ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡೆ ರೂಪಾ ಗಂಗುಲಿ ಮೇಲೆ ಹಲ್ಲೆ

ಕೋಲ್ಕತಾ, ಮೇ 23: ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡೆ ಹಾಗೂ ನಟಿ ರೂಪಾ ಗಂಗುಲಿ ಮೇಲೆ ದುಷ್ಕರ್ಮಿಗಳ ತಂಡವೊಂದು ರವಿವಾರ ಹಲ್ಲೆ ನಡೆಸಿದ್ದು, ರೂಪಾ ಅವರು ಗಂಭೀರ ಗಾಯಗೊಂಡಿದ್ದಾರೆ.
ರೂಪಾ ತಲೆಗೆ ಗಂಭೀರ ಪೆಟ್ಟಾಗಿದೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯೆರೆ
ಎಂಬುದು ಸ್ಪಷ್ಟಗೊಂಡಿಲ್ಲ.
24 ಪರಗಣ ಜಿಲ್ಲೆಯಲ್ಲಿ ರಾಜಕೀಯ ದಾಳಿಯ ಪರಿಣಾಮವಾಗಿ ಗಾಯಗೊಂಡವರನ್ನು ಭೇಟಿಯಾಗಿ ವಾಪಾಸಾಗುತ್ತಿದ್ದ ರೂಪಾ ಗಂಗುಲಿ ಅವರ ವಾಹನದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು.
ರೂಪಾ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
Next Story





