Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಹೃದಯಭಾಗದಲ್ಲೇ ಶಸ್ತ್ರಾಸ್ತ್ರ...

ದಿಲ್ಲಿಯ ಹೃದಯಭಾಗದಲ್ಲೇ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತೇವೆ ಹಿಂದೂ ಸೇನಾ ಸವಾಲು

ವಾರ್ತಾಭಾರತಿವಾರ್ತಾಭಾರತಿ27 May 2016 10:22 PM IST
share

ಹೊಸದಿಲ್ಲಿ, ಮೇ 27: ಬಲಪಂಥೀಯ ಬಜರಂಗದಳ ಸಂಘಟನೆಯ ಕಾರ್ಯಕರ್ತರಿಗೆ ರೈಫಲ್ ಬಳಕೆ, ಖಡ್ಗ ಮತ್ತು ಲಾಠಿ ತರಬೇತಿ ನೀಡಿ ಆತ್ಮರಕ್ಷಣೆಗೆ ಸಜ್ಜುಗೊಳಿಸುವ ಮತ್ತು ಸ್ಕಲ್ ಕ್ಯಾಪ್ ಧರಿಸಿದ ಕಾರ್ಯಕರ್ತರನ್ನು ಹತ್ಯೆ ಮಾಡುವ ವಿಡಿಯೊ ಈ ವಾರದ ಆರಂಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಸ್‌ನಂತೆ ಹಬ್ಬಿತ್ತು. ಆದರೆ ಅದನ್ನು ಅಕ್ಷರಶಃ ನಿಜಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವುದಾಗಿ ಹಿಂದೂ ಸೇನಾ ಘೋಷಿಸಿದೆ.

ದಿಲ್ಲಿ ನಗರದ ಮಧ್ಯಭಾಗದಲ್ಲೇ ಇಂಥ ಸಶಸ್ತ್ರ ತರಬೇತಿ ನೀಡುವುದಾಗಿ ಸವಾಲು ಹಾಕಿದೆ. ಸಂಸತ್ ಭವನದಿಂದ ಕೂಗಳತೆ ದೂರದಲ್ಲಿರುವ ಕನ್ನಾಟ್ ಪ್ಯಾಲೇಸ್ ಪ್ರದೇಶದಲ್ಲೇ ಈ ತರಬೇತಿ ಆಯೋಜಿಸುವುದಾಗಿ ಹಿಂದೂ ಸೇನಾ ಪ್ರಕಟಿಸಿದೆ.
ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತ ಈ ಬಗ್ಗೆ ಹೇಳಿಕೆ ನೀಡಿ, ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಸಲುವಾಗಿ ಈ ತರಬೇತಿ ಎಂದು ಸ್ಪಷ್ಟಪಡಿಸಿದ್ದಾರೆ. ಜೂನ್ 1ರಿಂದ 5ರವರೆಗೆ ಈ ತರಬೇತಿ ನಡೆಯಲಿದೆ. ಆದರೆ ತರಬೇತಿ ನಡೆಯುವ ನಿರ್ದಿಷ್ಟ ಪ್ರದೇಶವನ್ನು ರಹಸ್ಯವಾಗಿ ಇಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿ ಕೂಡಾ ಉಗ್ರಗಾಮಿಯಾಗಬೇಕು, ಇದಕ್ಕಾಗಿ ಸೂಕ್ತ ತರಬೇತಿ ಪಡೆಯಬೇಕು. ಇದು ಯಾರ ಮೇಲಿನ ದಾಳಿಗೂ ನೀಡುತ್ತಿರುವ ತರಬೇತಿಯಲ್ಲ. ಆದರೆ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಸಲುವಾಗಿ ಈ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಬಂದೂಕುಗಳಿಗೆ ಗುರಿಯಾಗಿ ಐಸಿಸ್ ಗೊಂಬೆಗಳನ್ನು ಕೂಡಾ ಸಿದ್ಧಪಡಿಸಲಾಗಿದೆ. 20 ರಿಂದ 30 ವರ್ಷದ ಯುವಕರಿಗೆ ಈ ತರಬೇತಿ ನೀಡಲಾಗುತ್ತದೆ. ಈ ತರಬೇತಿಗಾಗಿ 100ಕ್ಕೂ ಹೆಚ್ಚು ಬಂದೂಕುಗಳನ್ನು ಪಡೆಯಲಾಗಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X