Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೇಷನ್ ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್:...

ರೇಷನ್ ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ30 May 2016 8:49 PM IST
share
ರೇಷನ್ ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್: ದಿನೇಶ್ ಗುಂಡೂರಾವ್

ಬೆಂಗಳೂರು, ಮೇ 30: ಪಡಿತರ ಚೀಟಿ ವಿತರಣೆ ಮಾಡುವ ನಿಯಮ ಸಡಿಲಿಕೆ ಮಾಡಿದರೆ ನಕಲಿ ಮತ್ತು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
 ಸೋಮವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಆಯೋಜಿಸಿದ್ದ ನಗರದ ಕೊಳಗೇರಿ ಸಮಸ್ಯೆಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಡ್ ವಿತರಣೆ ಮಾಡುವ ನಿಯಮದಲ್ಲಿ ಸಡಿಲಿಕೆ ಮಾಡಿದರೆ ಅನೇಕ ಜನ ನಕಲಿ ಮತ್ತು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹಾಗಾಗಿ ನಿಯಮ ಸಡಿಲಿಕೆಯಲ್ಲಿ ಯಾವುದೇ ರಾಜಿಯಿಲ್ಲ. ಕಾರ್ಡ್ ವಿತರಣೆ ಮಾಡುವಲ್ಲಿ ಭ್ರಷ್ಟಾಚಾರ ಮತ್ತು ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದು ಸೇರಿದಂತೆ ಇತರೆ ತೊಂದರೆಗಳನ್ನು ನೀಡಿದರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಮಾಹಿತಿ ಕೊರತೆ ಇರುವ ಅನೇಕ ಪಡಿತರ ಚೀಟಿಗಳನ್ನು ಅನರ್ಹಗೊಳಿಸಲಾಗಿದೆ. ಇಂತವರು ಮತ್ತೆ ಹೊಸ ಅರ್ಜಿಗಳನ್ನು ನೀಡಿ ಪಡೆಯಬಹುದು. ಇದರಿಂದ ನಕಲಿ ಮತ್ತು ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ನೀಡಿದವರ ಕಾರ್ಡ್‌ಗಳು ಅನರ್ಹಗೊಳಿಸುವುದಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ರಾಜಣ್ಣ ಮಾತನಾಡಿ, ರೇಷನ್ ಕಾರ್ಡ್ ಮತ್ತು ಆಹಾರ ಪೂರೈಕೆ ಮಾಡುವಲ್ಲಿ ಯಾವುದೇ ಸಮಸ್ಯೆ ಉಂಟಾದರೆ ಉಚಿತ ಕರೆ 1967 ಗೆ ಕರೆ ಮಾಡಿ ತಕ್ಷಣವೇ ನಿಮ್ಮ ಸಮಸ್ಯೆಗೆ ಪರಿಹಾರ ಮಾಡಲಾಗುತ್ತಿದೆ. ನಿಮ್ಮ ರೇಷನ್ ಕಾರ್ಡ್‌ಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡಿಸಿ ಪ್ರತಿ ತಿಂಗಳ 2 ತಾರೀಖಿನಂದು ನಿಮಗೆ ಎಷ್ಟು ಪ್ರಮಾಣದಲ್ಲಿ ಧಾನ್ಯ ನೀಡಲಾಗುತ್ತದೆ ನೀವು ಎಷ್ಟು ಹಣ ತೆಗೆದುಕೊಂಡು ಹೋಗಬೇಕು ಎಂದು ಸಂದೇಶ ಬರುತ್ತದೆ ಈ ಎಲ್ಲಾ ಸೌಲಭ್ಯಗಳನ್ನು ಬಳಕೆ ವಾಡಿಕೊಳ್ಳಿ ಎಂದು ಮನವಿ ಮಾಡಿದರು.
