Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತ್ತಿಬ್ಬರ ಶಾಮೀಲಾತಿ ಶಂಕೆ:...

ಮತ್ತಿಬ್ಬರ ಶಾಮೀಲಾತಿ ಶಂಕೆ: ಜಿಲ್ಲಾಧಿಕಾರಿ ಮೀರ್ ಅನೀಸ್

<ನಗರಸಭೆ ಹಣ ದುರುಪಯೋಗ ಪ್ರಕರಣ<

ವಾರ್ತಾಭಾರತಿವಾರ್ತಾಭಾರತಿ28 May 2016 10:36 PM IST
share
ಮತ್ತಿಬ್ಬರ ಶಾಮೀಲಾತಿ ಶಂಕೆ: ಜಿಲ್ಲಾಧಿಕಾರಿ ಮೀರ್ ಅನೀಸ್

ಮಡಿಕೇರಿ, ಮೇ 28: ನಗರಸಭೆಯಲ್ಲಿ ನಡೆದಿರುವ ಅಂಗಡಿ ಮಳಿಗೆಗಳ ಬಾಡಿಗೆ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪ ಎದುರಿಸುತ್ತಿರುವ ಇಬ್ಬರು ಬಿಲ್‌ಕಲೆಕ್ಟರ್‌ಗಳಲ್ಲದೆ ಇನ್ನೂ ಇಬ್ಬರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ತಿಳಿಸಿದ್ದಾರೆ.

ನಗರಸಭೆಗೆ ಭೇಟಿ ನೀಡಿ ವಿವಿಧ ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ದಾಖಲೆ ಪತ್ರಗಳನ್ನು ಸಮಗ್ರವಾಗಿ ಪರಿಶೀಲಿಸಲಾಗಿದ್ದು, ಕೆಲವೊಂದು ನ್ಯೂನತೆಗಳು ಗೋಚರಿಸಿವೆ ಎಂದರು.

ಈಗಾಗಲೇ ಪ್ರಕರಣವನ್ನು ಎದುರಿಸುತ್ತಿರುವ ಇಬ್ಬರು ಆರೋಪಿಗಳೊಂದಿಗೆ ಮತ್ತಿಬ್ಬರು ಶಾಮೀಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸರಕಾರ ಮಟ್ಟದ ಲೆಕ್ಕ ಪರಿಶೋಧಕರು ಲೆಕ್ಕ ಪರಿಶೋಧನೆ ನಡೆಸಿ ವರದಿ ನೀಡಿದ ಬಳಿಕವಷ್ಟೇ ದುರುಪಯೋಗವಾಗಿರುವ ಹಣ ಮತ್ತು ಇನ್ನಿಬ್ಬರು ಸಿಬ್ಬಂದಿಯ ಪಾತ್ರವಿದೆಯೇ ಎನ್ನವುದು ಸ್ಪಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಶಂಕೆ ವ್ಯಕ್ತವಾಗಿರುವ ಇಬ್ಬರು ಸಿಬ್ಬಂದಿಯನ್ನು ವಿಚಾರಣೆಗೆ ಒಳ ಪಡಿಸಲಾಗುವುದು. ಅವರು ತೆರಿಗೆ ವಸೂಲಾತಿಗೆ ಬಳಸುತ್ತಿದ್ದ ನಗರಸಭೆಯ ಅಸಲಿ ಹಾಗೂ ನಕಲಿ ರಶೀದಿ ಪುಸ್ತಕಗಳನ್ನು ಲೆಕ್ಕಪರಿಶೋಧಕರ ಮೂಲಕ ತನಿಖೆಗೆ ಒಳಪಡಿಸಲಾಗಿದೆ ಎಂದರು.

ವಂಚನೆಗೊಳಗಾದ ವರ್ತಕರು ಮತ್ತು ವಾಣಿಜ್ಯೋದ್ಯಮಿಗಳು ಲಿಖಿತವಾಗಿ ಆಧಾರ ಸಹಿತ ದೂರು ನೀಡಿದರೆ ಕ್ರಮ ಜರಗಿಸಲಾಗುವುದು. ದೂರುದಾರರು ನೀಡುವ ರಶೀದಿಗಳನ್ನು ತನಿಖೆ ವೇಳೆ ಸೂಕ್ಷ್ಮವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದರು. ಬಿಲ್ ಕಲೆಕ್ಟರ್‌ಗಳಾದ ಸಜಿತ್ ಕುಮಾರ್ ಹಾಗೂ ಸ್ವಾಮಿ ಎಂಬವವರು ವ್ಯವಸ್ಥಿತವಾಗಿ ಹಣ ದುರುಪಯೋಗಪಡಿಸಿದ ಪ್ರಕರಣ ಬಯಲಿಗೆ ಬಂದ ನಂತರ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತನಿಖಾ ತಂಡ ನೀಡಿದ ವರದಿಯ ಆಧಾರದಲ್ಲಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ತೆರಿಗೆ ಸಂಗ್ರಹಕ್ಕೆ ಸೂಚನೆ

ಸುದೀರ್ಘ ಅವಧಿಯ ನಗರಸಭೆಯಲ್ಲಿ ಕಡತಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು ತೆರಿಗೆ ಸಂಗ್ರಹದಲ್ಲಿ ಹಿಂದೆ ಬೀಳದಂತೆ ಅಗತ್ಯ ಕಾಳಜಿ ವಹಿಸಲು ಪೌರಾಯುಕ್ತೆ ಪುಷ್ಪಾವತಿ ಅವರಿಗೆ ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತಿತರ ಕಂದಾಯವನ್ನು ಸಂಗ್ರಹಣೆ ಮಾಡಿ ಅಭಿವೃದ್ಧಿಯತ್ತ ಸಾಗಬೇಕು. ನಗರಾಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಪ್ರವಾಸಿಗರಿಗೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ವಾಹನಗಳ ದಟ್ಟಣೆ ಅಧಿಕವಾಗುತ್ತಿದ್ದು, ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕಿದೆ ಎಂದರು.

 ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ ಅವರು ನಗರಸಭೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ತಾಹಿರಾ, ಜಿಲ್ಲಾಧಿಕಾರಿ ಕಚೇರಿಯ ಷಣ್ಮುಖ ಮತ್ತಿತರರು ಹಾಜರಿದ್ದರು.

ಜಿಲ್ಲಾ ಪ್ರವಾಸೋದ್ಯಮ ಅಧಿಕಾರಿ (ಪ್ರಭಾರ)ಗೋಪಾಲಕೃಷ್ಣ ಬೇಕಲ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X