ಮೇ 26: ಸುಳ್ಯ ನಗರ ಪಂಚಾಯತ್ ಆಡಳಿತದ ವಿರುದ್ಧ ಪ್ರತಿಭಟನೆ
ಸುಳ್ಯ, ಮೇ 25: ಸುಳ್ಯ ನಗರ ಪಂಚಾಯತ್ ಆಡಳಿತದ ವಿರುದ್ಧ ಕಾಂಗ್ರೆಸ್ ಗುರುವಾರ ಪ್ರತಿಭಟನೆ ನಡೆಸಲಿದೆ.
ಸುಳ್ಯ ನಗರ ಪಂಚಾಯತ್ ಆಡಳಿತ ವ್ಯವಸ್ಥೆಯು ತೀರಾ ಹದಗೆಟ್ಟಿದ್ದು, ಸದಸ್ಯರನ್ನು ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿಯಮ ಬಾಹಿರವಾಗಿ ಕಾಮಗಾರಿ ನಿರ್ವಹಣೆ ಮಾಡಲಾಗುತ್ತಿದೆ. ಸ್ವಜನ ಪಕ್ಷಪಾತ ಮತ್ತು ಭ್ರಷ್ಟಾಚಾರ ಮಿತಿ ಮೀರಿದೆ. ಪಂಪ್‌ಹೌಸ್‌ನಲ್ಲಿ ನಡೆದ ಮೋಜಿನ ಪಾರ್ಟಿಯ ಅಸಹ್ಯಕರವಾಗಿದೆ. ಇವೆಲ್ಲದರ ವಿರುದ್ಧ ಸುಳ್ಯ ನಗರ ಕಾಂಗ್ರೆಸ್, ನಗರ ಯುವ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್‌ನ ಸಹಯೋಗದೊಂದಿಗೆ ಹಾಗೂ ಪಕ್ಷದ ವಿವಿಧ ಮುಂಚೂಣಿ ಘಟಕಗಳ ಜಂಟಿ ಆಶ್ರಯದಲ್ಲಿ ಗುರುವಾರ ಪೂರ್ವಾಹ್ನ 10 ಗಂಟೆಗೆ ನಗರ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ಮತ್ತು ಕಚೇರಿಗೆ ಮುತ್ತಿಗೆ ಕಾರ್ಯಕ್ರಮವು ನಡೆಯಲಿದೆ. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ವೆಂಕಪ್ಪ ಗೌಡ ಮತ್ತು ವಿವಿಧ ಘಟಕಗಳ ನಾಯಕರುಗಳು, ನಗರ ಪಂಚಾಯತ್ ಹಾಲಿ, ಮಾಜಿ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಶೆಣೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.