 ಯಾವುದೇ ಯೋಜನೆಗಳನ್ನು ಆರಂಭ ಮಾಡುವಾಗ ಪ್ರಾರಂಭಿಕ ಸಮಸ್ಯೆಗಳು ಇರುತ್ತವೆ. ಆದರೆ, ನಂತರ ಸಮಸ್ಯೆಗಳು ಪರಿಹಾರವಾಗುತ್ತವೆ. ಹಾಗಾಗಿ ಯಾರೂ ಸಹ ಬಯೋಮೆಟ್ರಿಕ್ ವ್ಯವಸ್ಥೆಯನ್ನು ದೂರಬೇಡಿ. ಇದರಿಂದ ಅನಧಿಕೃತ ಮತ್ತು ನಕಲಿ ಕಾರ್ಡ್‌ಗಳನ್ನು ನಿಲ್ಲಿಸುವುದಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
 ಸಂಘಟನೆ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎಸ್.ಲೀಲಾವತಿ ಅವರು ಕೊಳಗೇರಿಗಳ ಸಮಸ್ಯೆಗಳ ಬಗ್ಗೆ ಮಾತನಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ವಸತಿ ಸಮುಚ್ಚಯಗಳನ್ನು ನಿರ್ಮಿಸಿ ಮೂಲಸೌಕರ್ಯ ಕಲ್ಪಿಸುತ್ತದೆ. ಆದರೆ, ನೀರಿನ ಸಂಪರ್ಕ ಪಡೆಯಬೇಕಾದರೆ ಜಲಮಂಡಳಿಗೆ ಏಕ ಕಂತಿನ ಶುಲ್ಕವನ್ನು ಪಾವತಿಸಬೇಕು. ಈ ಶುಲ್ಕ ಪಾವತಿಸುವಷ್ಟು ಶಕ್ತಿ ಮಂಡಳಿಗೆ ಇಲ್ಲದೇ ಇರುವುದರಿಂದ ನೀರಿನ ಸಂಪರ್ಕ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಸಮುಚ್ಚಯಗಳಲ್ಲಿ ಪ್ರತಿಯೊಂದು ಮನೆಗೂ ಮೀಟರ್‌ಅಳವಡಿಸುವ ಬದಲು, ಬ್ಲಾಕ್‌ಗೆ ಒಂದು ಮೀಟರ್‌ಅಳವಡಿಸಬೇಕು. ಬಿಲ್ ಮೊತ್ತವನ್ನು ಎಲ್ಲರಿಗೂ ಸಮನಾಗಿ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಕೊಳಗೇರಿ ನಿವಾಸಿಗಳ ಅಭಿವೃದ್ಧಿ ಮುಖ್ಯಸ್ಥ ಮಹ್ಮದ್ ಆರೀಫ್, ಇಂಜನಿಯರ್ ರಕುಮಾರ್, ತಹಸೀಲ್ದಾರ್ ಗೀತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೂಪನ್ ವ್ಯವಸ್ಥೆ ಜಾರಿ..
ಪಡಿತರ ವಿತರಣೆ ಸೋರಿಕೆ ತಡೆಗಟ್ಟಲು ಮತ್ತು ಪಾರದರ್ಶಕ ಪಡಿತರ ವಿತರಣೆಗಾಗಿ ಸರಕಾರ ಬಯೋಮೆಟ್ರಿಕ್ ಕೂಪನ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಜೂ.1ರಿಂದ ಸೀಮೆಎಣ್ಣೆ ವಿತರಣೆಗೆ ಕೂಪನ್‌ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಜುಲೈ ತಿಂಗಳಲ್ಲಿ ಆಹಾರ ಧಾನ್ಯಗಳ ವಿತರಣೆಗೂ ಕೂಪನ್ ವ್ಯವಸ್ಥೆ ಜಾರಿಗೊಳಿಸುವ ಚಿಂತಿಸಲಾಗಿದೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರು ಒನ್ ಅಥವಾ ಸೈಬರ್ ಕೇಂದ್ರಗಳಲ್ಲಿ ಕೂಪನ್ ಪಡೆಯಬಹುದು. ಜತೆಗೆ, ನಿಮ್ಮ ಮೊಬೈಲ್ಗೆ ಕೂಪನ್‌ಕೋಡ್ ಸಂಖ್ಯೆಯನ್ನು ಕಳುಹಿಸಲಾಗುತ್ತದೆ. ಅದನ್ನು ತೋರಿಸಿ ಪಡಿತರ ಪಡೆದುಕೊಳ್ಳಬಹುದು ಎಂದರು.
 ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ ವಿತರಿಸಲು ವಾರ್ಷಿಕ 2 ಸಾವಿರ ಕೋಟಿ ವೆಚ್ಚವಾಗುತ್ತಿದೆ. ಈಗ ಪ್ರತಿ ಯುನಿಟ್‌ಗೆ ಹೆಚ್ಚುವರಿಯಾಗಿ ಒಂದು ಕೆ.ಜಿ. ಅ್ಕಕಿಯನ್ನು ನೀಡಿದರೆ ಒಂದೂವರೆ ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಒಬ್ಬರು ಅಥವಾ ಇಬ್ಬರು ಇರುವ ಕುಟುಂಬಗಳಿಗೆ 12 ಕೆ.ಜಿ. ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X