ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;ಕಲಾ ವಿಭಾಗದಲ್ಲಿ ಬಾಳೆ ಹಣ್ಣು ವ್ಯಾಪಾರಿಯ ಮಗಳು ರಾಜ್ಯಕ್ಕೆ ಪ್ರಥಮ

ಬೆಂಗಳೂರು, ಮೇ 25: ಬುಧವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿನಿ ಅನಿತಾ ಬಸಪ್ಪ ಅವರು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಬಾಳೆಹಣ್ಣು ವ್ಯಾಪಾರಿ ಮಗಳು ಅನಿತಾ 600ರಲ್ಲಿ 594 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಸರ್ದಾರ್ ವಲ್ಲಭಬಾಯ್ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ (596) ಮೊದಲ ಸ್ಥಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವಿಜಯಪುರದ ವಿ.ಎಸ್ ದರ್ಬಾರ‍್ ಕಾಲೇಜಿನ ವಿಧ್ಯಾರ್ಥಿನಿ ಸಹನಾ ಕುಲಕರ್ಣಿ ( 594) ಮೊದಲ ಸ್ಥಾನ ಗಳಿಸಿದ್ದಾರೆ.

Next Story





