Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಸಚಿವ ಯು.ಟಿ.ಖಾದರ್...

ತೊಕ್ಕೊಟ್ಟು: ಸಚಿವ ಯು.ಟಿ.ಖಾದರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 May 2016 7:55 PM IST
share
ತೊಕ್ಕೊಟ್ಟು: ಸಚಿವ ಯು.ಟಿ.ಖಾದರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

ಉಳ್ಳಾಲ, ಮೇ 23: ಔಷಧ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಮಹಿಳಾ ಉಪಾಧ್ಯಕ್ಷೆ ಸುಲೋಚನಾ ಭಟ್, ಸಚಿವ ಖಾದರ್ ಅವರು ರಾಜ್ಯದಲ್ಲಿ ನಂ.1 ಎನಿಸಿಕೊಂಡಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿತ್ತು. ಆದರೆ ಇದೀಗ ಕೋಟ್ಯಂತರ ಹಗರಣದಲ್ಲಿ ಭಾಗಿಯಾಗಿ ಜಿಲ್ಲೆಯ ಮರ್ಯಾದೆಯನ್ನೇ ಹರಾಜಿಗಿಟ್ಟಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದ ವ್ಯಕ್ತಿಯೋರ್ವರು ಮಾಹಿತಿ ಹಕ್ಕು ಕಾಯ್ದೆಯಡಿ ಅಧಿಕೃತವಾಗಿ ತೆಗೆದಿರುವ ಮಾಹಿತಿಯನ್ನು ಸುಳ್ಳೆಂದು ಹೇಳುವುದರಲ್ಲಿ ಅರ್ಥವಿಲ್ಲ. ನಕಲಿ ಕಂಪೆನಿಗಳ ಹೆಸರಿನಲ್ಲಿ ಕೇಂದ್ರ ಸರಕಾರದ ಹಣ ಲಪಟಾಯಿಸಿರುವುದು ಯಾವ ನ್ಯಾಯ ಎಂದು ಎಂದು ಹೇಳಿದರು.

ಅರಣ್ಯ, ರಾಷ್ಟ್ರೀಯ ಹೆದ್ದಾರಿ, ಪರಿಸರ ಇಲಾಖೆಗಳ ಅನುಮತಿ ದೊರೆಯದೇ ಇದ್ದರೂ, ಎತ್ತಿನಹೊಳೆ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ವಿಧಾನಸಭೆಯಲ್ಲಿ ಅಂಗೀಕರಿಸಿ ಯೋಜನೆಯನ್ನು ಹಿಂಪಡೆಯಲು ಸಾಧ್ಯವೇ ಇಲ್ಲ ಅನ್ನುತ್ತಿದ್ದಾರೆ. ಆರೋಪಗಳು ಕೇಳಿಬಂದಾಗ ಟೆಂಡರ್ ಆಗಿರುವುದು ಸಚಿವರ ಗಮನಕ್ಕೆ ಬಂದಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಯಾವ ರೀತಿಯ ಅರಾಜಕತೆ ಸೃಷ್ಟಿಯಾಗಿದೆ ಎನ್ನುವುದನ್ನು ಎಲ್ಲರೂ ಗಮನಿಸಬೇಕಿದೆ ಎಂದರು.

ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, 15 ಲಕ್ಷ ಕೋಟಿ ರೂ. ವಕ್ಫ್ ಆಸ್ತಿಯನ್ನು ಕಾಂಗ್ರೆಸ್‌ನವರು ನುಂಗಿದ್ದಾರೆ. ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ನುಂಗಲು ಮುಂದಾಗಿದ್ದಾರೆ. ಇಂತಹ ಜನರಿಗೆ ಕೆಡುಕು ಬಯಸುವ ಸರಕಾರಕ್ಕೆ ಶಾಪ ತಟ್ಟದೆ ಇರಲಾರದು ಎಂದರು.

ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ನಿತಿನ್ ಕುಮಾರ್, ಮಾಜಿ ಶಾಸಕ ಜಯರಾಮ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X