Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ತಾಲೂಕಿನಲ್ಲಿ ಡೆಂಗ್ಯೂ ವ್ಯಾಪಕ :...

ಸುಳ್ಯ ತಾಲೂಕಿನಲ್ಲಿ ಡೆಂಗ್ಯೂ ವ್ಯಾಪಕ : ಜನರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ28 May 2016 3:58 PM IST
share
ಸುಳ್ಯ ತಾಲೂಕಿನಲ್ಲಿ ಡೆಂಗ್ಯೂ ವ್ಯಾಪಕ : ಜನರಲ್ಲಿ ಆತಂಕ

  ಸುಳ್ಯ: ಜಿಲ್ಲೆಯ ಇತರ ತಾಲೂಕುಗಳಲ್ಲಿ ಕಾಣಿಸಿಕೊಂಡ ಡೆಂಗ್ಯೂ ಜ್ವರ ಸುಳ್ಯ ತಾಲೂಕಿಗೂ ಕಾಲಿಟ್ಟಿದ್ದು, ಕಳೆದ ಕೆಲವು ದಿನಗಳಿಂದ ನೂರಾರು ಮಂದಿಗೆ ಡೆಂಗ್ಯೂ ಬಾಧಿಸಿದೆ.

   ಅರಂತೋಡು, ತೊಡಿಕಾನ, ಪೆರಾಜೆ, ಮಡಪ್ಪಾಡಿ, ದೇವಚಳ್ಳ, ಪಂಜ, ಮುರುಳ್ಯ, ಎಣ್ಮೂರು, ನೆಲ್ಲೂರು ಕೆಮ್ರಾಜೆ, ಎಡಮಂಗಲ, ಮತ್ತಿತರ ಗ್ರಾಮಗಳಲ್ಲಿ ಜ್ವರ ಮತ್ತು ಶಂಕಿತ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು, ನೂರಕ್ಕೂ ಅಧಿಕ ಮಂದಿಯಲ್ಲಿ ಡೆಂಗ್ಯೂ ಲಕ್ಷಣಗಳು ಕಂಡು ಬಂದಿವೆ. ಕಡು ಬೇಸಿಗೆ ಮಧ್ಯೆ ಬಿಟ್ಟು ಬಿಟ್ಟು ಮಳೆ ಬಂದರೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತದೆ. ಜ್ವರಕ್ಕೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳ ಪ್ರಮಾಣವೂ ಈ ಸಮಯದಲ್ಲಿ ಅಧಿಕವಾಗುತ್ತದೆ. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಿತ್ಯ ರೋಗಿಗಳ ಸರತಿ ಸಾಲು ಮಾಮೂಲಿಯಾಗಿದೆ. ಕನಿಷ್ಠ 70ರಿಂದ 80 ಜ್ವರ ಪೀಡಿತರು ಚಿಕಿತ್ಸೆಗೆ ಬರುತ್ತಿದ್ದು, ಜ್ವರಪೀಡಿತರು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಹಲವರಿಗೆ ಡೆಂಗ್ಯು ಲಕ್ಷಣಗಳು ಕಂಡು ಬಂದಿದೆ . ಹಲವು ಜ್ವರ ಪೀಡಿತರು ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ವರ್ಷ ಕೂಡಾ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ವ್ಯಾಪಕವಾಗಿ ಕಂಡು ಬಂದಿತ್ತು.ಸಾವಿರಾರು ಮಂದಿ ಹಾಸಿಗೆ ಹಿಡಿಯುವಂತೆ ಮಾಡಿತ್ತು. ಈ ವರ್ಷ ಮತ್ತೆ ಡೆಂಗ್ಯೂ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

