Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆ, ಮಕ್ಕಳ ರಕ್ಷಣೆಗೆ ಜಿಲ್ಲೆಯ...

ಮಹಿಳೆ, ಮಕ್ಕಳ ರಕ್ಷಣೆಗೆ ಜಿಲ್ಲೆಯ ಅಧಿಕಾರಿಗಳು ವಿಫಲ: ಉಗ್ರಪ್ಪ

ವಾರ್ತಾಭಾರತಿವಾರ್ತಾಭಾರತಿ26 May 2016 11:20 PM IST
share
ಮಹಿಳೆ, ಮಕ್ಕಳ ರಕ್ಷಣೆಗೆ ಜಿಲ್ಲೆಯ ಅಧಿಕಾರಿಗಳು ವಿಫಲ: ಉಗ್ರಪ್ಪ

ಉಡುಪಿ, ಮೇ 26: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ಹಾಗೂ ಅತ್ಯಾಚಾರಗಳನ್ನು ತಡೆಯುವಲ್ಲಿ, ಅವರಿಗೆ ರಕ್ಷಣೆ ನೀಡುವಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ವಿಫಲವಾಗಿವೆ. ಇಲ್ಲಿನ ಪರಿಸ್ಥಿತಿ ಅತ್ಯಂತ ನಿರಾಶಾದಾಯವಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈ ಬಗ್ಗೆ ಅಧ್ಯಯನ ನಡೆಸಲು ಇಂದು ಉಡುಪಿಗೆ ಭೇಟಿ ನೀಡಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ ಸಭಾಂಗಣದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ ಬಳಿಕ ಸಂಜೆ ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.

ಜಿಲ್ಲಾಧಿಕಾರಿಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಣೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬುದು ಅಧಿಕಾರಿಗಳು ನೀಡಿದ ಮಾಹಿತಿಗಳಿಂದ, ಉತ್ತರಗಳಿಂದ ಸಮಿತಿಯ ಸದಸ್ಯರಿಗೆ ಮನವರಿಕೆಯಾಗಿದೆ ಎಂದವರು ಹೇಳಿದರು.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕಾನೂನು ರೀತಿಯಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಿಗಬೇಕಾದ ರಕ್ಷಣೆ ಸಿಗುತ್ತಿಲ್ಲ. ನೊಂದವರಿಗೆ ನ್ಯಾಯವಾಗಲಿ, ಪರಿಹಾರವಾಗಲೀ ಸಿಗುತ್ತಿಲ್ಲ. ಕೃತ್ಯವನ್ನು ತಡೆಯಲು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿರುವುದು ಕಂಡುಬರುತ್ತಿಲ್ಲ ಎಂಬುದು ಸಮಿತಿಯ ಅಭಿಪ್ರಾಯವಾಗಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಅಂದರೆ 2006ರಿಂದ 2016ರವರೆಗೆ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಒಟ್ಟು ಸುಮಾರು 2500 ಕೇಸುಗಳು ದಾಖಲಾಗಿವೆ. ಇವುಗಳಲ್ಲಿ ವರದಕ್ಷಿಣೆ, ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ, ದೌರ್ಜನ, ಫೋಕ್ಸೊ ಕೇಸು, ಬಾಲಕಾರ್ಮಿಕ, ಬಾಲ್ಯವಿವಾಹ, ಕೊಲೆ, ಅತ್ಯಾಚಾರ ಮುಂತಾದವುಗಳು ಸೇರಿವೆ.

ಈ 2500 ಕೇಸುಗಳಲ್ಲಿ ಇತ್ಯರ್ಥಗೊಂಡಿರುವುದು 1534 ಕೇಸುಗಳು ಹಾಗೂ ಇವುಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿರುವುದು ಕೇವಲ 23 ಕೇಸುಗಳಲ್ಲಿ ಮಾತ್ರ. ಇದು ಒಟ್ಟು ಕೇಸಿನ ಕೇವಲ ಶೇ.1.7 ಮಾತ್ರ ಆಗಿದೆ. ಅಂದರೆ ಶೇ.98ರಷ್ಟು ಕೇಸುಗಳಲ್ಲಿ ಆರೋಪಿಗಳ ಬಿಡುಗಡೆಯಾಗಿದೆ. ಕಳೆದ 10 ವರ್ಷಗಳಲ್ಲಿ 149 ಅತ್ಯಾಚಾರ ಕೇಸುಗಳು ದಾಖಲಾಗಿವೆ. ಇವುಗಳಲ್ಲಿ ಶಿಕ್ಷೆಯಾಗಿರುವುದು 7 ಕೇಸುಗಳಲ್ಲಿ ಮಾತ್ರ. ಇನ್ನು ಮಕ್ಕಳ ಲೈಂಗಿಕ ದೌರ್ಜನ್ಯದ ಫೋಕ್ಸೊ ಪ್ರಕರಣ 84 ದಾಖಲಾಗಿದ್ದು, ಇತ್ಯರ್ಥಗೊಂಡಿರುವುದು 5 ಮಾತ್ರವಾಗಿದ್ದು ಶಿಕ್ಷೆಯಾಗಿರುವು ಒಂದರಲ್ಲಿ ಮಾತ್ರ. ಇನ್ನು 47 ಕೊಲೆ ಕೇಸುಗಳಲ್ಲಿ ಮೂರು ಮಾತ್ರ ತೀರ್ಪು ಬಂದಿದೆ ಎಂದವರು ಹೇಳಿದರು.

ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಶಿಕ್ಷೆ ಕೊಡಿಸುವ ಜವಾಬ್ದಾರಿ ಇರುವುದು ಪೊಲೀಸರಿಗೆ ಹಾಗೂ ಪ್ರಾಸಿಕ್ಯೂಷನ್ ಇಲಾಖೆಗೆ. ಈ ಇಲಾಖೆಗಳು ತಮ್ಮ ಜವಾಬ್ದಾರಿಯಲ್ಲಿ ಸಂಪೂರ್ಣ ವಿಫಲವಾಗಿರುವುದು ಸಮಿತಿಗೆ ಮನದಟ್ಟಾಗಿದೆ. ಸಾಕ್ಷಿಗಳು ಪ್ರತಿಕೂಲವಾಗುತ್ತಾರೆ ಎಂಬುದು ಅವರು ನೀಡುವ ಕಾರಣವಾಗಿದೆ ಎಂದು ಉಗ್ರಪ್ಪ ತಿಳಿಸಿದರು.

ಈ ಪ್ರಕರಣಗಳಲ್ಲಿ ಕೇಸು ದಾಖಲಾದ ಎಷ್ಟು ದಿನಗಳಲ್ಲಿ ಚಾರ್ಜ್‌ಶೀಟ್ ಹಾಕಬೇಕು, ಕೇಸು ಇತ್ಯರ್ಥಗೊಳ್ಳಬೇಕು ಎಂಬ ಬಗ್ಗೆ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಕಾನೂನಿನಲ್ಲಿ 90 ದಿನದೊಳಗೆ ಚಾರ್ಜ್‌ಶೀಟ್ ಹಾಕದಿದ್ದರೆ ಆರೋಪಿಗಳಿಗೆ ಜಾಮೀನು ಸಿಗುತ್ತದೆ ಎಂಬ ಮಾಹಿತಿ ಅವರಲ್ಲಿಲ್ಲ ಎಂದರು.

ಇನ್ನು ಬಿಡುಗಡೆಯಾದ ಕೇಸುಗಳಲ್ಲಿ ಅಪೀಲು ಹಾಕಲು ಮುಂದಾಗುವುದು ವಿರಳವಾಗಿದೆ. ಜಾಮೀನು ರದ್ದತಿಗೂ ಉತ್ಸಾಹ ತೋರಿಸಿರುವುದು ಕಾಣಿಸುತ್ತಿಲ್ಲ ಎಂದು ಅವರು ಹೇಳಿದರು. ಒಟ್ಟಿನಲ್ಲಿ ಆರೋಪಿಗಳಿಗೆ ಶಿಕ್ಷೆಗೆ ಗುರಿಮಾಡಲು ಬೇಕಾದ ಕ್ರಮವನ್ನು ಜಿಲ್ಲೆಯ ಅಧಿಕಾರಿಗಳು ಕೈಗೊಂಡಿಲ್ಲ ಎಂದು ಆರೋಪಿಸಿದರು

ಪ್ರತಿ ಕಚೇರಿಗಳಲ್ಲಿ ದೌರ್ಜನ್ಯ, ಲೈಂಗಿಕ ಶೋಷಣೆ ತಡೆಯಲು ಸುಪ್ರೀಂ ಕೋರ್ಟಿನ ಆದೇಶದಂತೆ ಜಾರಿಯಾದ ವಿಶಾಖ ಗೈಡ್‌ಲೈನ್ಸ್‌ನಂತೆ ಜಿಲ್ಲೆಯಲ್ಲಿ ಒಂದೇ ಒಂದು ಸಮಿತಿಯನ್ನು ರಚಿಸಲಾಗಿಲ್ಲ.ಈ ಮೂಲಕ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ವಿಷಯದಲ್ಲಿ ಸಂತ್ರಸ್ಥರಿಗೆ ಸಿಗುವ ಪರಿಹಾರವನ್ನು ನೀಡಲು ಸಹಾ ಅಧಿಕಾರಿಗಳು ಯಾವುದೇ ಮುತುವರ್ಜಿ ತೋರಿರುವುದು ಕಾಣಿಸುತ್ತಿಲ್ಲ. ಯಾರಿಗೂ ಕೇಂದ್ರ ಸರಕಾರದ ಮಾರ್ಗದರ್ಶಿ ಸೂತ್ರ ಹಾಗೂ ಕಾನೂನು ಇರುವುದೇ ಗೊತ್ತಿಲ್ಲ ಎಂದು ಉಗ್ರಪ್ಪ ಆರೋಪಿಸಿದರು.

ಈ ಬಗ್ಗೆ ಜಿಲ್ಲೆಯ ಎಲ್ಲಾ ಇಲಾಖೆಗಳ ಅದಿಕಾರಿಗಳು ಸಂಪೂರ್ಣ ಮಾಹಿತಿಯನ್ನು ಒದಗಿಸಲು ವಿಫಲರಾಗಿದ್ದಾರೆ ಎಂಬುದು ಸಮಿತಿ ಸದಸ್ಯರ ಅಭಿಪ್ರಾಯವಾಗಿದೆ. ಇದನ್ನು ಸರಿಪಡಿಸುವ, ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಕೆಲಸವಾಗಬೇಕು ಎಂದು ಅವರು ನುಡಿದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ವಿಧಾನಪರಿಷತ್ ಸದಸ್ಯರಾದ ಕೆ.ಬಿ. ಶಾಣಪ್ಪ, ಶರಣಪ್ಪ ಮಟ್ಟು, ವಿನಿಶಾ ನೀರೊ, ಸದಸ್ಯರಾದ ಲೇಖಕಿ ಡಾ.ವಸುಂಧರಾ ಭೂಪತಿ, ಜನವಾದಿ ಮಹಿಳಾ ವೇದಿಕೆಯ ಎ.ಎಸ್.ವಿಮಲ, ಎಚ್.ಆರ್.ರೇಣುಕಾ, ಪ್ರಭಾ ಎನ್., ಪ್ರಫುಲ್ಲಾ ಮಧುಕರ್, ಉಡುಪಿ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್., ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X