ತುಂಬೆಯಲ್ಲಿ ನೀರಿನ ಮಟ್ಟ ಹೆಚ್ಚಳ: ನಗರಕ್ಕಿನ್ನು ಮೂರು ದಿನಗಳಿಗೊಮ್ಮೆ ನೀರು ಪೂರೈಕೆ

ಮಂಗಳೂರು, ಮೇ 23: ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಇನ್ನು ಮುಂದೆ ಮೂರು ದಿನಗಳಿಗೊಮ್ಮೆ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿದೆ.
ಇಂದು ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ 6 ಅಡಿ 2 ಇಂಚಿಗೆ ಏರಿಕೆಯಾಗಿದೆ. ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಮೂರು ದಿನಗಳಿಗೊಮ್ಮೆ ನಗರಕ್ಕೆ ನೀರು ಸರಬರಾಜು ಮಾಡಲಾಗುವುದು ಎಂದು ಮನಪಾ ಆಯುಕ್ತ ಡಾ. ಎಚ್. ಗೋಪಾಲಕೃಷ್ಣ ಮತ್ತು ಮನಪಾ ಮೇಯರ್ ಹರಿನಾಥ್ ತಿಳಿಸಿದ್ದಾರೆ.
Next Story





