Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದಾಧಿಕಾರಿಗಳ ಜಾತಿಯ ಹೆಸರು ಸಹಿತ ರಾಜ್ಯ...

ಪದಾಧಿಕಾರಿಗಳ ಜಾತಿಯ ಹೆಸರು ಸಹಿತ ರಾಜ್ಯ ಬಿಜೆಪಿ ನೂತನ ಪಟ್ಟಿ ಪ್ರಕಟ !

ವಾರ್ತಾಭಾರತಿವಾರ್ತಾಭಾರತಿ26 May 2016 2:26 PM IST
share
ಪದಾಧಿಕಾರಿಗಳ ಜಾತಿಯ ಹೆಸರು ಸಹಿತ ರಾಜ್ಯ ಬಿಜೆಪಿ ನೂತನ ಪಟ್ಟಿ ಪ್ರಕಟ !

ಬೆಂಗಳೂರು, ಮೇ 26 : ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು ಎಂದು ಹೇಳುವ ಸಂಘ ಪರಿವಾರದ ರಾಜಕೀಯ ಪಕ್ಷ , ಸದಾ ಹಿಂದೂಗಳ ಒಗ್ಗಟ್ಟಿನ ಮಂತ್ರ ಪಠಿಸುವ ಬಿಜೆಪಿಯ ಕರ್ನಾಟಕ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಗುರುವಾರ ಪ್ರಕಟಿಸಿದ್ದಾರೆ. ಆದರೆ ವಿಶೇಷವೆಂದರೆ ಇದರಲ್ಲಿ ಪದಾಧಿಕಾರಿಗಳ ಹೆಸರಿನ ಜೊತೆಗೇ ಅವರ  ಜಾತಿಯನ್ನೂ ಉಲ್ಲೇಖಿಸಲಾಗಿದೆ ! 

ಮಾಧ್ಯಮಗಳಿಗೆ ಈ ಪಟ್ಟಿಯನ್ನು ಪ್ರಕಟಿಸಲು ಯಡಿಯೂರಪ್ಪನವರು ಬರೆದ ಇಂಗ್ಲೀಷ್ ನಲ್ಲಿರುವ ಪತ್ರ ಹಾಗು ಪಟ್ಟಿಯನ್ನು ಮೈಸೂರು ಸಂಸದ , ರಾಜ್ಯ ಯುವ ಮೋರ್ಚಾ ನೂತನ ಅಧ್ಯಕ್ಷ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಹಾಕಿದ್ದಾರೆ ( ಪ್ರತಿ ಕೆಳಗಿದೆ). ಅಲ್ಲಿಯೂ ಜನರು ಈ ಜಾತಿ ಆಧಾರಿತ ಪಟ್ಟಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಹತ್ತು  ಉಪಾಧ್ಯಕ್ಷರು, ಐದು ಪ್ರಧಾನ ಕಾರ್ಯದರ್ಶಿಗಳು ಹಾಗು ಹತ್ತು ಕಾರ್ಯದರ್ಶಿಗಳ ಪಟ್ಟಿಯಲ್ಲಿ ಪ್ರತಿಯೊಬ್ಬರ ಹೆಸರಿನ ಬಳಿಕ ಅವರ ಆವರಣದಲ್ಲಿ ( ಬ್ರಾಕೆಟ್) ಅವರ ಜಾತಿ ಹೆಸರನ್ನು ನಮೂದಿಸಲಾಗಿದೆ. ಬಳಿಕ ಅವರ ಊರ ಹೆಸರನ್ನು ನೀಡಲಾಗಿದೆ. 

ಪ್ರಧಾನಿ ನರೇಂದ್ರ ಮೋದಿ ಹಾಗು ಬಿಜೆಪಿಯ ವರಿಷ್ಠರು ಸದಾ  ಹಿಂದೂ ಐಕ್ಯತೆಯ ಮಾತನಾಡುತ್ತಾರೆ. ಕಾಂಗ್ರೆಸ್ ಮತ್ತಿತರ ಪಕ್ಷಗಳು ಜಾತಿ ರಾಜಕಾರಣ ಮಾಡಿ ಹಿಂದೂಗಳನ್ನು ವಿಭಜಿಸುತ್ತಿವೆ ಎಂದು ದೂರುತ್ತಾರೆ. ಪ್ರಧಾನಿಯನ್ನು ಹಿಂದೂ ಹೃದಯ ಸಾಮ್ರಾಟ್ ಎಂದೇ ಆ ಪಕ್ಷದ ಕಾರ್ಯಕರ್ತರು ಕರೆಯುತ್ತಾರೆ. ಹೀಗಿರುವಾಗ ಪಕ್ಷದ ರಾಜ್ಯ ಘಟಕ ಜಾತಿ ನಮೂದಿಸಿರುವ ಪಟ್ಟಿ ಪ್ರಕಟಿಸಿರುವುದು ವಿಶೇಷವಾಗಿದೆ. 

 

ಕೊಡವರ ಆಕ್ರೋಶ , ಬಿಜೆಪಿ ಮುಕ್ತ ಕೊಡವನಾಡುಗೆ ಕರೆ 

ನೂತನ ಪಟ್ಟಿಯಲ್ಲಿ ಕೊಡವರಿಗೆ ಪ್ರಾತಿನಿಧ್ಯ ಇಲ್ಲದೇ ಇರುವುದು ಅವರನ್ನು ಕೆರಳಿಸಿದೆ. ದೇಶದ ಪ್ರಪ್ರಥಮ ' ಕಾಂಗ್ರೆಸ್ ಮುಕ್ತ ಜಿಲ್ಲೆ ' ಕೊಡಗು ಎಂದು ಬಿಜೆಪಿ ಭಾರೀ ಪ್ರಚಾರ ಮಾಡಿತ್ತು. ಇಲ್ಲಿ ಸಂಸದರು, ಶಾಸಕರು , ಸ್ಥಳೀಯ ಸಂಸ್ಥೆಗಳು ಬಿಜೆಪಿ ಕೈಯಲ್ಲಿವೆ. ಆದರೂ ಇಲ್ಲಿಗೆ ಪ್ರಾತಿನಿಧ್ಯ ನೀಡಿಲ್ಲ. ಹೀಗೆ ಆದರೆ ಬಿಜೆಪಿ ಮುಕ್ತ ಕೊಡವನಾಡು ಮಾಡಲು ಹೊರಡಬೇಕಾಗುತ್ತದೆ ಎಂದು ಬಿಜೆಪಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X