ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದ ವತಿಯಿಂದ ಪುಸ್ತಕ, ಧನಸಹಾಯ ವಿತರಣೆ

ಮಂಗಳೂರು,ಮೇ 24; ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಬಡ ರೋಗಿಗಳಿಗೆ ಆರ್ಥಿಕ ಸಹಾಯದ ಚೆಕ್ ವಿತರಣಾ ಸಮಾರಂಭವು ನಗರದ ಉತ್ತರ ದಕ್ಕೆಯಲ್ಲಿರುವ ಸಂಘದ ವಠಾರದಲ್ಲಿ ನಡೆಯಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೊ ಬಡ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು.
ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಜೆ. ಮುಹಮ್ಮದ್ ಇಸಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮಾಜಿ ಮೇಯರ್ ಕೆ. ಅಶ್ರಫ್, ಕಾರ್ಪೊರೇಟರ್‌ಗಳಾದ ಅಬ್ದುಲ್ಲತೀಫ್, ಲ್ಯಾನ್ಸಿಲಾಟ್ ಪಿಂಟೊ, ಮುಹಮ್ಮದ್ ಕುಂಜತ್‌ಬೈಲ್, ಟ್ರಾಲ್‌ಬೋಟ್ ಯೂನಿಯನ್‌ನ ಅಧ್ಯಕ್ಷ ನಿತಿನ್ ಕುಮಾರ್, ಮಂಗಳೂರು ಅಲ್ಪಸಂಖ್ಯಾತ ಮೀನುಗಾರರ ಗ್ರಾಹಕರ ಸಹಕಾರ ಸಂಘದ ಅಧ್ಯಕ್ಷ ಹುಸೈನ್ ಬೋಳಾರ, ಹಸಿಮೀನು ವ್ಯಾಪಾರಸ್ಥರ ಸಹಕಾರ ಸಂಘದ ಅಧ್ಯಕ್ಷ ಸುಲೈಮಾನ್ ಎಂ.ಎಸ್.ಎನ್, ಒಣಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಯು.ಕೆ. ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.







