಕ್ರಮ ನೀಡುವುದಾಗಿಯೂ ಅಕಾಡೆಮಿ ಅಧ್ಯಕ್ಷರು ತಿಳಿಸಿದರು.

ಪರಿಷತ್ ಸಂಘಟನಾ ಕಾರ್ಯದರ್ಶಿ ಮೇರಿಯಂಡ ಸಂಕೇತ್ ಪೂವಯ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಮಡಿಕೇರಿ ತಾಲೂಕು ಅಧ್ಯಕ್ಷ ಅನಿಲ್ ಎಚ್.ಟಿ, ಜಿಲ್ಲಾ ಕಾರ್ಯದರ್ಶಿ ಉಜ್ವಲ್ ರಂಜಿತ್, ಅಂಬೆಕಲ್ ಕುಶಾಲಪ್ಪ, ಡಾ. ತೀತೀರ ರೇಖಾ ವಸಂತ್, ಅಲ್ಲಾರಂಡ ವಿಠಲ್ ನಂಜಪ್ಪ, ಮಾದೇಟಿರ ಬೆಳ್ಯಪ್ಪ, ಸರಸ್ವತಿ ಡಿ.ಎಡ್ ಕಾಲೇಜು ಪ್ರಾಂಶುಪಾಲ ಕುಮಾರ್, ನಗರಸಭಾ ಸದಸ್ಯೆಯರಾದ ಕಾವೇರಮ್ಮ ಸೋಮಣ್ಣ, ಸಂಗೀತಾ ಪ್ರಸನ್ನ, ಅಂಬೆಕಲ್ ನವೀನ್ ಕುಶಾಲಪ್ಪ, ಲಕ್ಷ್ಮೀ ಪ್ರಸಾದ್ ಪೆರ್ಲ, ಕೊಡಗು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಮನು ಶೆಣೈ, ಹಿರಿಯ ಕಲಾವಿದರಾದ ಕುಡಿಯರ ಮುತ್ತಪ್ಪ, ಬಿ.ಸಿ.ಶಂಕರಯ್ಯ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X