ವಿದ್ಯುತ್ ಆಘಾತಕ್ಕೆಯುವತಿ ಮೃತ್ಯು
ಶಿವಮೊಗ್ಗ, ಮೇ 23: ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಸೀಬಿನಕೆರೆಯಲ್ಲಿರುವ ಸುಧು ಇಂಡಸ್ಟ್ರಿಯಲ್ಲಿ ವರದಿಯಾಗಿದೆ. ಆಶ್ರಯಾ(17) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಈಕೆ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ಆಘಾತದಿಂದ ಅಸುನೀಗಿದ್ದರು. ಇಂಡಸ್ಟ್ರಿ ಮಾಲಕರು ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದೆ ಇರುವುದು ಹಾಗೂ ಮೆಸ್ಕಾಂನವರು ಇಂಡಸ್ಟ್ರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ತೋರಿದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಮೃತಳ ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





