ಆಕ್ರಮಣ ತಡೆಗೆ ಒತ್ತಾಯಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಕಾಸರಗೋಡು, ಮೇ 30: ಬಿಜೆಪಿ ಕಾರ್ಯಕರ್ತರ ಮೇಲೆ ಸಿಪಿಎಂ ಮತ್ತು ಮುಸ್ಲಿಮ್ ಲೀಗ್ ಕಾರ್ಯಕರ್ತರು ಆಕ್ರಮಣ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಸಮಿತಿಯು ಸೋಮವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿತು.
ಪಕ್ಷದ ರಾಷ್ಟ್ರೀಯ ಸಮಿತಿಯ ಸದಸ್ಯ ಸಿ.ಕೆ.ಪದ್ಮನಾಭನ್ ಧರಣಿಯನ್ನು ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು.
ಪಕ್ಷದ ರಾಜ್ಯ ಉಪಾಧ್ಯಕ್ಷೆ ಪ್ರಮೀಳಾ ಸಿ.ನಾಯಕ್, ಕುಂಟಾರು ರವೀಶ ತಂತ್ರಿ ಪಿ.ರಮೇಶ್, ಸುರೇಶ್‌ಕುಮಾರ್ ಶೆಟ್ಟಿ ಮತ್ತಿತರರು ನೇತೃತ್ವ ವಹಿಸಿದ್ದರು.
ಇದಕ್ಕೂ ಮೊದಲು ವಿದ್ಯಾನಗರ ಸರಕಾರಿ ಕಾಲೇಜು ಪರಿಸರದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದವರೆಗೆ ಮೆರವಣಿಗೆ ನಡೆಸಲಾಯಿತು.
Next Story





