ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೂತನ ತಂತ್ರಜ್ಞಾನ ಅಳವಡಿಸಿ: ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ 27: ಕೃಷಿ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿದಾಗ ಮಾತ್ರ ಕೃಷಿ ಕ್ಷೇತ್ರ ಸಮೃದ್ಧವಾಗಿ ಬೆಳೆಯಲು ಸಾಧ್ಯ ಎಂದು ಸಣ್ಣ ಕೈಗಾರಿಕೆ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ಪೀಣ್ಯ ಮೊದಲನೆ ಹಂತದ ಟೆಕ್ನೊ ಕೈಗಾರಿಕಾ ಘಟಕದಲ್ಲಿ ಜಿಪಿಎಸ್ ಇನ್ಸ್‌ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ ಕೃಷಿ ಮತ್ತು ಲೈಫ್ ಸೈನ್ಸ್ ಪದವೀಧರರ ಕೌಶಲ್ಯಾಭಿವೃದ್ಧಿಗೆ ವಿಶಿಷ್ಟ ಫಿನಿಶಿಂಗ್ ಕೋರ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೃಷಿ ಭೂಮಿಗೆ ರಾಸಾಯನಿಕ ಗೊಬ್ಬರವನ್ನು ಬಳಸುತ್ತಿರುವುದರಿಂದ ಕೃಷಿ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಈ ಕೃಷಿ ಭೂಮಿಗೆ ಸಾವಯವ ಗೊಬ್ಬರ ಹಾಗೂ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರವನ್ನು ಸಮೃದ್ಧವಾಗಿ ಬೆಳೆಸಬೇಕಾಗಿದೆ ಎಂದು ಅಭಿಪ್ರಾಯಿಸಿದರು.
ಸದ್ಯ ರಾಜ್ಯದಲ್ಲಿ ಕೃಷಿ ಕ್ಷೇತ್ರದಲ್ಲಿ 60 ಲಕ್ಷ ಜನ ಕೆಲಸ ಮಾಡುತ್ತಿದ್ದರೆ, ಕೈಗಾರಿಕಾ ಕ್ಷೇತ್ರದಲ್ಲಿ 30ಲಕ್ಷ ಜನ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಜಿಪಿಎಸ್ ಇನ್ಸ್‌ಟಿಟ್ಯೂಟ್‌ನವರು ಕೃಷಿ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಸರಕಾರ ಈ ಇನ್ಸ್‌ಟಿಟ್ಯೂಟ್‌ಗೆ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.ಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಜಿಪಿಎಸ್ ಇನ್ಸ್‌ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷ ಡಾ.ಜಿ.ಪಿ.ಶೆಟ್ಟಿ ಅವರು ಈ ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ, ರೈತರ ಮಕ್ಕಳನ್ನು ಇಲ್ಲಿಗೆ ಕರೆತಂದು ಕೃಷಿ ಶಿಕ್ಷಣ, ಕೃಷಿ ಕ್ಷೇತ್ರಾನುಭವ ಹಾಗೂ ಉದ್ಯೋಗ ಕಲ್ಪಿಸಿಕೊಡುವ ಸಂಕಲ್ಪ ಹೊಂದಿದ್ದಾರೆ ಎಂದು ಹೇಳಿದರು.ಮ್ಯಾನೇಜ್‌ಮೆಂಟ್‌ನಲ್ಲಿ ಶಿಕ್ಷಣ ಪಡೆದ 5 ಸಾವಿರ ವಿದ್ಯಾರ್ಥಿಗಳು ದೇಶ ವಿದೇಶಗಳ ರೈತರ ಬಳಿಗೆ ಹೋಗಿ ಕೃಷಿ ಕ್ಷೇತ್ರದ ಬಗ್ಗೆ ತರಬೇತಿಯನ್ನು ನೀಡುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷ ಶೆಟ್ಟಿ ಅವರು ಪರಿಪೂರ್ಣ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಾರ್ಯಕ್ರಮದಲ್ಲಿ ಜಿಪಿಎಸ್ ಇನ್ಸ್‌ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷ ಡಾ.ಜಿ.ಪಿ.ಶೆಟ್ಟಿ, ಜಬೂತಿ ದೇಶದ ಕೃಷಿ ಸಚಿವ ಮೊಹಮ್ಮದ್ ಅಹ್ಮದ್ ಅವಲೆ ಮತ್ತಿತರರು ಉಪಸ್ಥಿತರಿದ್ದರು. ನೌಕರರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿದೆ: ಸಚಿವ ರಾಮಲಿಂಗಾರೆಡ್ಡಿಬೆಂಗಳೂರು, ಮೇ 27: ರಾಜ್ಯ ಸರಕಾರಿ ನೌಕರರಿಗೆ ಸಮಾನ ವೇತನ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.
ಶುಕ್ರವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕಬ್ಬನ್‌ಪಾರ್ಕ್‌ನ ಎನ್‌ಜಿಓ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಬಿ.ಎಂ.ಪಟೇಲ್‌ಪಾಂಡು ಅವರಿಗೆ ಅಭಿನಂದನೆ ಹಾಗೂ ಕ್ರೀಡಾಪಟುಗಳಿಗೆ ಟ್ರಾಕ್ ಸೂಟ್ಸ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರು ಜೂ.2 ರಂದು ಪ್ರತಿಭಟನೆಗೆ ಕರೆ ನೀಡಿರುವುದು ತಿಳಿದುಬಂದಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ನೌಕರರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಿ.ಪಿಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಪಟೇಲ್‌ಪಾಂಡು ಮತ್ತಿತರರು ಉಪಸ್ಥಿತರಿದ್ದರು.





