ಮೇ 29ರಂದು ಪಿ.ಎಫ್.ಐ. ಪಾಣೆಮಂಗಳೂರು ಏರಿಯಾದಿಂದ ರಕ್ತದಾನ ಶಿಬಿರ

ಬಂಟ್ವಾಳ, ಮೇ 28: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಪಾಣೆಮಂಗಳೂರು ಏರಿಯಾ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 29ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30ರ ವರೆಗೆ ಇಲ್ಲಿನ ಅಕ್ಕರಂಗಡಿ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತ ದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎಫ್.ಐ. ಪಾಣೆಮಂಗಳೂರು ಏರಿಯಾ ಅಧ್ಯಕ್ಷ ಅಬ್ದುಲ್ ಖಾದರ್ ಪಿ.ಜೆ. ವಹಿಸಲಿದ್ದು, ಪಿ.ಎಫ್.ಐ. ಜಿಲ್ಲಾ ಸಮಿತಿ ಅಧ್ಯಕ್ಷ ಝಕರಿಯಾ ಗೊಳ್ತಮಜಲ್ ಉದ್ಘಾಟಿಸಲಿದ್ದಾರೆ. ಅಕ್ಕರಂಗಡಿ ಜುಮಾ ಮಸೀದಿ ಖತೀಬರಾದ ಇಸ್ಮಾಯೀಲ್ ದಾರಿಮಿ ದುಅ ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಧಾರ್ಮಿಕ, ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





