Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಚರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ...

ಪಂಚರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ 3,526 ಪಕ್ಷೇತರರಲ್ಲಿ 9 ಮಂದಿಗಷ್ಟೇ ಯಶ

ವಾರ್ತಾಭಾರತಿವಾರ್ತಾಭಾರತಿ22 May 2016 11:54 PM IST
share

ಹೊಸದಿಲ್ಲಿ, ಮೇ 22: ನಾಲ್ಕು ರಾಜ್ಯಗಳು ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗಳಿಗೆ ಇತ್ತೀಚೆಗೆ ನಡೆದ ಚುನಾವಣೆಗಳು 3,500ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿಯನ್ನೇನೂ ತಂದಿಲ್ಲ. ಚುನಾವಣೆಗಳಲ್ಲಿ ಕೇವಲ 9 ಮಂದಿ ಸ್ವತಂತ್ರ ಅಭ್ಯರ್ಥಿಗಳಷ್ಟೇ ಗೆದ್ದಿದ್ದಾರೆ.

ಯಶಸ್ವಿಯಾದವರಲ್ಲಿ ಗರಿಷ್ಠ 6 ಮಂದಿ ಕೇರಳದಲ್ಲಿ, ಪಶ್ಚಿಮಬಂಗಾಳ, ಅಸ್ಸಾಂ ಹಾಗೂ ಪುದುಚೇರಿಗಳಲ್ಲಿ ವಿಜಯಿಗಳಾಗಿದ್ದಾರೆ. ನಾಲ್ಕು ರಾಜ್ಯಗಳಲ್ಲೇ ಅತಿ ಹೆಚ್ಚು(1,566) ಪಕ್ಷೇತರ ಅಭ್ಯರ್ಥಿಗಳು ತಮಿಳುನಾಡಿನಲ್ಲಿ ಸ್ಪರ್ಧಿಸಿದ್ದು, ಅವರಲ್ಲೊಬ್ಬನೂ ಗೆದ್ದಿಲ್ಲ.
ವಿಧಾನಸಭಾ ಚುನಾವಣೆಗಳಲ್ಲಿ ಒಟ್ಟು 3,526 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅವರಲ್ಲಿ ಕೇರಳದಲ್ಲಿ 782, ಅಸ್ಸಾಂನಲ್ಲಿ 711, ಪಶ್ಚಿಮಬಂಗಾಳದಲ್ಲಿ 371 ಹಾಗೂ ಪುದುಚೇರಿಯಲ್ಲಿ 96 ಮಂದಿ ಕಣದಲ್ಲಿದ್ದರೆ, ಉಳಿದವರು ತಮಿಳುನಾಡಿನಲ್ಲಿ ಅದೃಷ್ಟ ಪರೀಕ್ಷಿಸಿದ್ದರು ಎಂದು ಚುನಾವಣಾ ಆಯೋಗದ ಅಂಕಿ-ಅಂಶಗಳ ವಿಶ್ಲೇಷಣೆಯಿಂದ ತಿಳಿದುಬಂದಿದೆ.

ಪಶ್ಚಿಮಬಂಗಾಳದ 294, ತಮಿಳುನಾಡಿನ 232, ಕೇರಳದ 140, ಅಸ್ಸಾಂನ 126 ಹಾಗೂ ಪುದುಚೇರಿಯ 30 ಸೇರಿದಂತೆ ಒಟ್ಟು 822 ಕ್ಷೇತ್ರಗಳಿಗೆ ಎ.4ರಿಂದ ಮೇ 16ರ ನಡುವೆ ಮತದಾನ ನಡೆದಿತ್ತು. ತಮಿಳುನಾಡಿನ 2 ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿದೆ. ಚುನಾವಣೆಗಳಿಗೆ ಸುಮಾರು 8,873 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 3,776, ಪಶ್ಚಿಮಬಂಗಾಳದಲ್ಲಿ 1,961, ಅಸ್ಸಾಂನಲ್ಲಿ 1,581, ಕೇರಳದಲ್ಲಿ 1,203 ಹಾಗೂ ಪುದುಚೇರಿಯಲ್ಲಿ 344 ಹುರಿಯಾಳುಗಳಿದ್ದರು.
ತಮಿಳುನಾಡಿನಲ್ಲಿ 320, ಪಶ್ಚಿಮಬಂಗಾಳದಲ್ಲಿ 200, ಅಸ್ಸಾಂನಲ್ಲಿ 111, ಕೇರಳದಲ್ಲಿ 109 ಹಾಗೂ ಪುದುಚೇರಿಯಲ್ಲಿ 21 ಮಂದಿ ಸೇರಿದಂತೆ ಒಟ್ಟು 761 ಮಹಿಳೆಯರು ಕಣದಲ್ಲಿದ್ದರು.
ಪಕ್ಷೇತರರು ಪಶ್ಚಿಮಬಂಗಾಳದಲ್ಲಿ ಒಟ್ಟು ಮತಗಳ ಶೇ.2.2(11,84,047), ತಮಿಳುನಾಡಿನಲ್ಲಿ ಶೇ.1.4 (6,17,907), ಕೇರಳದಲ್ಲಿ ಶೇ.5.3(10,66,995), ಅಸ್ಸಾಂನಲ್ಲಿ ಶೇ. 11(18,67532) ಹಾಗೂ ಪುದುಚೇರಿಯಲ್ಲಿ ಶೇ. 7.9(62,884) ಮತಗಳನ್ನು ಪಡೆದಿದ್ದಾರೆ. ಪಶ್ಚಿಮಬಂಗಾಳದಲ್ಲಿ 6,55,46,101, ತಮಿಳುನಾಡಿನಲ್ಲಿ 5,79,15,075, ಕೇರಳದಲ್ಲಿ 2,56,08,720, ಅಸ್ಸಾಂನಲ್ಲಿ 1,98,66,496 ಹಾಗೂ ಪುದುಚೇರಿಯಲ್ಲಿ 9,27,034 ಒಟ್ಟು ಮತದಾರರಿದ್ದರು.
ಈ ರಾಜ್ಯಗಳಲ್ಲಿ ಕಳೆದ 2011ರ ವಿಧಾನಸಭಾ ಚುನಾವಣೆಗಳಲ್ಲಿ 7 ಮಂದಿ ಪಕ್ಷೇತರರು ವಿಜಯ ಸಾಧಿಸಿದ್ದರು. ಅವರಲ್ಲಿ ಪಶ್ಚಿಮಬಂಗಾಳ, ಅಸ್ಸಾಂ ಹಾಗೂ ಕೇರಳಗಳ ತಲಾ ಇಬ್ಬರು ಹಾಗೂ ಪುದುಚೇರಿಯ ಒಬ್ಬರಾಗಿದ್ದರು. ಈ ಸಲವೂ ತಮಿಳುನಾಡಿನಲ್ಲಿ ಯಾವನೇ ಸ್ವತಂತ್ರ ಅಭ್ಯರ್ಥಿ ಗೆದ್ದಿರಲಿಲ್ಲ.
2011ರಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 1,504, ಪಶ್ಚಿಮಬಂಗಾಳದಲ್ಲಿ 401, ಕೇರಳದಲ್ಲಿ 309, ಅಸ್ಸಾಂನಲ್ಲಿ 263 ಹಾಗೂ ಪುದುಚೇರಿಯಲ್ಲಿ 79 ಸೇರಿದಂತೆ ಒಟ್ಟು 2,556 ಮಂದಿ ಪಕ್ಷೇತರರು ಸ್ಪರ್ಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X