Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಮಾರ್ಟ್‌ಸಿಟಿ ಬದಲು ಸ್ಮಾರ್ಟ್‌ ಹಳ್ಳಿ...

ಸ್ಮಾರ್ಟ್‌ಸಿಟಿ ಬದಲು ಸ್ಮಾರ್ಟ್‌ ಹಳ್ಳಿ ನಿರ್ಮಿಸಿ: ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ23 May 2016 10:23 PM IST
share
ಸ್ಮಾರ್ಟ್‌ಸಿಟಿ  ಬದಲು ಸ್ಮಾರ್ಟ್‌ ಹಳ್ಳಿ ನಿರ್ಮಿಸಿ: ಚಂದ್ರಶೇಖರ ಕಂಬಾರ

ಕಡೂರು, ಮೇ 23: ಸ್ಮಾರ್ಟ್‌ಸಿಟಿ ನಿರ್ಮಾಣ ಮಾಡಿ ಕಾರ್ಪೊರೇಟ್ ವಲಯಕ್ಕೆ ಹೆಚ್ಚು ಅನುಕೂಲ ಮಾಡಿಕೊಡುವ ಬದಲು ಪ್ರಧಾನಿ ಮೋದಿ ಅವರು, ಸ್ಮಾರ್ಟ್ ಹಳ್ಳಿಗಳನ್ನು ನಿರ್ಮಿಸಲು ಮುಂದಾಗಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಹೋಗುವ ಮಾರ್ಗಮಧ್ಯೆ ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಸ್ಮಾರ್ಟ್‌ಸಿಟಿ ನಿರ್ಮಾಣ ಮಾಡಲು ಹೋಗುತ್ತಿದ್ದಾರೆ. ಅದರಿಂದ ಕಾರ್ಪೊರೇಟ್ ವಲಯ ಮಾತ್ರ ಉದ್ದಾರವಾಗುತ್ತದೆ. ಅವರು, ಸ್ಮಾರ್ಟ್‌ವಿಲೇಜ್ ನಿರ್ಮಾಣ ಮಾಡಬೇಕು. ಅಲ್ಲಿನ ಪಾರಂಪರಿಕ ಸೌಂದರ್ಯವನ್ನುಳಿಸಿಕೊಂಡು ಸಮಾನತೆಯ ಸೌಲಭ್ಯ ನೀಡಬೇಕು. ಪ್ರತೀ ಮನೆಯಲ್ಲಿಯೂ ಶೌಚಾಲಯ,ಸಾಮೂಹಿಕ ಸ್ಮಶಾನ ಮುಂತಾದವುಗಳನ್ನು ಮಾಡಬೇಕು ಎಂದರು. ಕನ್ನಡ ಭಾಷೆ ಉಳಿಸಲು ಸಾಹಿತಿ ಚಂದ್ರಶೇಖರ ಪಾಟೀಲರು ಆರಂಭಿಸಿರುವ ಚಳವಳಿಗೆ ಪ್ರತಿಯೊಬ್ಬರೂ ಬೆಂಬಲಿಸಬೇಕು. ಸಾಹಿತಿಗಳು, ಕನ್ನಡ ಪರ ಸಂಘಟನೆಗಳು ಅವರ ವಿಚಾರಧಾರೆಯನ್ನು ಅನುಮೋದಿಸಬೇಕು. ಈ ಚಳವಳಿಯಲ್ಲಿ ಎಲ್ಲರೂ ನಾನೇ ಮುಂದಾಳು ಎಂದು ಹೋಗಿ ಅದನ್ನು ಕೆಡಿಸುವ ಅಪಾಯವಿದೆ. ಹಾಗಾಗಿ ಎಲ್ಲರೂ ಅವರನ್ನು ಬೆಂಬಲಿಸಬೇಕು. ಸಂಸತ್ತಿನಲ್ಲಿ ಈ ಬಗ್ಗೆ ತೀರ್ಮಾನವಾದರೆ ದೇಶೀಯ ಭಾಷೆಗಳ ಉಳಿವು ಸಾಧ್ಯವಿದೆ. ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದರು.

ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಬಗ್ಗೆ ಕೇಳಿದಾಗ ಸದ್ಯಕ್ಕೆ ಕನ್ನಡ ಉಳಿಯುವುದೇ ಅನುಮಾನವಾಗಿರುವ ಪರಿಸ್ಥಿತಿ ಉಂಟಾಗಿದೆ. ಮೊದಲು ಅದು ಉಳಿಯಲಿ. ನಂತರ ಶಾಸ್ತ್ರೀಯ ಸ್ಥಾನಮಾನದ ಬಗ್ಗೆ ಯೋಚನೆ ಎಂದು ವಿಷಾದಭರಿತ ಧ್ವನಿಯಲ್ಲಿ ನುಡಿದ ಕಂಬಾರರು, ಮೈಸೂರಿನ ಸಾಹಿತಿ ಭಗವಾನ್ ಅವರು, ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ತೊಂದರೆ ಏನಿದೆ? ಕನ್ನಡದ ಪರ ವಿಧಾನಸಭೆಯಲ್ಲಿ ಗಟ್ಟಿಯಾಗಿ ಮಾತನಾಡಲು ಒಬ್ಬರು ಇರಬೇಕು. ಭಗವಾನ್ ಅವರ ಕನ್ನಡ ಭಾಷಾ ಪ್ರೇಮ ಮತ್ತು ಬದ್ಧ್ದತೆ ಬಗ್ಗೆ ಎರಡು ಮಾತಿಲ್ಲ. ಇನ್ನೂ ಧರ್ಮದ ಬಗ್ಗೆ ಅವರ ವಿಚಾರಧಾರೆ ಅವರ ವೈಯಕ್ತಿಕ. ಅದರ ಬಗ್ಗೆ ಏನೂ ಹೇಳಲಾರೆ ಎಂದರು.

ಕನ್ನಡ ಶಾಲೆಗಳನ್ನು ಮುಚ್ಚುತ್ತಿರುವ ಬಗ್ಗೆ ಮಾತನಾಡಿದ ಕಂಬಾರರು, ಕನ್ನಡ ಭಾಷೆ ಉಳಿಯಲೇಬೇಕು. ಅದಕ್ಕಾಗಿ ಈ ಕಾಲಘಟ್ಟದಲ್ಲಿ ಮತ್ತೊಂದು ಗೋಕಾಕ್ ಮಾದರಿ ಚಳವಳಿಯ ಅಗತ್ಯವಿದೆ. 10 ನೆ ತರಗತಿಯ ತನಕ ಶಿಕ್ಷಣ ರಾಷ್ಟ್ರೀಕರಣವಾಗಬೇಕು ಹಾಗೂ ಏಕರೂಪದ ಶಿಕ್ಷಣ ಜಾರಿಯಾಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X