Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಶೇ.30 ಚಾಲನಾ ಪರವಾನಿಗೆ...

ಭಾರತದಲ್ಲಿ ಶೇ.30 ಚಾಲನಾ ಪರವಾನಿಗೆ ನಕಲಿ: ಗಡ್ಕರಿ

ವಾರ್ತಾಭಾರತಿವಾರ್ತಾಭಾರತಿ29 May 2016 8:56 PM IST
share
ಭಾರತದಲ್ಲಿ ಶೇ.30 ಚಾಲನಾ ಪರವಾನಿಗೆ ನಕಲಿ: ಗಡ್ಕರಿ

ಹೊಸದಿಲ್ಲಿ, ಮೇ 29: ಭಾರತದಲ್ಲಿ ಪ್ರತಿ ಮೂರರಲ್ಲಿ ಒಂದು ವಾಹನ ಚಾಲನಾ ಪರವಾನಿಗೆ ನಕಲಿಯಾಗಿದೆ. ಬರೋಬ್ಬರಿ 5 ಕೋಟಿಗೂ ಹೆಚ್ಚು ಜನರು ನಕಲಿ ದಾಖಲೆಗಳೊಂದಿಗೆ ರಸ್ತೆಗಳಲ್ಲಿ ವಾಹನ ಚಲಾಯಿಸುತ್ತಿದ್ದಾರೆಂದು ಅಧಿಕೃತ ಮಾಹಿತಿ ತಿಳಿಸಿದೆ.

ಆದರೆ, ಖೋಟಾ ಚಾಲನಾ ಪರವಾನಿಗೆ ಹೊಂದಿರುವವರು ಶೀಘ್ರವೇ ಒಂದು ವರ್ಷದ ವರೆಗೆ ಜೈಲು ಶಿಕ್ಷೆ ಹಾಗೂ ರೂ. 10 ಸಾವಿರದಷ್ಟು ಭಾರೀ ದಂಡ ತೆರಬೇಕಾಗಬಹುದು. ಇದು ಈಗಿರುವ ದಂಡ ಪ್ರಸ್ತಾವ ರೂ. 500 ಹಾಗೂ ಮೂರು ತಿಂಗಳ ಗೃರಿಷ್ಠ ಕಾರಾಗೃಃ ವಾಸಕ್ಕಿಂತ ಅತಿ ಹೆಚ್ಚಾಗಿದೆ.

ಅಪ್ರಾಪ್ತ ವಯಸ್ಕರು ಚಾಲನೆ ಮಾಡುವ ಸಂದರ್ಭದಲ್ಲಿ ವಾಹನದ ಮಾಲಕ ಅಥವಾ ಪಾಲಕರು ಮೂರು ವರ್ಷಗಳ ತನಕ ಜೈಲು ಶಿಕ್ಷೆ ಹಾಗೂ ರೂ.20 ಸಾವಿರದ ವರೆಗೆ ದಂಡವನ್ನು ತೆರಬೇಕಾಗಬಹುದು. ಅವರ ವಾಹನದ ನೋಂದಣಿ ಪ್ರಮಾಣ ಪತ್ರವನ್ನೂ ರದ್ದುಗೊಳಿಸಲಾಗುವುದು.

 ಭಾರತದಲ್ಲಿ ಶೇ.30ರಷ್ಟು ಚಾಲನಾ ಪರವಾನಿಗೆಗಳು ನಕಲಿಯಾಗಿವೆ. ಅದನ್ನು ತಪಾಸಣೆ ಮಾಡುವ ಅಗತ್ಯವಿದೆ. ತಾವು ಡ್ರೈವಿಂಗ್ ಲೈಸನ್ಸ್ ಪಡೆಯುವುದಕ್ಕೆ ಗಣಕೀಕೃತ ಪರೀಕ್ಷೆ ನಡೆಸುವ ಆನ್‌ಲೈನ್ ವ್ಯವಸ್ಥೆಯೊಂದನ್ನು ಆರಂಭಿಸಲಿದ್ದೇವೆ. ಪ್ರತಿಯೊಬ್ಬನೂ ಆತ ರಾಜಕಾರಣಿಯಿರಲಿ, ಅಧಿಕಾರಿಯಿರಲಿ ಅಥವಾ ಖ್ಯಾತನಾಮನಿರಲಿ-ಚಾಲನಾ ಪರವಾನಿಗೆ ಪಡೆಯಲು ಪರೀಕ್ಷೆ ತೆಗೆದುಕೊಳ್ಳಲೇ ಬೇಕು. ಅದರಲ್ಲಿ ಸಂಪೂರ್ಣ ಪಾರದರ್ಶಕತೆಯಿರುತ್ತದೆಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪಿಟಿಐಗೆ ತಿಳಿಸಿದ್ದಾರೆ.

