ಎಕ್ಸಲೆಂಟ್ ಕಾಲೇಜಿಗೆ ಶೇ.97ಫಲಿತಾಂಶ
ಮೂಡುಬಿದಿರೆ, ಮೇ 25: 2015-16ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಶೇ.97 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಕಾಲೇಜಿಗೆ ಲಭಿಸಿದೆ.
ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಬಾಗದಿಂದ ಒಟ್ಟು 287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ವಿಜ್ಞಾನದಲ್ಲಿ 117 ಹಾಗೂ ವಾಣಿಜ್ಯ ವಿಬಾಗದಿಂದ 28 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
38 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಬಾಗದಲ್ಲಿ ಅನೂಷ್ 583 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದರೆ, ವಿಜ್ಞಾನ ವಿಭಾಗದಲ್ಲಿ ಸುಮುಖ್ ನಾಡಿಗ್ ಮತ್ತು ಅಭಿಷೇಕ್ ಶೆಟ್ಟಿ 580 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ ಎಂದು ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





