Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ತಹಶೀಲ್ದಾರ್‌ರಿಂದ ಶ್ಲಾಘನೀಯ...

ಕಾರ್ಕಳ ತಹಶೀಲ್ದಾರ್‌ರಿಂದ ಶ್ಲಾಘನೀಯ ಕೆಲಸ: ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ27 May 2016 7:21 PM IST
share
ಕಾರ್ಕಳ ತಹಶೀಲ್ದಾರ್‌ರಿಂದ ಶ್ಲಾಘನೀಯ ಕೆಲಸ: ಪ್ರಮೋದ್ ಮಧ್ವರಾಜ್

ಕಾರ್ಕಳ, ಮೇ 27: ಹಳೆಯ ಕಡತಗಳನ್ನು ವಿಲೇವಾರಿ ಮಾಡುವ ಮೂಲಕ ಕಾರ್ಕಳ ತಹಶೀಲ್ದಾರ್ ಶ್ಲಾಘನೀಯ ಕೆಲಸವನ್ನು ಮಾಡಿದ್ದಾರೆ ಎಂದು ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಶುಕ್ರವಾರ ತಾಲೂಕು ಕಚೇರಿಗೆ ಭೇಟಿ ನೀಡಿ, ಕಂದಾಯ ಇಲಾಖೆಗಳ ಕಾರ್ಯವನ್ನು ಪರಿಶೀಲನೆ ನಡೆಸಿದರು.

ನಾನು ಕಾರ್ಕಳಕ್ಕೆ ಬರಬೇಕಾಗಿರಲಿಲ್ಲ. ಎಲ್ಲಿ ತಾಲೂಕು ಕಚೇರಿಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗದೆ, ಜನತೆ ತೊಂದರೆ ಅನುಭವಿಸುತ್ತಿದ್ದಾರೋ ಅಲ್ಲಿಗೆ ನಾನು ತೆರಳಬೇಕಾಗಿತ್ತು. ಆದರೆ ದಿಢೀರ್ ಕಾರ್ಕಳಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ತಹಶೀಲ್ದಾರ್‌ರ ಕಾರ್ಯವೈಖರಿ ಮೆಚ್ಚುವಂತದ್ದು. ಹಳೆಯ ಕಡತಗಳು ಸಮರ್ಪಕವಾಗಿ ವಿಲೇವಾರಿಯಾಗುತ್ತಿರುವುದನ್ನು ಗಮನಿಸಿದ್ದೇನೆ ಎಂದು ಈ ಸಂದರ್ಭ ಮೆಚ್ಚುಗೆ ವ್ಯಕ್ತಪಡಿಸಿದರು.

