Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳಾ ದೌರ್ಜನ್ಯ ತಡೆಗೆ ಸಮಿತಿ ರಚನೆ:...

ಮಹಿಳಾ ದೌರ್ಜನ್ಯ ತಡೆಗೆ ಸಮಿತಿ ರಚನೆ: ಉಗ್ರಪ್ಪ

ವಾರ್ತಾಭಾರತಿವಾರ್ತಾಭಾರತಿ28 May 2016 10:34 PM IST
share
ಮಹಿಳಾ ದೌರ್ಜನ್ಯ ತಡೆಗೆ ಸಮಿತಿ ರಚನೆ: ಉಗ್ರಪ್ಪ

ಕಾರವಾರ, ಮೇ 28: ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆ ಯರ ಮೇಲೆ ನಡೆಯುವ ಲೈಂಗಿಕ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿಗಳ ಮಟ್ಟದಲ್ಲಿ ಸಮಿತಿ ರಚಿಸುವಂತೆ ನಿಯಮ ರೂಪಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿಯ ರಾಜ್ಯಾಧ್ಯಕ್ಷ ಉಗ್ರಪ್ಪಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈವರೆಗೂ ಬಹುತೇಕ ಇಲಾಖೆಗಳ ಕಚೇರಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚನೆ ಆಗದಿರುವುದು ಖೇದಕರ ಎಂದು ಹೇಳಿದರು.

ಇತ್ತೀಚೆಗೆ ದೇಶದ ಎಲ್ಲೆಡೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕಾನೂನು ಬಿಗಿಯಾಗಿದ್ದರೂ ಅಪಧಿರಾಗಳು ತಪ್ಪಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ತನಿಖಾಕಾಧಿ ಕಾರಿಗಳು ಸೂಕ್ತ ಕ್ರಮಕೈಗೊಳ್ಳದಿರುವುದು ಕಾರಣ ಎಂದರು.

   ಈ ವರೆಗೆ ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಕೇವಲ ಶೇ. 5ರಷ್ಟು ಪ್ರಕರಣಗಳ ಮಾತ್ರ ಆರೋಪಿಗೆ ಶಿಕ್ಷೆ ಆಗಿದೆ. ರಾಷ್ಟ್ರಮಟ್ಟದಲ್ಲಿ ಈ ಸಂಖ್ಯೆ ಇನ್ನೂ ಕಡಿಮೆ ಇದೆ. ಈ ರೀತಿ ಅಪರಾಧಿಗಳಿಗೆ ರಕ್ಷಣೆ ಪಡೆಯಲು ಅವಕಾಶ ಕೊಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ಅಪರಾಧಿಗೂ ಕಠಿಣ ಶಿಕ್ಷೆಯಾಗುವ ನಿಟ್ಟಿ ನಲ್ಲಿ ತನಿಖಾಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದರು.

ಕಾನೂನು ತಿಳಿದಿರಲಿ: ನಮ್ಮಲ್ಲಿ ಬಹುತೇಕ ತನಿಖಾಕಾಧಿರಿಗಳಿಗೆ ಕ್ರಿಮಿನಲ್ ಪ್ರೊಸೀಜರ್ ಕೋಡ್ ಬಗ್ಗೆ ಅರಿವೇ ಇಲ್ಲ. ಇದರಿಂದಾಗಿ ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗುತ್ತಿದೆ. ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನೊಂದವರಿಗೆ ಗರಿಷ್ಠ 5 ಲಕ್ಷ ರೂ. ವರೆಗೂ ವೈದ್ಯಕೀಯ ನೆರವು ನೀಡಲು ಅವಕಾಶವಿದೆ. ಆದರೆ ರಾಜ್ಯದಲ್ಲಿ ನಡೆದ ಬಹುತೇಕ ಪ್ರಕರಣಗಳಲ್ಲಿ ಈ ನಿಯಮಗಳನ್ನು ಪಾಲನೆ ಮಾಡಿರುವುದು ಸಮಿತಿಯ ಗಮನಕ್ಕೆ ಬಂದಿಲ್ಲ ಎಂದರು.

 ಉಗ್ರಪ್ಪನವರ ಸೂಚನೆಯ ಮೇರೆಗೆ ಜಿಲ್ಲಾಧಿಕಾರಿ ಉಜ್ವಲ್‌ಕುಮಾರ ಘೋಷ್ ಜಿಲ್ಲೆಯಲ್ಲಿ ಲಿಂಗಾನುಪಾತದ ವಿವರಗಳನ್ನು ಸಭೆಗೆ ತಿಳಿಸಿದರು. 2011ರ ಗಣತಿಯ ಪ್ರಕಾರ ಜಿಲ್ಲೆಯಲ್ಲಿ ಪ್ರತಿ 1000 ಪುರುಷರಿಗೆ 979 ಸ್ತ್ರೀಯರಿದ್ದಾರೆ. ಆದರೆ 0-6 ವರ್ಷದ ಮಕ್ಕಳಲ್ಲಿ ಲಿಂಗಾನುಪಾತ ಕಡಿಮೆ ಇದೆ. ಪ್ರತಿ 1000 ಗಂಡು ಮಕ್ಕಳಿಗೆ 955 ಹೆಣ್ಣು ಮಕ್ಕಳಿದ್ದಾರೆ ಎಂದರು.

