ಸರಕಾರಿ ಉದ್ಯೋಗಕ್ಕೆ ಆದ್ಯತೆ ನೀಡಿ:ಕೋಡಿಜಾಲ್

ಮಂಗಳೂರು, ಮೇ 30: ಮುಸ್ಲಿಮ್ ಸಮುದಾಯದ ಯುವಕ-ಯುವತಿಯರು ಐಟಿ, ವೈದ್ಯಕೀಯ, ಇಂಜಿನಿಯರ್, ಗಲ್ಫ್ ಉದ್ಯೋಗಕ್ಕೆ ಹಾತೊರೆಯದೆ ಸರಕಾರಿ ಉದ್ಯೋಗಕ್ಕೆ ಆದ್ಯತೆ ನೀಡಬೇಕು, ವಿಶೇಷವಾಗಿ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸಮುದಾಯ ಮತ್ತು ಸಮಾಜದ ಉನ್ನತಿಗಾಗಿ ಶ್ರಮಿಸಬೇಕು ಎಂದು ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಹೇಳಿದರು.
ಏಸ್ (ಎಸಿಇ) ಫೌಂಡೇಶನ್ ವತಿಯಿಂದ ನಗರದ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಆಯೋಜಿಸಲಾದ ‘ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ’ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಸೈಯದ್ ಅಮೀನ್ ಅಹ್ಮದ್, ಅರವಿಂದ ಚೊಕ್ಕಾಡಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ಸಾದುದ್ದೀನ್ ಸಾಲಿಹ್ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್.ಬಶೀರ್, ಪಿ.ಬಿ.ಎ.ರಝಾಕ್, ಅಬೂಬಕರ್ ಸಿದ್ದೀಕ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಝೀರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಇಮ್ತಿಯಾಝ್ ಖತೀಬ್ ವಂದಿಸಿದರು.
Next Story





