Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ್ವಿತೀಯ ಪಿಯುಸಿ: ಆಳ್ವಾಸ್ ಪದವಿಪೂರ್ವ...

ದ್ವಿತೀಯ ಪಿಯುಸಿ: ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಶೇ.99.20 ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ25 May 2016 8:24 PM IST
share
ದ್ವಿತೀಯ ಪಿಯುಸಿ: ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಶೇ.99.20 ಫಲಿತಾಂಶ

ಮೂಡುಬಿದಿರೆ, ಮೇ 25: ರಾಜ್ಯದಲ್ಲೇ ಅತಿ ಹೆಚ್ಚು ಪಿಯುಸಿ ವಿದ್ಯಾರ್ಥಿಗಳನ್ನು ಹೊಂದಿರುವ ಆಳ್ವಾಸ್ ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶೇ.99.20 ಫಲಿತಾಂಶವನ್ನು ಪಡೆದಿದ್ದು ಕಳೆದ 8 ವರ್ಷಗಳಿಂದ 99 ಶೇ. ಪಡೆದ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾಲೇಜಿನಿಂದ ಒಟ್ಟು 4,285 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 4,251 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 3,409 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,386 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.99.33 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 815 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 806 ವಿದ್ಯಾರ್ಥಿಗಳು ಉರ್ತ್ತೀಣರಾಗುವುದರೊಂದಿಗೆ ಶೇ.98.90 ಫಲಿತಾಂಶ ಲಭಿಸಿದೆ.

61 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಹಾಜರಾಗಿದ್ದು, 59 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ 96.72 ಫಲಿತಾಂಶ ಗಳಿಸಿದೆ.

 ವಾಣಿಜ್ಯ ‘ಡಬಲ್’ ಸಾಧನೆ

ಆಳ್ವಾಸ್ ಕಾಲೇಜಿನ ಆಶಿಕ್ ನಾರಾಯಣ ಹಾಗೂ ದಕ್ಷಾ ಜೈನ್ 593( ಶೇ.98.83) ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ.

                        

ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ಸನ್ಮಯಿ.ಎಂ 591(ಶೇ.98.5) ಅಂಕಗಳನ್ನು ಪಡೆದಿದ್ದು, ರಾಜ್ಯದ ವಿಜ್ಞಾನ ವಿಭಾಗದಲ್ಲಿ 6 ನೆ ಸ್ಥಾನ ಹಾಗೂ ಈ ವಿಭಾಗದಲ್ಲಿ ವಲಯದಲ್ಲೇ ಪ್ರಥಮ ಸ್ಥಾನ ಗಳಿಸಿದ್ದಾರೆ. 

ಕಲಾ ವಿಭಾಗದಲ್ಲಿ ರಾಹುಲ್ 559 ಅಂಕ ಗಳಿಸಿದ್ದಾನೆ.

ಕಾಲೇಜಿನ 12 ವಿದ್ಯಾರ್ಥಿಗಳು ಶೇ.98ಕ್ಕಿಂತ ಅಧಿಕ ಹಾಗೂ 331 ವಿದ್ಯಾರ್ಥಿಗಳು ಶೇ.95ಕ್ಕಿಂತ ಅಧಿಕ ಅಂಕಗಳನ್ನು ಪಡೆದಿದ್ದಾರೆ. ಎಸೆಸೆಲ್ಸಿಯಲ್ಲಿ ಶೇ.95ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ 269 ವಿದ್ಯಾರ್ಥಿಗಳಿದ್ದಾರೆ, ಆಳ್ವಾಸ್‌ಗೆ ಸೇರಿ ಇಲ್ಲಿ ಪಿಯುಸಿ 343 ವಿದ್ಯಾರ್ಥಿಗಳು ಶೇ.95 ಅಂಕ ಗಳಿಸಿರುವುದು ಸಾಧನೆಯಾಗಿದೆ. 1,190 ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ, 2049 ವಿದ್ಯಾರ್ಥಿಗಳು 85ಕ್ಕೂ ಅಧಿಕ ಅಂಕಗಳಿಸಿ ಸಾಧನೆ ಮೆರೆದಿದ್ದಾರೆ.

ರಾಜ್ಯದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ 100ರಲ್ಲಿ 100 ಅಂಕಗಳಿಸಿದ್ದು, ಇದರಲ್ಲಿ ಆಳ್ವಾಸ್‌ನ 37 ವಿದ್ಯಾರ್ಥಿಗಳೇ ಇರುವುದು ಮತ್ತೊಂದು ದಾಖಲೆ. ಕನ್ನಡ-4, ಸಂಸ್ಕೃತ-32, ರಾಸಾಯನಶಾಸ್ತ್ರ-125, ಗಣಿತ-143, ಜೀವಶಾಸ್ತ್ರ-76, ಹಿಂದಿ-1, ಕಂಪ್ಯೂಟರ್‌ಸೈನ್ಸ್-36, ಸಂಖ್ಯಾಶಾಸ್ತ್ರ-65, ಇಲೆಕ್ಟ್ರಾನಿಕ್ಸ್-22, ಬೇಸಿಕ್ ಮ್ಯಾಥ್ಸ್-60, ಬ್ಯುಸಿನೆಸ್ ಸ್ಟಡಿ-66, ಅಕೌಂಟ್ಸ್-75, ಬೇಸಿಕ್ ಮ್ಯಾಥ್ಸ್-26, ಅರ್ಥಶಾಸ್ತ್ರದಲ್ಲಿ 4 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಕ್ರೀಡಾ ವಿದ್ಯಾರ್ಥಿಗಳ ಸಾಧನೆ

ಕ್ರೀಡಾ ಸಾಧನೆಯನ್ನು ಪಡೆದು 93 ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಹಿಂದೆ ದತ್ತು ಶಿಕ್ಷಣ ಯೋಜನೆಯಡಿ ಉಚಿತ ಶಿಕ್ಷಣ ವ್ಯವಸ್ಥೆ ಮಾಡಲಾಗಿದ್ದು, ಇದರಲ್ಲಿ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಬ್ಬರು, ರಾಷ್ಟ್ರಮಟ್ಟದಲ್ಲಿ 27 ವಿದ್ಯಾರ್ಥಿಗಳು ಹಾಗೂ 78 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪದಕ ವಿಜೇತರಾಗಿದ್ದಾರೆ ಎಂದು ಡಾ.ಆಳ್ವ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಶೆಟ್ಟಿ, ಪಿಆರ್‌ಒ ಡಾ.ಪದ್ಮನಾ ಶೆಣೈ ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಶೇ.99ಕ್ಕಿಂತಲೂ ಹೆಚ್ಚು ಅಂಕ ಪಡೆದಿರುವುದು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ನಮ್ಮಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಂತಹ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದ.ಕ ಜಿಲ್ಲೆ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಅಗ್ರಸ್ಥಾನಿಯಾಗಲು, ಆಳ್ವಾಸ್‌ನ ಕೊಡುಗೆಯೂ ಮಹತ್ವದಾಗಿದೆ.

ಡಾ.ಎಂ.ಮೋಹನ ಆಳ್ವ, ಅಧ್ಯಕ್ಷರು,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X