Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಉತ್ತಮ ಆರೋಗ್ಯ ಸೌಲಭ್ಯಗಳಿಂದ ಆರೋಗ್ಯವಂತ...

‘ಉತ್ತಮ ಆರೋಗ್ಯ ಸೌಲಭ್ಯಗಳಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ’

ಉಚಿತ ವೈದ್ಯಕೀಯ ಬೃಹತ್ ಶಿಬಿರ

ವಾರ್ತಾಭಾರತಿವಾರ್ತಾಭಾರತಿ30 May 2016 10:16 PM IST
share

ಚಿಕ್ಕಮಗಳೂರು, ಮೇ 30: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯಗಳು ದೊರೆತರೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಷಡಕ್ಷರಿಸ್ವಾಮಿ ಹೇಳಿದ್ದಾರೆ.

ಅವರು ರೋಟರಿ ಕಾಫಿಲ್ಯಾಂಡ್ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಸಹಯೋಗದೊಂದಿಗೆ ಎಂಇಎಸ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಉಚಿತ ವೈದ್ಯಕೀಯ ಬೃಹತ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಯಂ ಸೇವಾ ಸಂಸ್ಥೆಗಳು ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.

 ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಅಮಿತ್, ಡಾ.ಗೌತಮ್, ಡಾ.ಲಕ್ಷ್ಮೀಪತಿ, ಡಾ.ಆಕಾಶ್‌ಬಾಬು, ಡಾ.ರೈನಾ ಸೇರಿದಂತೆ 17 ವೈದ್ಯರನ್ನೊಳಗೊಂಡ 31ಜನರ ತಂಡ 550ಕ್ಕೂ ಹೆಚ್ಚು ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿತು. ಕೆಲವು ಕಾಯಿಲೆಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಲಾಯಿತು. ಹೆಚ್ಚಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಅಗತ್ಯವಿರುವ ಸುಮಾರು 200ರೋಗಿಗಳಿಗೆ ಕೆಂಪು ಕಾರ್ಡ್‌ಗಳನ್ನು ಶಿಬಿರದಲ್ಲಿ ವಿತರಿಸಲಾಯಿತು. ಕಾರ್ಡ್ ಹೊಂದಿದವರಿಗೆ ಮಂಗಳೂರು ಆಸ್ಪತ್ರೆಯಲ್ಲಿ ರಿಯಾಯಿತಿ ನೀಡುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ಹೇಳಿದ್ದು, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಚಿಕಿತ್ಸೆಯ ಭರವಸೆ ನೀಡಿದೆ ಎಂದು ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ಎಸ್.ಎನ್.ಸಚ್ಚಿದಾನಂದ ತಿಳಿಸಿದರು. ಉಪಾಧ್ಯಕ್ಷ ಆರ್.ನಾಗೇಂದ್ರ, ಖಜಾಂಚಿ ಎನ್.ಎಸ್.ನಾಗೇಂದ್ರ, ಸದಸ್ಯರಾದ ಡಾ.ಶ್ರೀಧರ್, ಡಾ.ವಿಮಲ್‌ಜೈನ್, ಡಾ.ಶೇಷಾದ್ರಿ, ಮಾಜಿ ಅಧ್ಯಕ್ಷ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಶಿಬಿರ ನಿರ್ದೇಶಕ ಡಾ.ಎಂ.ಜೆ.ಸೂರಜ್ ಸ್ವಾಗತಿಸಿ, ಕಾರ್ಯದರ್ಶಿ ವಿವೇಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X