Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಸಂಘಪರಿವಾರದ ಕಾರ್ಯಕರ್ತರಿಂದ...

ಬೆಳ್ತಂಗಡಿ: ಸಂಘಪರಿವಾರದ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ26 May 2016 8:59 PM IST
share
ಬೆಳ್ತಂಗಡಿ: ಸಂಘಪರಿವಾರದ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

ಬೆಳ್ತಂಗಡಿ, ಮೇ 26: ಬಜರಂಗದಳದ ಕಾರ್ಯಕರ್ತರಾದ ಚಂದ್ರಹಾಸ ದಾಸ್ ಹಾಗು ಅಶೋಕ್ ಆಚಾರ್ಯ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಗುರುವಾರ ಬೆಳ್ತಂಗಡಿ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿದರು.

ಮೇ 22 ರಂದು ಸಂಜೆ ಗುರುವಾಯನಕರೆ ಸನಿಹ ಪೊಟ್ಟುಕೆರೆ ಎಂಬಲ್ಲಿ ಅಶೋಕ ಆಚಾರ್ಯ ಹಾಗೂ ಹಸೈನಾರ್‌ರ ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿಯಾಗಿದ್ದವು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಚಂದ್ರಹಾಸ್ ಮತ್ತು ಅಶೋಕ್ ಆಚಾರ್ಯರ ಮೇಲೆ ಗುಂಪು ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಅಲ್ಲದೆ ಚಂದ್ರಹಾಸ ಅವರ ಬಳಿ ಇದ್ದ 40 ಸಾವಿರ ಹಾಗು ಚಿನ್ನದ ಸರವನ್ನು ದರೋಡೆ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಾದ ದದ್ದು ಯಾನೆ ಅಬ್ದುರ್ರಝಾಕ್, ನಜೀರ್, ಹಸೈನಾರ್, ರಜಾಕ್ ಹಾಗೂ ಇತರ 20 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ನಾಲ್ಕು ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೋಲಿಸರು ವಿಫಲವಾಗಿದ್ದಾರೆಂದು ಆರೋಪಿಸಿ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದರು.

ಈ ಸಂದರ್ಭ ಠಾಣೆಯ ಎಎಸ್ಸೈಗಳಾದ ಕಲೈಮಾರ್ ಹಾಗೂ ಬಾಬು ಗೌಡ, 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಂಜನ್ ಜಿ. ಗೌಡ, ಬಜರಂಗದಳ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಧರ್ಮಜಾಗರಣ ಜಿಲ್ಲಾ ನಿಧಿ ಪ್ರಮುಖ್ ಹರೀಶ್ ಪೂಂಜ, ದಿನಕರ ಆದೇಲು, ಬಿಜೆಪಿ ಮುಖಂಡ ನಾರಾಯಣ ಆಚಾರ್, ವಿ.ಹಿಂ.ಪ. ಅಧ್ಯಕ್ಷ ತಾರಾನಾಥ್, ಕಾರ್ಯದರ್ಶಿ ನವೀನ್ ನೆರಿಯ, ತಾ.ಪಂ. ಸದಸ್ಯ ಸುಧೀರ್ ಸುವರ್ಣ, ಶಶಿಧರ್ ಕಲ್ಮಂಜ, ಮಾಜಿ ಸದಸ್ಯ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಜಯಂತ ಕೋಟ್ಯಾನ್, ಹರೀಶ್ ಕುಮಾರ್ ಇಂದಬೆಟ್ಟು, ಹಿಂದೂ ಜಾಗರಣ ವೇದಿಕೆಯ ಶಾಂ ಸುಂದರ ನಡ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X