ರಾಜೀವ್ ಗಾಂಧಿ ಪುಣ್ಯ ತಿಥಿ ಆಚರಣೆ

ಮಡಿಕೇರಿ, ಮೇ 26: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 25ನೆ ಪುಣ್ಯತಿಥಿಯನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.
ಈ ಸಂದಭರ್ ಮಾತನಾಡಿದ ಟಿ.ಪಿ.ರಮೇಶ್, ಯುವ ಸಮೂಹಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದ ರಾಜೀವ್ ಗಾಂಧಿ ತಮ್ಮ ಆಡಳಿತಾವಧಿಯಲ್ಲಿ ದೇಶದ ಪ್ರಗತಿಗಾಗಿ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಗುಣಗಾನ ಮಾಡಿದರು. ಡಿಜಿಟಲ್ ಇಂಡಿಯಾ ಕನಸಿನ ಮೂಲಕ ತಾಂತ್ರಿಕ ಹಾಗೂ ವೈಜ್ಞ್ಞಾನಿಕವಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಶ್ರಮಿಸಿದರು ಎಂದು ಅವರು ಅಭಿಪ್ರಾಯಪಟ್ಟರು. ವಿದ್ರೋಹಿ ಕೃತ್ಯಗಳಿಂದ ದೇಶವನ್ನು ರಕ್ಷಿಸುವ ಕೆಲಸ ಯುವ ಸಮೂಹದಿಂದ ಆಗಬೇಕಾಗಿದೆ ಎಂದು ರಮೇಶ್ ಕರೆ ನೀಡಿದರು.
Next Story





