Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾಸ್ಪತ್ರೆಯ ದುರವಸ್ಥೆ ಸರಿಪಡಿಸಲು...

ಜಿಲ್ಲಾಸ್ಪತ್ರೆಯ ದುರವಸ್ಥೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 May 2016 9:58 PM IST
share
ಜಿಲ್ಲಾಸ್ಪತ್ರೆಯ ದುರವಸ್ಥೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು, ಮೇ 25: ನಗರದಲ್ಲಿರುವ ಜಿಲ್ಲಾಸ್ಪತ್ರೆ ಹೆಸರಿಗೆ ಮಾತ್ರ ಜಿಲ್ಲಾಸ್ಪತ್ರೆಯಾಗಿದ್ದು, ಇಲ್ಲಿನ ವ್ಯವಸ್ಥೆ ಗ್ರಾಮೀಣ ಮಟ್ಟದ ಆಸ್ಪತ್ರೆಗಿಂತಲೂ ಹೀನಾಯ ಸ್ಥಿತಿ ತಲುಪಿದೆ. ಸದ್ಯವೇ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ದಲಿತ್ ಜನ ಸೇನಾ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈದ್ಯರ ಮತ್ತು ದಾದಿಯರ ಕೊರತೆ ಇದ್ದು, ಇಲ್ಲಿಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸರಕಾರ ವಿಫಲವಾಗಿದೆ. ಆಸ್ಪತ್ರೆಯಲ್ಲಿ ತುರ್ತುನಿಗಾ ಘಟಕ ಮತ್ತು ಮಕ್ಕಳ ತುರ್ತುನಿಗಾ ಘಟಕಗಳಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯಿಲ್ಲ, 6 ಡಯಾಲಿಸಿಸ್ಸ್ ಯಂತ್ರಗಳಿದ್ದು, 1ಯಂತ್ರ ಹಾಳಾಗಿ ವರ್ಷಗಳೆ ಕಳೆದರೂ ದುರಸ್ಥಿ ಕಂಡಿಲ್ಲ ಎಂದು ದೂರಿದರು.

ರೋಗಿಗಳು ಪಕ್ಕದ ಹಾಸನ ಅಥವಾ ಮಂಗಳೂರು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಚಿಕಿತ್ಸೆಯನ್ನು ಅವಲಂಬಿಸುವಂತಾಗಿದೆ. ಇಲ್ಲಿನ ವೈದ್ಯರು ಕೂಡ ಯಾವುದೇ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಇದ್ದರೂ ಹಾಸನ, ಮಂಗಳೂರು ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮೂಲಭೂತ ವ್ಯವಸ್ಥೆಗಳಾದ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಅಧೋಗತಿ ತಲುಪಿದ್ದು, ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ಈ ಎಲ್ಲ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕು ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಹಿರೇಮಗಳೂರು, ಮಹಿಳಾ ಜಿಲ್ಲಾಧ್ಯಕ್ಷೆ ಸ್ವರ್ಣಗೌರಿ, ಸಮಾಜ ಸೇವಕ ಜಿ.ಸಿ.ಸಿಪಾನಿ, ಯುವ ಘಟಕದ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ಜೆ.ಸತ್ಯನಾರಾಯಣ, ರಿಪಬ್ಲಿಕನ್ ಸೇನೆ ಜಿಲ್ಲಾಧ್ಯಕ್ಷ ಹಾಂದಿ ಲಕ್ಷ್ಮಣ್, ಕಾರ್ಗಿಲ್ ಯುವ ಪಡೆ ಅಧ್ಯಕ್ಷ ಕಾರ್ಗಿಲ್ ಸೋಮಶೇಖರ್, ಕಾರ್ಯದರ್ಶಿ ವಿದ್ಯಾರ್ಥಿ ಘಟಕದ ಅಮಿತ್‌ಕುಮಾರ್, ಪುನಿತ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಶರತ್‌ಕುಮಾರ್, ವಿದ್ಯಾರ್ಥಿ ಘಟಕದ ಉಪಾಧ್ಯಕ್ಷರಾದ ಯೋಗಿತ್, ಸಚಿನ್, ರಾಖೇಶ್, ಪವನ್, ವಿಜಯ್, ಸ.ಕಾರ್ಯದರ್ಶಿಗಳಾದ ಮಲ್ಲಿಕ್‌ಕುಮಾರ್, ಅರುಣ್‌ಕುಮಾರ್, ದೇವು, ಚೇತನ್‌ಕುಮಾರ್, ಮೋಹನ್, ಸದಸ್ಯರಾದ ಸುನಿಲ್, ಮಂಜುನಾಥ್, ಮಂಜು, ಶ್ರೀನಿವಾಸ್, ಸಂಜು, ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X