ಸಚಿವಾಲಯವು ಸುಮಾರು 18 ಕೋಟಿ ಪರವಾನಿಗೆಗಳ ಮಾಹಿತಿ ಸಂಗ್ರಹಿಸಿದೆ. ಅವುಗಳಲ್ಲಿ ಅಂದಾಜು 5.4 ಕೋಟಿಯಷ್ಟು ‘ನಕಲಿ’ ವರ್ಗದವುಗಳಾಗಿವೆ. ಅವುಗಳ ತಪಾಸಣೆ ನಡೆಸುವ ಅಗತ್ಯವಿದೆಯೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಹಿಂದೆ ಸರಕಾರ ನಡೆಸಿದ್ದ ಸುಮಾರು 6 ಕೋಟಿ ಚಾಲನಾ ಪರವಾನಿಗೆಗಳ ಸಮೀಕ್ಷೆಯಲ್ಲಿ ಸುಮಾರು 74 ಲಕ್ಷ ಪರವಾನಿಗೆಗಳು ನಕಲಿಯಾಗಿದ್ದವು.

ರಸ್ತೆ ಸಾರಿಗೆ ಮತ್ತು ಸುರಕ್ಷಾ ಮಸೂದೆಯು ಭಾರತದ ರಸ್ತೆಗಳನ್ನು ಸುರಕ್ಷಿತವಾಗಿಸಲು ಅತಿ ಮುಖ್ಯವಾಗಿದೆಯೆಂದು ಹೇಳಿದ ಗಡ್ಕರಿ, ಅಂದಾಜು 1.5 ಲಕ್ಷ ಜನರು ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. ಪ್ರಸ್ತಾವಿತ ಕಾನೂನು ಚಾಲನಾ ಪರವಾನಿಗೆ ನೀಡಿಕೆ ಸಹಿತ ಸಂಪೂರ್ಣ ವ್ಯವಸ್ಥೆಯನ್ನು ಸುಧಾರಿಸಲಿದೆ ಎಂದಿದ್ದಾರೆ.

ಈ ಮಸೂದೆಯು ಮುಂದಿನ ಸಂಸತ್ ಅಧಿವೇಶನದಲ್ಲಿ ಮಂಜೂರಾಗುವ ಆಶಾವಾದವಿದೆ.ಪ್ರಾದೇಶಿಕ ಸಾರಿಗೆ ಸಂಸ್ಥೆಗಳ ‘ಸ್ಥಾಪಿತ ಹಿತಾಸಕ್ತಿಗಳು’ ವಿರೋಧದಿಂದಾಗಿ ಅದು ವಿಳಂಬವಾಗುತ್ತಿದೆಯೆಂದು ಅವರು ಆರೋಪಿಸಿದ್ದಾರೆ.

ಗಣಕೀಕರಣದ ಜೊತೆಗೆ 5 ಸಾವಿರ ಹೊಸ ಚಾಲನಾ ಕೇಂದ್ರಗಳನ್ನು ಆರಂಭಿಸುವ ಯೋಜನೆ ಸರಕಾರಕ್ಕಿದೆ. ರಾಜಸ್ಥಾನದ ಸಾರಿಗೆ ಸಚಿವ ಯೂನುಸ್ ಖಾನ್ ನೇತೃತ್ವದ ಸಚಿವ ಮಂಡಳಿಯೊಂದು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ದಂಡವನ್ನು ಪ್ರಸ್ತಾವಿಸಿರುವ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಅಂತಿಮ ವರದಿ ಮುಂದಿನ ತಿಂಗಳು ಸಲ್ಲಿಸಲ್ಪಡಬಹುದೆಂದು ನಿರೀಕ್ಷಿಸಲಾಗಿದೆ. ಆ ಬಳಿಕ ಮಸೂದೆಯು ಸಂಸತ್ತಿನಲ್ಲಿ ಮಂಜೂರಾಗಬೇಕೆಂದು ಗಡ್ಕರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X