Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಾಮಕರಣದ ಬದಲು ಅರ್ಹತೆಯ ತೊಟ್ಟಿಲು...

ನಾಮಕರಣದ ಬದಲು ಅರ್ಹತೆಯ ತೊಟ್ಟಿಲು ತೂಗಿದರೆ?

ರಾಜಾರಾಂ ತಲ್ಲೂರುರಾಜಾರಾಂ ತಲ್ಲೂರು29 May 2016 12:35 AM IST
share
ನಾಮಕರಣದ ಬದಲು ಅರ್ಹತೆಯ ತೊಟ್ಟಿಲು ತೂಗಿದರೆ?

ರಾಜ್ಯಸಭೆಗೆ ಕರ್ನಾಟಕದಿಂದ ಕನ್ನಡಿಗರಲ್ಲದವರನ್ನು ಆಯ್ದು ಕಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಜೊತೆಗೆ, ಕರ್ನಾಟಕ ವಿಧಾನ ಪರಿಷತ್ತಿಗೂ ಖಾಲಿಯಾಗಿರುವ ಸ್ಥಾನಗಳ ಭರ್ತಿಗಾಗಿ ಚುನಾವಣೆ ? ನಾಮಕರಣ ನಡೆಯುವುದಿದೆ. ಈ ಅರ್ಹತೆಗಳ ಚರ್ಚೆಯ ಹಿನ್ನೆಲೆಯಲ್ಲಿ, ಕರ್ನಾಟಕ ವಿಧಾನ ಪರಿಷತ್ತನ್ನು ಗಮನಿಸೋಣ.
ಕರ್ನಾಟಕ ವಿಧಾನ ಪರಿಷತ್ತಿಗೆ ನಾಮಕರಣ ಸದಸ್ಯರನ್ನು ಆಯ್ಕೆ ಮಾಡುವುದಕ್ಕೆ ಮಾನದಂಡದ ನಿಯಮಗಳು ಹೀಗನ್ನುತ್ತವೆ: ‘‘ರಾಜ್ಯಪಾಲರಿಂದ ನಾಮನಿರ್ದೇಶಿತರಾಗಬೇಕಾದ ಸದಸ್ಯರು ಕೆಳಕಂಡ ವಿಷಯಗಳಿಗೆ ಸಂಬಂಧಿಸಿದಂತೆ ಎಂದರೆ,- ಸಾಹಿತ್ಯ, ವಿಜ್ಞಾನ, ಕಲೆ, ಸಹಕಾರ ಚಳವಳಿ ಮತ್ತು ಸಮಾಜ ಸೇವೆಗಳಲ್ಲಿ ವಿಶೇಷ ಜ್ಞಾನವನ್ನು ಅಥವಾ ವ್ಯಾವಹಾರಿಕ ಅನುಭವವನ್ನು ಪಡೆದವರಾಗಿರತಕ್ಕದ್ದು.’’
ಈ ನಿಯಮಗಳ ಹೊರತಾಗಿಯೂ ಬಕೇಟು ಹಿಡಿಯುವ ಒಂದು ಅರ್ಹತೆ ಬಿಟ್ಟರೆ, ಉಳಿದ ಅರ್ಹತೆಗಳಿಗೆ ವಿಧಾನ ಪರಿಷತ್ತಿನಲ್ಲಿ ಅವಕಾಶ ಸಿಕ್ಕಿದ್ದು ಬಹಳ ಕಡಿಮೆ ಎಂಬುದು ವಾಸ್ತವ. ಆಳುವ ಪಕ್ಷ ಮತ್ತು ರಾಜ್ಯಪಾಲರ ಮರ್ಜಿಗಳನ್ನು ಆಧರಿಸಿಯೇ ಈ ನಾಮಕರಣ ನಡೆಯುತ್ತಾ ಬಂದಿದೆ. ಹೀಗೆ ಆಯ್ಕೆ ಆಗಿ ಬಂದವರ ಸದನ ಚಟುವಟಿಕೆಗಳೂ ಬಹಳ ಸೀಮಿತ ಎಂಬುದು ಅನುಭವ.
ಈ ರೀತಿಯ ಮಾಯಕದಿಂದ ಯಾರನ್ನೋ ತರುವ ಬದಲು, ನಿಯಮಾನುಸಾರ ಮತ್ತು ಸಮಕಾಲೀನ ಪರಿಸ್ಥಿತಿಗೆ ಅನುಗುಣವಾದ ಬೇರೆ ಇತರ ಕ್ಷೇತ್ರಗಳಿಂದಲೂ ಜನರಿಂದ ಚುನಾಯಿತರಾದವರಿಗೆ ಯಾಕೆ ವಿಧಾನ ಪರಿಷತ್ತಿನಲ್ಲಿ ನಾಮಕರಣದ ಅವಕಾಶ ಸಿಗಬಾರದು?


ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕರ್ನಾಟಕ ವಾಣಿಜ್ಯ ಚೇಂಬರ್ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಚೇಂಬರ್ ಅಧ್ಯಕ್ಷರು, ಕರ್ನಾಟಕ ಬಾರ್ ಕೌನ್ಸಿಲ್ ಅಧ್ಯಕ್ಷರು, ಕರ್ನಾಟಕ ಚಾರ್ಟರ್ಡ್ ಅಕೌಂಟಂಟ್ಸ್ ಕೌನ್ಸಿಲಿನ ಅಧ್ಯಕ್ಷರು, ರಾಜ್ಯ ಸರಕು ವಾಹನ ಮಾಲಕರ ಸಂಘದ ಅಧ್ಯಕ್ಷರು, ಸರಕಾರಿ ನೌಕರರ ಮಹಾ ಮಂಡಲದ ಅಧ್ಯಕ್ಷರು, ರಾಜ್ಯ ಕಾರ್ಮಿಕ ಸಂಘಗಳ ಫೆಡರೇಷನ್ ಮುಖ್ಯಸ್ಥರು, ಮಹಿಳಾ ಮಂಡಲ ಒಕ್ಕೂಟಗಳ ರಾಜ್ಯಾಧ್ಯಕ್ಷರು, ಸ್ವಸಹಾಯ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷರು? ಹೀಗೆ ಚುನಾಯಿತ ಪದಾಧಿಕಾರಿಗಳಿರುವ ರಾಜ್ಯಮಟ್ಟದ ಸಂಘಟನೆಗಳ ಚುನಾಯಿತ ಅಧ್ಯಕ್ಷರು ಅಥವಾ ಆ ಸಂಸ್ಥೆ ನಾಮನಿರ್ದೇಶನ ಮಾಡಿರುವ ಸಂಘದ ಪ್ರತಿನಿಧಿ ಯಾಕೆ ವಿಧಾನ ಪರಿಷತ್ತಿಗೆ ನಾಮಕರಣ ಗೊಳ್ಳಬಾರದು?
ಇದರಿಂದ ಕೆಲವು ಲಾಭಗಳಿವೆ. ಒಂದು, ಇಲ್ಲಿಂದ ವಿಧಾನ ಮಂಡಲ ಹೊಕ್ಕುವ ಅವಕಾಶ ಇದೆಯೆಂದಾದರೆ, ಪ್ರಭಾವಿ ನಾಯಕರೂ ಈ ಸಂಘಟನೆಗಳಲ್ಲಿ ಸಕ್ರಿಯರಾಗಿ, ಸಂಘಟನೆಗಳು ಬಲಗೊಳ್ಳಬಹುದು (ಅಥವಾ ಇನ್ನಷ್ಟು ರಾಡಿಗೊಳ್ಳಲೂ ಬಹುದು!) ಎರಡನೆಯದಾಗಿ, ತಾವು ಪ್ರತಿನಿಧಿಸುತ್ತಿರುವ ಸಂಘಟನೆಗಳ ಬೇಡಿಕೆಗಳು, ಸಮಸ್ಯೆಗಳು ಈ ಪ್ರತಿನಿಧಿಗಳಿಗೆ ಚೆನ್ನಾಗಿ ತಿಳಿದಿರುವುದರಿಂದ, ವಿಧಾನ ಪರಿಷತ್ತಿನಲ್ಲಿ ಅವರ ಸಮಸ್ಯೆಗಳ ಬಗ್ಗೆ ಚರ್ಚೆಗಳೂ ಅರ್ಥಪೂರ್ಣವಾಗುವ ಅವಕಾಶಗಳಿವೆ. ಮೂರನೆಯದಾಗಿ, ಈ ಸಂಘಟನೆಗಳು ಈ ಅವಕಾಶದ ಕಾರಣಕ್ಕೆ ಇನ್ನಷ್ಟು ವ್ಯವಸ್ಥಿತವಾಗಿ ರೂಪುಗೊಳ್ಳುತ್ತವೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಬಕೆಟ್ ಹಿಡಿಯುವ, ದುಡ್ಡಿನ ಥೈಲಿಯ ರಾಜಕೀಯ ‘‘ನಾಮಕರಣದ’’ ವಿಷಯದಲ್ಲಿ ಹಿನ್ನಡೆ ಕಾಣಲಿದೆ.
ಹಾಲಿ ವಿಧಾನ ಪರಿಷತ್ತಿನಲ್ಲಿ 75 ಸದಸ್ಯರಿದ್ದು, ಅವರಲ್ಲಿ 25ಮಂದಿ ಚುನಾಯಿತ ವಿಧಾನ ಸಭಾ ಸದಸ್ಯರಿಂದಲೂ, 25 ಮಂದಿ ಸ್ಥಳೀಯಾಡಳಿತ ಸಂಸ್ಥೆಗಳಿಂದಲೂ, 7ಮಂದಿ ಪದವೀಧರ ಕ್ಷೇತ್ರಗಳಿಂದಲೂ, 7ಮಂದಿ ಶಿಕ್ಷಕ ಕ್ಷೇತ್ರಗಳಿಂದಲೂ ವಿಧಾನ ಪರಿಷತ್ತಿಗೆ ಆಯ್ಕೆ ಆಗುತ್ತಾರೆ. ಉಳಿದ 11 ಮಂದಿ ರಾಜ್ಯಪಾಲರಿಂದ ನಾಮಕರಣಗೊಳ್ಳಬೇಕಿದ್ದು, ಆ ಹನ್ನೊಂದು ಮಂದಿಯನ್ನು ಯಾಕೆ ಹನ್ನೊಂದು ರಾಜ್ಯಮಟ್ಟದ ಪ್ರಾತಿನಿಧಿಕ ಸಂಘಟನೆಗಳ ಪ್ರತಿನಿಧಿಗಳ ರೂಪದಲ್ಲಿ ನಾಮಕರಣ ಮಾಡಬಾರದು?
ಒಂದು ವೇಳೆ, ಇಂತಹ ವ್ಯವಸ್ಥೆಯಿಂದ ಎಲ್ಲ ಜನವರ್ಗಗಳಿಗೆ ಪ್ರಾತಿನಿಧ್ಯ ಸಿಗುವುದಿಲ್ಲ ಎಂದಾದರೆ, ಅಂತಹ ಜನವರ್ಗಗಳಿಗೂ ರಾಜ್ಯಮಟ್ಟದಲ್ಲಿ ಸಂಘಟನೆ ರೂಪಿಸಿ, ಅವರ ಪ್ರತಿನಿಧಿಗಳನ್ನು ಆಯ್ಕೆ ಮಾಡಬಹುದು. ಒಂದು ವೇಳೆ ಅರ್ಹ ಸಂಘಟನೆಗಳ ಸಂಖ್ಯೆ ಹೆಚ್ಚಿದ್ದಲ್ಲಿ ರೊಟೇಷನ್ ಮೇಲೆ ಅವಕಾಶ ಕೊಡಬಹುದು.

share
ರಾಜಾರಾಂ ತಲ್ಲೂರು
ರಾಜಾರಾಂ ತಲ್ಲೂರು
Next Story
X