Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಗವಿಕಲರ ಶಾಲೆಗಳ ಬೇಡಿಕೆ ಈಡೇರಿಕೆಗೆ...

ಅಂಗವಿಕಲರ ಶಾಲೆಗಳ ಬೇಡಿಕೆ ಈಡೇರಿಕೆಗೆ ಒತ್ತಾಯ: ಸಚಿವೆ ಉಮಾಶ್ರೀಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ31 May 2016 10:10 PM IST
share

ಚಿಕ್ಕಮಗಳೂರು, ಮೇ 31: ಅಂಗವಿಕಲರ ಶಾಲೆಗಳ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆಶಾಕಿರಣ ಅಂಧ ಮಕ್ಕಳ ಶಾಲೆಯ ಮುಖ್ಯಸ್ಥ ಡಾ.ಜೆ.ಪಿ.ಕೃಷ್ಣೇಗೌಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀಗೆ ಮನವಿ ಸಲ್ಲಿಸಿದ್ದಾರೆ.

ಅವರು ಈ ಕುರಿತು ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಂಗವಿಕಲರಿಗಾಗಿ ದುಡಿಯುತ್ತಿರುವ ಸುಮಾರು 150ಸ್ವಯಂ ಸೇವಾ ಸಂಸ್ಥೆಗಳಿದ್ದು, ಅವುಗಳಲ್ಲಿ 35ಸಂಸ್ಥೆಗಳು ರಾಜ್ಯ ಅನುದಾನಕ್ಕೆ ಒಳಪಟ್ಟಿವೆ. ಈ ಸಂಸ್ಥೆಗಳಲ್ಲಿ ಸುಮಾರು 2,500ಉದ್ಯೋಗಿಗಳು ಅಂಗವಿಕಲರ ಏಳಿಗೆಗಾಗಿ ಅಹರ್ನಿಷಿ ದುಡಿಯುತ್ತಿದ್ದಾರೆ. ಇವರಲ್ಲಿ ಬಹುತೇಕ ಅಂಗವಿಕಲ ವರ್ಗಕ್ಕೆ ಸೇರಿದವರಾಗಿದ್ದಾರೆ. ಈ ಉದ್ಯೋಗಿಗಳಿಗೆ ಬೇರೆ ಯಾವುದೇ ಆದಾಯದ ಮೂಲಗಳಿಲ್ಲ. ಸಂಸ್ಥೆಗಳು ಫಲಾನುಭವಿಗಳಿಂದ ಯಾವುದೇ ಶುಲ್ಕ, ದೇಣಿಗೆಯನ್ನು ಪಡೆಯದೆ ಉಚಿತವಾಗಿ ಶಿಕ್ಷಣ ಮತ್ತು ತರಬೇತಿ ನೀಡುತ್ತಿವೆ ಎಂದಿದ್ದಾರೆ.

ಅಂಗವಿಕಲರ ಶಾಲೆಗಳಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗೆ ಆರೋಗ್ಯ ವಿಮೆ ಜಾರಿಗೊಳಿಸಬೇಕು. 2006 ಎ 1ರ ನಂತರ ಸೇವೆಗೆ ಸೇರಿದ ಎಲ್ಲ ಉದ್ಯೋಗಿಗಳಿಗೆ ನೂತನ ಪಿಂಚಣಿ ಅಳವಡಿಸಬೇಕು ಹಾಗೂ ಉದ್ಯೋಗಿಗಳಿಗೆ ಎಚ್‌ಆರ್‌ಎಂಎಸ್ ಮೂಲಕ ವೇತನ ಸೆಳೆಯಲು ಅವಕಾಶ ನೀಡಬೇಕು. 2007ರಿಂದ ಈಚೆಗೆ ಅನುದಾನ ಪಡೆಯುತ್ತಿರುವ ಸಂಸ್ಥೆಗಳಿಗೆ ಜಾರಿಗೊಂಡಿರುವ ಶಿಶು ಕೇಂದ್ರಿತ ಅನುದಾನಕ್ಕೆ ಬದಲಾಗಿ 1982ರ ಅನುದಾನ ಸಂಹಿತೆಯ ಪ್ರಕಾರ ಅಂಗವಿಕಲರ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ತಿಳಿಸಿದ್ದಾರೆ.

ಅಂಗವಿಕಲರ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ನೀಡಬೇಕು. ಅಂಗವಿಕಲರ ವಸತಿ ಶಾಲೆಗಳ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯನ್ನು ವಿಸ್ತರಿಸಬೇಕು. ಅಂಧಮಕ್ಕಳ ಪ್ರೌಢ ಶಾಲೆಗಳಿಗೆ ವೃತ್ತಿ ಶಿಕ್ಷಕ, ಸಂಗೀತ ಶಿಕ್ಷಕ, ದೈಹಿಕ ಶಿಕ್ಷಕ, ಕಂಪ್ಯೂಟರ್ ಶಿಕ್ಷಕ, ಚಲನವಲನ ತರಬೇತಿ ಶಿಕ್ಷಕ, ಭಾಷಾವಾರು ಶಿಕ್ಷಕರು, ವಾಚ್‌ಮನ್ ಹಾಗೂ ಸ್ವೀಪರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಂಗವಿಕಲರ ಶಾಲೆಗಳಲ್ಲಿನ ಫಲಾನುಭವಿಗಳ ನಿರ್ವಹಣಾ ವೆಚ್ಚ 1,000 ರೂ. ಗಳಿಂದ 1,500 ರೂ. ಗೆ ಹೆಚ್ಚಿಸಬೇಕು. ಪ್ರಸ್ತುತ ಅಂಗವಿಕಲರ ಸಂಸ್ಥೆಗಳಿಗೆ ವಾರ್ಷಿಕ 7,050 ರೂ. ಸಾದಿಲ್‌ವಾರು ವೆಚ್ಚ ನೀಡುತ್ತಿರುವುದನ್ನು ಕನಿಷ್ಠ 1 ಲಕ್ಷ ರೂ. ಗೆ ಹೆಚ್ಚಿಸಬೇಕು ಎಂದಿದ್ದಾರೆ.

ಸರಕಾರದ ವ್ಯಾಪ್ತಿಯಲ್ಲಿ ಏಕೈಕ ಬ್ರೈಲ್ ಮುದ್ರಣಾಲಯ ಮೈಸೂರಿನಲ್ಲಿದ್ದು, ಸಕಾಲದಲ್ಲಿ ಪುಸ್ತಕಗಳು ಪೂರೈಕೆಯಾಗುತ್ತಿಲ್ಲ. ಆದ್ದರಿಂದ ಉತ್ತರ ಕರ್ನಾಟಕದಲ್ಲಿಯು ಬ್ರೈಲ್ ಮುದ್ರಣಾಲಯ ಘಟಕ ತೆರೆದು ಅನುಕೂಲ ಮಾಡಿಕೊಡಬೇಕು. ಅಂಗವಿಕಲರಿಗೆ ನೀಡುತ್ತಿರುವ ಮಾಸಾಶನದ ತಾರತಮ್ಯವನ್ನು ಹೋಗಲಾಡಿಸಿ ಎಲ್ಲ ಅಂಗವಿಕಲರಿಗೂ ತಿಂಗಳಿಗೆ ಕನಿಷ್ಠ 1,500 ರೂ. ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X