94ಸಿ ಅರ್ಜಿ

94 ಸಿ ಮತ್ತು 94ಸಿಸಿ ಅಡಿ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಜಾಗವನ್ನು ಮಂಜೂರು ಮಾಡುವ ಅಧಿಕಾರವಿರುವುದಿಲ್ಲ. ಬದಲಿಗೆ ವಾಸ್ತವ್ಯದ ಮನೆ ಅಡಿಯಲ್ಲಿರುವ ಜಾಗವನ್ನು ಸಕ್ರಮಗೊಳಿಸಲಾಗುತ್ತದೆ. ಅಂಗಳ, ಬಾವಿ ಅದರ ವ್ಯಾಪ್ತಿಗೊಳಪಡುವುದಿಲ್ಲ. ಮನೆಯ ಅಡಿ ಜಾಗ 9 ಸೆಂಟ್ಸ್‌ನಷ್ಟು ಮಂಜೂರು ಮಾಡುವ ಅಧಿಕಾರವಿದೆ. ಈಗಾಗಲೇ 94ಸಿ ಮತ್ತು 94ಸಿಸಿ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳ ಪೈಕಿ ಕುಮ್ಕಿ, ಡೀಮ್ಡ್ ಫಾರೆಸ್ಟ್, ಪರಂಬೊಕು ಮತ್ತು ಗೋಮಾಳದಲ್ಲಿರುವ ಅರ್ಜಿಗಳ ವಿಲೇವಾರಿ ಸಾಧ್ಯವಾಗದು. ಆ ಅರ್ಜಿಗಳನ್ನು ಬಾಕಿಯಿರಿಸಿ ಸರಕಾರಿ ಭೂಮಿಯಲ್ಲಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಅಕ್ರಮ-ಸಕ್ರಮದಡಿ ಅರ್ಜಿ ಸಲ್ಲಿಸಿದ್ದವರ ಪೈಕಿ ಅರ್ಹತೆಯಿದ್ದ ಅರ್ಜಿಗಳನ್ನು ಮಾತ್ರ ಬೈಠಕ್‌ನಲ್ಲಿಟ್ಟು ಮಂಜೂರು ಮಾಡಿ. ಬಾಕಿ ಉಳಿದ ಅರ್ಜಿಗಳನ್ನು ತಿರಸ್ಕರಿಸದೆ ಮುಂದಿನ ದಿನಗಳಲ್ಲಿ ಅವುಗಳ ವಿಲೇವಾರಿಗೆ ಕಾನೂನು ತಿದ್ದುಪಡಿಯಾದ ಸಂದರ್ಭ ಅವಕಾಶ ಕಲ್ಪಿಸಿಕೊಡಿ ಎಂದರು.

ಸರ್ವೇ ವಿಭಾಗದ ಮೇಲೆ ಅಸಮಾಧಾನ

ಸರ್ವೇ ವಿಭಾಗದಲ್ಲಿ ಭಾರೀ ದೂರುಗಳಿವೆ. ಜನತೆ ನಿಮ್ಮನ್ನು ದೂರುತ್ತಿದ್ದಾರೆ. ಕೆಲಸ ಬಾಕಿಯಿರಿಸಿಕೊಳ್ಳದೆ ಜನತೆಗೆ ಸಮರ್ಪಕ ನ್ಯಾಯ ಕೊಡಿ ಎಂದು ಪ್ರಮೋದ್ ಮಧ್ವರಾಜ್ ಸೂಚಿಸಿದರು. ಬಳಿಕ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಭಾಗಗಳಿಗೆ ತೆರಳಿ ಕಡತಗಳನ್ನು ಪರಿಶೀಲನೆ ನಡೆಸಿದರು.

ಕ್ಷೇತ್ರ ತಹಶೀಲ್ದಾರ್ ಎಸ್.ರಾಘವೇಂದ್ರ ಹಾಗೂ ಇಲಾಖೆಯ ಇತರ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭ ಎಡಿಸಿ ಅನುರಾಧ, ಕಾಂಗ್ರೆಸ್ ಮುಖಂಡರಾದ ನೀರೆ ಕೃಷ್ಣ ಶೆಟ್ಟಿ, ಸುಧಾಕರ ಎನ್.ಕೋಟ್ಯಾನ್, ಸುಭಿತ್ ಎನ್.ಆರ್, ಶುಭದ ರಾವ್, ವಿವೇಕಾನಂದ ಶೆಣೈ, ಸುಧಾಕರ ಶೆಟ್ಟಿ ಮುಡಾರು, ಸಂತೋಷ್ ಶೆಟ್ಟಿ ಹಿರ್ಗಾನ, ಅಜಿತ್ ಹೆಗ್ಡೆ ಮಾಳ, ಪ್ರಭಾಕರ ಬಂಗೇರ, ತಾರನಾಥ ಶೆಟ್ಟಿ ಹಿರ್ಗಾನ, ಮಾಲಿನಿ ರೈ ಸಾಣೂರು, ನಳಿನಿ ಆಚಾರ್ಯ ಕಾರ್ಕಳ, ಸಹೀಂ ಅಯ್ಯಪ್ಪ ನಗರ ಮತ್ತಿತರರು ಜತೆಗಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X