Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವನಹಳ್ಳಿ ಸರಕಾರಿ ಪಿಯು ಕಾಲೇಜಿಗೆ...

ಬಸವನಹಳ್ಳಿ ಸರಕಾರಿ ಪಿಯು ಕಾಲೇಜಿಗೆ ಶೇ.92 ಫಲಿತಾಂಶ

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ27 May 2016 10:07 PM IST
share
ಬಸವನಹಳ್ಳಿ ಸರಕಾರಿ ಪಿಯು ಕಾಲೇಜಿಗೆ ಶೇ.92 ಫಲಿತಾಂಶ

ಚಿಕ್ಕಮಗಳೂರು, ಮೇ 27: ದ್ವಿತೀಯ ಪಿಯು ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಬಸವನಹಳ್ಳಿ ಬಾಲಿಕ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು ಶೇ. 92ರಷ್ಟು ಫಲಿತಾಂಶ ನೀಡಿದ್ದು, ನಿಜವಾದ ಸಾಧನೆ ಎಂದು ಎಸ್‌ಡಿಎಂಸಿ ಮತ್ತು ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.

ನಗರದ ಬಸವನಹಳ್ಳಿ ಪಿಯು ಕಾಲೇಜಿನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಪ್ರೋತ್ಸಾಹ ಧನ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ವಾಣಿಜ್ಯ ವಿಭಾಗದಲ್ಲಿ ಎಂ.ಸಿ.ಹರ್ಪಿತಾ 548ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದರೆ, ಎಚ್.ಆರ್.ಪವಿತ್ರಾ 535 ಅಂಕ ಪಡೆದು ದ್ವಿತೀಯ, ಎ.ಆರ್.ಪೂಜಾ 532ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಸಿ.ಎನ್.ವೀಣಾ 525, ಎ.ಎಸ್.ಪೂಜಾ 519, ಪಲ್ಲವಿ 507, ಮತ್ತು ವಾಣಿಜ್ಯ ವಿಭಾಗದಲ್ಲಿ ರೋಜಾ 504 ಅಂಕಗಳನ್ನು ಗಳಿಸಿ ಕ್ರಮವಾಗಿ 7ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 80ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 73ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

224ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 7, ಪ್ರಥಮ 118, ದ್ವಿತೀಯ 46 ಹಾಗೂ 13 ವಿದ್ಯಾರ್ಥಿಗಳು ತೃತೀಯ ಸ್ಥಾನಗಳಿಸಿ ಒಟ್ಟಾರೆ 184ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 3 ಸಾವಿರ , ದ್ವಿತೀಯ 2ಸಾವಿರ ಹಾಗೂ ಉಳಿದ ನಾಲ್ಕು ವಿದ್ಯಾರ್ಥಿಗಳಿಗೆ ತಲಾ 1ಸಾವಿರದಂತೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ಸರಕಾರಿ ಶಾಲೆಗಳು ಎಂದರೆ ಕಡೆಗಣಿಸುವವರಿಗೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತರುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹುಬ್ಬೇರಿಸುವಂತೆ ಮಾಡಿದ್ದಾರೆ. ಖಾಸಗಿ ಕಾಲೇಜುಗಳಿಗೆ ಹೋಲಿಸಿದರೆ ನಮ್ಮ ಶಾಲೆಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಶೇ. 92ರಷ್ಟು ಫಲಿತಾಂಶ ತರುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಬಂದಿರುವುದು ಹೆಮ್ಮೆಯ ವಿಷಯ ಎಂದರು.

 ಈ ಸಂದರ್ಭದಲ್ಲಿ ಪ್ರಾಂಶುಪಾಲೆ ಸಾವಿತ್ರಿ, ಉಪನ್ಯಾಸಕರಾದ ದಯಾನಂದ್, ನಾಗರಾಜ್, ಕಿರಣ್, ಲೋಹಿತ್, ವಿರೂಪಾಕ್ಷ, ಮಹೇಶ್ವರಪ್ಪ, ಲಕ್ಷ್ಮೀಕಾಂತ ನಾಯಕ್, ಧರ್ಮಶೆಟ್ಟಿ, ಶಂಕರ್‌ನಾಯಕ್, ಚಂದ್ರವೌಳಿ, ಜಾನವಿ, ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X