ಜಿಲ್ಲಾಧಿಕಾರಿ ವಿವರಣೆಯಿಂದ ಸಂತ್ರಪ್ತರಾಗದ ಉಗ್ರಪ್ಪ, ನೀವು ನನಗೆ ಕೊಟ್ಟ ದಾಖಲೆಗಳಲ್ಲಿ ಬೇರೆಯದೇ ವಿವರಣೆ ಇದೆ. ಇದರಲ್ಲಿ 0-6 ವರ್ಷಗಳ ಮಕ್ಕಳಲ್ಲಿ ಲಿಂಗಾನುಪಾತ ಸಾವಿರಕ್ಕೆ 933 ಇದೆ ಎಂದು ತೋರಿಸಿದ್ದೀರಿ. ಇನ್ನೊಂದೆಡೆ ಸಾವಿರಕ್ಕೆ 955 ಎಂದು ತಿಳಿಸುತ್ತಿದ್ದೀರಿ ಎಂದು ಆಕ್ಷೇಪಿಸಿದರು.

ಜಿಲ್ಲೆಯ ಹಿಂದುಳಿದ ತಾಲೂಕು ಜೋಯಿಡಾದಲ್ಲಿ ಲಿಂಗಾನುಪಾತ ಸಾವಿರಕ್ಕೆ 1,048 ಇದೆ. ಆದರೆ ಮುಂಡಗೋಡದಲ್ಲಿ ಹೆಚ್ಚು ಹೆರಿಗೆಗಳು ಆಸ್ಪತ್ರೆಗಳಲ್ಲೇ ಆಗುತ್ತಿದ್ದರೂ ಲಿಂಗಾನುಪಾತ 848 ಇದೆ. ಇಷ್ಟೊಂದು ವ್ಯತ್ಯಾಸವಾಗಿರುವುದಕ್ಕೆ ಏನಾದರೂ ಕ್ರಮ ಕೈಗೊಂಡಿದ್ದೀರಾ ಎಂದು ಜಿಲ್ಲಾ ಆರೋಗ್ಯಾಕಾರಿ ಡಾ. ಅಶೋಕ ಕುಮಾರ್ ಅವರನ್ನು ಉಗ್ರಪ್ಪ ಪ್ರಶ್ನಿಸಿದರು.

   ಇದಕ್ಕೆ ಉತ್ತರಿಸಿದ ಅಶೋಕ್ ಕುಮಾರ್ ಮದರ್ ಚೈಲ್ಡ್ ಟ್ರಾಕಿಂಗ್ ಸಿಸ್ಟಮ್ ಪ್ರಕಾರ ಪರಿಶೀಲನೆ ನಡೆಸತ್ತಿದ್ದೇವೆ. ಆದರೆ ಕೆಲ ಗರ್ಭಿಣಿ ಮಹಿಳೆಯರು ಹೆರಿಗೆಗೆ ಹೊರ ಊರಿನಲ್ಲಿರುವ ತವರು ಮನೆಗೆ ಹೋಗುವುದರಿಂದ ವಿವರಗಳು ಲಭ್ಯವಾಗುತ್ತಿಲ್ಲ ಎಂದರು. ಈ ಉತ್ತರದಿಂದ ಗರಂ ಆದ ಉಗ್ರಪ್ಪ, ಸರಕಾರ ಗರ್ಭಿಣಿ ಮಹಿಳೆಯರಿಗೆ ನಾನಾ ರೀತಿಯ ಸವಲತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಸವಲತ್ತುಗಳು ದುರ್ಬಳಕೆಯಾಗದಂತೆ ಹೆರಿಗೆ ವರದಿಯನ್ನು ತರಿಸಿಕೊಳ್ಳುವುದು ನಿಮ್ಮ ಕರ್ತವ್ಯ ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ನಡೆದ ಅತ್ಯಾಚಾರಗಳ ಕುರಿತು ಸರಿಯಾದ ಮಾಹಿತಿ ಕಲೆ ಹಾಕುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಸಭೆಯಲ್ಲಿ ಸಮಿತಿಯ ಸದಸ್ಯರಾದ ರೇಣುಕಾ, ಶರಣಪ್ಪಮಟ್ಟೂರ, ಡಾ. ವಸುಂದರಾ ಭೂಪತಿ, ಜಿ ಪಂ ಮುಖ್ಯ ಕಾರ್ಯ ನಿರ್ವಹಣಾಕಾರಿ ರಾಮಪ್ರಸಾತ್ ಮನೋಹರ್ ಮತ್ತಿತರ ಅಧಿಕಾರಿಗಳು ಉಪಸ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X