Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಳೆ ಬಂದರಿನ ವ್ಯಾಪಾರಸ್ಥರು ಬೈಕಂಪಾಡಿ...

ಹಳೆ ಬಂದರಿನ ವ್ಯಾಪಾರಸ್ಥರು ಬೈಕಂಪಾಡಿ ಎಪಿಎಂಸಿ ಪ್ರದೇಶಕ್ಕೆ ಸ್ಥಳಾಂತರಗೊಂಡರೆ ಎಪಿಎಂಸಿ ಸಮಗ್ರ ಅಭಿವೃದ್ಧಿ: ಸಚಿವ ರೈ

ವಾರ್ತಾಭಾರತಿವಾರ್ತಾಭಾರತಿ24 May 2016 9:29 PM IST
share
ಹಳೆ ಬಂದರಿನ ವ್ಯಾಪಾರಸ್ಥರು ಬೈಕಂಪಾಡಿ ಎಪಿಎಂಸಿ ಪ್ರದೇಶಕ್ಕೆ ಸ್ಥಳಾಂತರಗೊಂಡರೆ ಎಪಿಎಂಸಿ ಸಮಗ್ರ ಅಭಿವೃದ್ಧಿ: ಸಚಿವ ರೈ

ಮಂಗಳೂರು,ಮೇ 24; ಬೈಕಂಪಾಡಿ ಎಪಿಎಂಸಿಯ ಸ್ಥಳದಲ್ಲಿ ನಗರದ ಹಳೆ ಬಂದರಿನ ಎಲ್ಲಾ ವ್ಯಾಪಾರಿಗಳು ವ್ಯಾಪಾರ ನಡೆಸುವುದಾದರೆ ಸರಕಾರ ಎಪಿಎಂಸಿಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಎಪಿಎಂಸಿ ಸಭಾಂಗಣದಲ್ಲಿ ಇಂದು ಎಪಿಎಂಸಿ ಅಭಿವೃದ್ಧಿ ಕುರಿತ ವರ್ತಕರ ಸಭೆಯಲ್ಲಿ ಅವರು ಮಾತನಾಡಿದರು.

ಮಂಗಳೂರು ಕೃಷಿ ಉತ್ಪನ್ನ ಕೇಂದ್ರ (ಎಪಿಎಂಸಿ) ವಿವಿಧ ಕಾರಣಗಳಿಂದ ಬೆಳೆದಿಲ್ಲ. ಇದರ ಸಮಗ್ರ ಅಭಿವೃದ್ಧಿಗಾಗಿ ಪುನಶ್ಚೇತನಗೊಳಿಸಿ ಕಾರ್ಯರೂಪಕ್ಕೆ ತರುವಂತಾಗಬೇಕಿದೆ. 80 ಎಕರೆಯಷ್ಟು ಸ್ಥಳವಿದ್ದರೂ ಉಪಯೋಗಕ್ಕೆ ಬಾರದಂತಹ ಸ್ಥಿತಿ ಎಪಿಎಂಸಿಯದ್ದಾಗಿದೆ. ಬಂದರಿನ ಎಪಿಎಂಸಿ ಸಬ್‌ಯಾರ್ಡ್‌ನಿಂದ ವರ್ತಕರನ್ನು ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರಿಸುವ ಬಗ್ಗೆ ಚರ್ಚಿಸಿ ಸಾಧಕ- ಬಾಧಕಗಳನ್ನು ವಿಮರ್ಶೆ ಮಾಡಿದ ಬಳಿಕ ನಿರ್ಣಯ ಕೈಗೊಳ್ಳಬೇಕು. ಈ ಹಿಂದೆ ಎಪಿಎಂಸಿ ಕೇಂದ್ರವು ಅಭಿವೃದ್ಧಿಯಾಗಬೇಕೆಂಬ ಯಾವುದೇ ಪ್ರಸ್ತಾವನೆಯಿಲ್ಲದೆ, ಯಥಾಸ್ಥಿತಿಯಲ್ಲಿ ಇಲ್ಲಿಯವರೆಗೆ ನಡೆದುಕೊಂಡು ಬಂದಿದೆ. ಅಭಿವೃದ್ಧಿಯ ದೃಷ್ಟಿಕೋನ ಹೊಂದಿರದೆ ವ್ಯಾಪಾರ ನಡೆಯಬೇಕೆಂದು ಯಾರೂ ಯೋಚನೆ ಮಾಡಿಲ್ಲದಿರುವುದು ವಿಪರ್ಯಾಸ ಎಂದು ಹೇಳಿದರು.

ದ.ಕ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಮಾತನಾಡಿ, ಬಂದರು ಎಪಿಎಂಸಿ ಸಬ್‌ಯಾರ್ಡ್‌ನಿಂದ ಬೈಕಂಪಾಡಿಗೆ ವರ್ತಕರು ಸ್ಥಳಾಂತರಗೊಂಡರೆ ಬಂದರು ರಸ್ತೆ, ಬೀಬಿ ಅಲಾಬಿ ರಸ್ತೆ ಹಾಗೂ ಕಾಳಿಕಾಂಬ ದೇವಸ್ಥಾನ ರಸ್ತೆ ನಗರದ ಮುಖ್ಯ ರಸ್ತೆಗಳಂತಾಗುತ್ತದಲ್ಲದೇ, ಈ ಪ್ರದೇಶಗಳು ಸಮಗ್ರ ಅಭಿವೃದ್ಧಿಯಾಗುತ್ತವೆ. ಎರಡೆರಡು ಕಡೆಗಳಲ್ಲಿ ಎಪಿಎಂಸಿಗಳಿರುವುದರಿಂದ ಸಮಸ್ಯೆಗಳಾಗುತ್ತವೆ. ಹಳೆ ಬಂದರು ಪ್ರದೇಶದಲ್ಲಿ ಘನ ವಾಹನಗಳ ಸಾಗಾಟದಿಂದ ಇತರ ವಾಹನಗಳು ಸಾಗಲು ಸಮಸ್ಯೆಗಳಾಗುತ್ತವೆ. ಎಲ್ಲಾ ವರ್ತಕರನ್ನು ಬೈಕಂಪಾಡಿ ಎಪಿಎಂಸಿಗೆ ಸ್ಥಳಾತರಿಸಿದಲ್ಲಿ ರಸ್ತೆ ಸಂಚಾರ ಸಮಸ್ಯೆ ಪರಿಹಾರವಾಗುತ್ತಲ್ಲದೇ, ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೂ ಸಹಾಯಕವಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಸಚಿವ ಕೆ. ಅಭಯ ಚಂದ್ರ ಜೈನ್, ಶಾಸಕ ಮೊಯ್ದೀನ್ ಬಾವಾ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ, ಹೆಚ್ಚುವರಿ ಆಯುಕ್ತ ಗೋಕುಲದಾಸ್ ನಾಯಕ್, ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಜಿ. ವಿಶ್ವನಾಥ್ ಕಾಮತ್, ಎಸಿಪಿ ಉದಯನಾಯಕ್, ದೇವರಾಜ್ ಅರಸ್ ಟ್ರಕ್ ಟರ್ಮಿನಲ್‌ನ ಎಂ.ಡಿ. ಮಲ್ಲಿಕಾರ್ಜುನ, ಕೆಸಿಸಿಐ ಆಧ್ಯಕ್ಷ ರಾಮ್ ಮೋಹನ ಪೈ ಮಾರೂರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X