Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

<ನಾಲ್ವರಲ್ಲಿ ಡೆಂಗ್ ಜ್ವರ ಪತ್ತೆ<

ವಾರ್ತಾಭಾರತಿವಾರ್ತಾಭಾರತಿ30 May 2016 10:11 PM IST
share

ಶಿವಮೊಗ್ಗ, ಮೇ 30: ಜಿಲ್ಲೆಯ ಸೊರಬ ತಾಲೂಕಿನ ಶಕುನವಳ್ಳಿ ಸಮೀಪದ ಕಲ್ಲಂಡೆ ಗ್ರಾಮದಲ್ಲಿ ನಾಲ್ವರಲ್ಲಿ ಡೆಂಗ್ ಜ್ವರ ಕಾಣಿಸಿಕೊಂಡಿದೆ. ಜ್ವರಕ್ಕೆ ತುತ್ತಾದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಪ್ರಸ್ತುತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿಯವರು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಕಲ್ಲಂಡೆ ಗ್ರಾಮದಲ್ಲಿ ಇತ್ತೀಚೆಗೆ ಏಳೆಂಟು ಜನರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ರವಾನಿಸಲಾಗಿತ್ತು. ಪರೀಕ್ಷೆಯಲ್ಲಿ ನಾಲ್ವರು ಡೆಂಗ್ ಜ್ವರ ಬಾಧೆಯಿಂದ ಬಳಲುತ್ತಿರುವುದು ಪತ್ತೆಯಾಗಿತ್ತು. ಇವರನ್ನು ಸಾಗರ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆ ಕೊಡಿಸಲಾಗಿತ್ತು. ಡೆಂಗ್ ಜ್ವರಕ್ಕೆ ತುತ್ತಾದ ಎಲ್ಲರೂ ಇದೀಗ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಲ್ಲಂಡೆ ಗ್ರಾಮದಲ್ಲಿ ವ್ಯಾಪಕ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಆರೋಗ್ಯ ಶಿಬಿರ ಆಯೋಜಿಸುವುದರ ಜೊತೆಗೆ ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗಿದೆ. ಪ್ರಸ್ತುತ ಈ ಗ್ರಾಮದಲ್ಲಿ ಯಾವುದೇ ಹೊಸ ಡೆಂಗ್ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು, ಆರಗ ಮೊದಲಾದೆಡೆ ಕೆಲವರು ಶಂಕಿತ ಕೆಎಫ್‌ಡಿ (ಮಂಗನ ಕಾಯಿಲೆ)ಯಿಂದ ಬಳಲುತ್ತಿದ್ದರು. ಇವರ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ ವೇಳೆ, ಮಂಗನ ಕಾಯಿಲೆ ಇಲ್ಲದಿರುವುದು ತಿಳಿದುಬಂದಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಳೆದ ವರ್ಷ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ 140 ಕೆ.ಎಫ್.ಡಿ. ಪ್ರಕರಣಗಳು ಪತ್ತೆಯಾಗಿದ್ದವು. ಪ್ರಸ್ತುತ ವರ್ಷ ಇಲ್ಲಿಯವರೆಗೂ ಕೇವಲ 12 ಪ್ರಕರಣಗಳು ವರದಿಯಾಗಿವೆ. ಕಾಯಿಲೆಯು ಸಂಪೂರ್ಣ ನಿಯಂತ್ರಣದಲ್ಲಿದೆ. ಇಲಾಖೆಯು ಈ ಎರಡೂ ತಾಲೂಕು ವ್ಯಾಪ್ತಿಗಳಲ್ಲಿ ಕೆಎಫ್‌ಡಿ ರೋಗದ ಬಗ್ಗೆ ನಿರಂತರವಾಗಿ ಜಾಗೃತಿ ಅಭಿಯಾನ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದು ಇದೇ ಸಂದರ್ಭದಲ್ಲಿ ಡಾ. ರಾಜೇಶ್ ಸುರಗೀಹಳ್ಳಿಯವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X