 ಆತಂಕ ಬೇಡ: ಡಾ.ಸುಬ್ರಹ್ಮಣ್ಯ

   ಡೆಂಗ್ಯೂ ಮಾರಣಾಂತಿಕ ಖಾಯಿಲೆ ಅಲ್ಲ, ಹಾಗಾಗಿ ಆತಂಕ ಬೇಡ. ಆದರೆ ಮುನ್ನೆಚ್ಚರಿಕೆ ಅಗತ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಹೇಳಿದ್ದಾರೆ. ಕಳೆದ ಜನವರಿಯಿಂದ ಮೇ 15ರವರೆಗೆ ತಾಲೂಕಿನಲ್ಲಿ 27 ಡೆಂಗ್ಯೂ ಜ್ವರದ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ಒಟ್ಟು 102 ಶಂಕಿತ ಡೆಂಗ್ಯೂ ಪ್ರಕಣಗಳು ದಾಖಲಾಗಿರುವ ವರದಿ ಬಂದಿದೆ. ಡೆಂಗ್ಯೂ ಹರಡುವುದನ್ನು ತಡೆಯಲು ವ್ಯಾಪಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದ್ದಕ್ಕಿದ್ದಂತೆ ಜ್ವರ, ಹಣೆಯ ಭಾಗದಲ್ಲಿ, ಕಣ್ಣು ಗುಡ್ಡೆಗಳಲ್ಲಿ, ಮಾಂಸ ಖಂಡಗಳಲ್ಲಿ ತೀವ್ರ ನೋವು, ಮೈಮೇಲೆ ಕೆಂಪು ಗಂಧೆಗಳು ಕಾಣಿಸಿಕೊಳ್ಳುವುದು., ಕಣ್ಣು ಕೆಂಪಾಗುವುದು, ವಸಡು, ಮೂಗಿನಲ್ಲಿ ರಕ್ತಸ್ರಾವ, ಕೆಂಪಾದ ಮೂತ್ರ, ಮಲ ಕಪ್ಪಾಗಿರುವುದು ಡೆಂಗ್ಯೂ ಲಕ್ಷಣಗಳು. ಈ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು. ತಕ್ಷಣ ರೋಗ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ನೀಡಿದಾಗ ಡೆಂಗ್ಯೂ ಜ್ವರ ನಿಯಂತ್ರಿಸಬಹುದು. ಜ್ವರ ಬಾಧಿತರಿಗೆ ಸ್ವಲ್ಪ ಸಮಯ ಪೂರ್ಣ ವಿಶ್ರಾಂತಿ ಅಗತ್ಯ ಎಂದವರು ಹೇಳಿದರು. ಸೊಳ್ಳೆಗಳನ್ನು ನಿಯಂತ್ರಿಸುವ ಮೂಲಕ ಡೆಂಗ್ಯೂ ಜ್ವರ ಹರಡುವುದನ್ನು ನಿಯಂತ್ರಿಸಬಹುದು. ಮನೆ, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದು, ಘನತ್ಯಾಜ್ಯ ವಿಲೇವಾರಿ, ನೀರು ಸಂಗ್ರಹಿಸುವ ಟ್ಯಾಂಕಿ ಮುಚ್ಚಳವನ್ನು ಭದ್ರ ಮಾಡುವುದು, ನೀರು ಸಂಗ್ರಹವಾಗುವ ವಸ್ತುಗಳಾದ ಗೆರಟೆ, ಟಯರ್, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಇತ್ಯಾದಿಗಳನ್ನು ಎಲ್ಲೆಂದರಲ್ಲಿ ಎಸೆಯದೇ ನೀರು ನಿಲ್ಲದಂತೆ ಮಾಡುವುದು. ಈ ಮೂಲಕ ಸೊಳ್ಳೆಗಳು ಉತ್ಪನ್ನವಾಗದಂತೆ ತಡೆಯಬಹುದು. ಡೆಂಗ್ಯೂ ಜ್ವರ ಕಂಡು ಬಂದರೆ ಹಗಲು ಹೊತ್ತಿನಲ್ಲಿ ಸೊಳ್ಳೆ ಪರದೆ ಬಳಕೆ ಮಾಡುವುದು, ಮಕ್ಕಳು, ಗರ್ಭಿಣಿಯರು, ವಯಸ್ಸಾದವರು ಸೊಳ್ಳೆ ಪರದೆ ಬಳಕೆಯನ್ನು ಕಡ್ಡಾಯ ಮಾಡುವುದು, ಮುನ್ನೆಚ್ಚರಿಕೆಯ ಕ್ರಮವಾಗಿ ಆರೋಗ್ಯ ಇಲಾಖೆ ನೀಡುವ ಫಾಗಿಂಗ್, ಟಮೋಪಾಸ್ ರಾಸಾಯನಿಕ ಸಿಂಪಡಣೆ ಮಾಡುವುದರಿಂದ ಸೊಳ್ಳೆಗಳ ಉತ್ಪಾದನೆ ತಡೆಗಟ್ಟಬಹುದು ಎಂದು ಡಾ . ಸುಬ್ರಹ್ಮಣ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X